ಅಂಬೇಡ್ಕರ್‌, ಗಾಂಧೀಜಿ ಮೇಲೆ ಬಸವಣ್ಣನವರ ಪ್ರಭಾವ


Team Udayavani, Jun 27, 2019, 3:00 AM IST

ambedka

ಹುಣಸೂರು: ಬಸವಣ್ಣನವರ ಆಶಯಗಳು ಈಡೇರಿದ್ದರೆ ಜಾತಿಯತೆ, ಭ್ರಷ್ಟಾಚಾರಕ್ಕೆ ಅವಕಾಶವಿರುತ್ತಿರಲಿಲ್ಲ ಎಂದು ಅರಸು ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಆರ್‌.ಗುರುಸ್ವಾಮಿ ತಿಳಿಸಿದರು.

ನಗರದ ಮುನೇಶ್ವರಕಾವಲ್‌ ಮೈದಾನದಲ್ಲಿ ಬಸವಜಯಂತಿ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿಯಾಗಿದ್ದ ನಿಜಲಿಂಗಪ್ಪ ಅವರು ಅಂಬೇಡ್ಕರರಿಗೆ ಹಾಗೂ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಗಾಂಧೀಜಿಯವರು ಆಗಮಿಸಿದ್ದ ವೇಳೆ ಬಸವಣ್ಣನವರ ಸಾಮಾಜಿಕ ಕ್ರಾಂತಿ ಹಾಗೂ ವಚನದ ತಾತ್ಪರ್ಯವನ್ನು ಮನನ ಮಾಡಿಸಿದ್ದರು. ಹೀಗಾಗಿ ಇವರಿಬ್ಬರ ಮೇಲೆ ಬಸವಣ್ಣನವರ ಕ್ರಾಂತಿ ದೊಡ್ಡ ಪ್ರಭಾವ ಬೀರಿತ್ತು ಎಂದರು.

ವಚನ ಭಾಷಾಂತರ: ಕೆರೆ ಮಂಜಣ್ಣನವರು 1913ರಲ್ಲಿ ದಾವಣಗೆರೆಯಲ್ಲಿ ಪ್ರಥಮವಾಗಿ ಬಸವ ಜಯಂತಿ ಆಚರಣೆ ಬುನಾದಿ ಹಾಕಿದ್ದರು. ಬಸವಣ್ಣನವರ ವಿಚಾರಧಾರೆ ಹಾಗೂ ವಚನ ತಾತ್ಪರ್ಯವನ್ನು 23 ಭಾಷೆಗಳಿಗೆ ಭಾಷಾಂತರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಬಸವಣ್ಣನವರ ಸಾಮಾಜಿಕ ಕ್ರಾಂತಿಯನ್ನು ಕೊಂಡಾಡಿದ್ದಾರೆ. ಅದೇ ರೀತಿ ಇಂಗ್ಲೆಂಡ್‌, ಅಮೆರಿಕ, ಫ್ರಾನ್ಸ್‌ ಮತ್ತಿತರ ದೇಶಗಳಲ್ಲಿ ಬಸವಣ್ಣನವರ ವಿಚಾರಧಾರೆ ನಡೆಯುತ್ತಿದೆ ಎಂದರು.

ಇಷ್ಟಲಿಂಗ ಪೂಜೆಗೆ ಕರೆ: ದೇಶದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದಿದ್ದ ಬಸವಣ್ಣ ಅಂದೇ ಜನಿವಾರ ಕಿತ್ತು ಬಿಸಾಡಿ, ಭಕ್ತರು ಮತ್ತು ದೇವರ ನಡುವಿನ ಮಧ್ಯವರ್ತಿಗಳನ್ನು ದೂರವಿಟ್ಟು, ದೇವಾಲಯಕ್ಕೆ ಹೋಗುವ ಬದಲು ಮನೆಯಲ್ಲೇ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿರೆಂದು ಕರೆ ನೀಡಿದ್ದರು. ಅವರ ಆಶಯಗಳು ಈಡೇರಿದ್ದರೆ, ಇಂದಿನ ಜಾತಿಯತೆ, ಭ್ರಷ್ಟಾಚಾರ, ಅಸ್ಪೃಶ್ಯತೆ ಇರುತ್ತಿರಲಿಲ್ಲ ಎಂದರು.

ಶಿವರಾತ್ರಿದೇಶೀಕೇಂದ್ರ ಸ್ವಾಮಿಜಿ ಬಸವಣ್ಣ ಮಾತನಾಡಿ, ಸ್ವಾಮಿ ವಿವೇಕಾನಂದರಂತಹವರು ಜೀವನವನ್ನು ಬದಲಾವಣೆ ಹಾಗೂ ಸಾಧನೆಗೆ ಮೆಟ್ಟಿಲು ಮಾಡಿಕೊಂಡರು. ನುಡಿದಂತೆ ನಡೆದವರು, ಅವರ ಬದುಕನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನೀಡುವ ದೊಡ್ಡ ಕೊಡುಗೆ ಎಂದರು.

ಸ‌ಮಾರಂಭದಲ್ಲಿ ಗಾವಡಗೆರೆ ನಟರಾಜಸ್ವಾಮೀಜಿ, ಮಾದಹಳ್ಳಿಯ ಸಾಂಬಸದಾಶಿವಸ್ವಾಮೀಜಿ, ಜಿಪಂ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಕಟ್ಟನಾಯಕ, ಜಯಲಕ್ಷ್ಮೀರಾಜಣ್ಣ, ವೀರಶೆ„ವ ಮಹಾಸಭಾದ ಅಧ್ಯಕ್ಷ ರಮೇಶಕುಮಾರ್‌, ಮಹಿಳಾಘಟಕದ ಅಧ್ಯಕ್ಷ ಬಸಮ್ಮಣ್ಣಿವಜ್ರ, ಬಸವ ಬಳಗದ ಅಧ್ಯಕ್ಷ ಸೋಮಶೇಖರ್‌, ಅರ್ಪಿತಾ ಪ್ರತಾಪಸಿಂಹ, ಶಿಕ್ಷಕರಾದ ಚನ್ನವೀರಪ್ಪ, ಹರವೆಮಹದೇವ್‌, ತಹಶೀಲ್ದಾರ್‌ ಬಸವರಾಜ್‌, ಇಒ ಕೃಷ್ಣಕುಮಾರ್‌, ವೀರಶೈವ ಯುವಘಟಕದ ಅಧ್ಯಕ್ಷ ಚಂದ್ರು, ಡಾ.ವೃಷಬೇಂದ್ರಸ್ವಾಮಿ, ಬಸವರಾಜ್‌ ಇತರರಿದ್ದರು.

ಸಾಧಕರಿಗೆ ಸನ್ಮಾನ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ರ್‍ಯಾಂಕ್‌ ಪಡೆದಿರುವ ಉಯಿಗೌಡನಹಳ್ಳಿ ತೇಜಸ್‌, ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಚಿನ್ನದ ಪದಕಗಳಿಸಿರುವ ಡಾ.ಉಮಾಶಂಕರ್‌, ಮೂಳೆತಜ್ಞ ಡಾ|ಸಚ್ಚಿದಾನಂದಮೂರ್ತಿ, ಪಶುವೈದ್ಯ ಡಾ.ಷಡಕ್ಷರಿಸ್ವಾಮಿ, ಶಿರಸ್ತೇದಾರ್‌ ಪ್ರಭುಲಿಂಗಸ್ವಾಮಿ, ಶಿಕ್ಷಕ ಗಿರೀಶ್‌ ಹಾಗೂ ಎಸ್‌.ಎಸ್‌.ಎಲ್‌.ಸಿ-ಪಿಯುಸಿಯ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಂದೇ ಮೀಸಲಾತಿ ಸಂದೇಶ: ಶಾಸಕ ಎಚ್‌.ವಿಶ್ವನಾಥ್‌ ಮಾತನಾಡಿ, ಬಸವಣ್ಣನವರು ಅಂದೇ ರಾಜಕಾರಣಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರ ಆಡಳಿತದ ಅನುಭವವು ಹೊಸಬೆಳಕಿನಲ್ಲಿ ಅಧ್ಯಯನವಾಗಬೇಕಿದ್ದು, ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ಹಿಂದೆಯೇ ಮಾದಿಗರ ಮನೆಯಲ್ಲಿ ಸಹಪಂಕ್ತಿಭೋಜನ ನಡೆಸಿ, ತಮ್ಮ ಆಡಳಿತದಲ್ಲಿ ಮೀಸಲಾತಿಯ ಸಂದೇಶವನ್ನು ಜಾರಿಗೆ ತಂದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿದ್ದರೆಂದು ಶ್ಲಾ ಸಿದರು.

ಟಾಪ್ ನ್ಯೂಸ್

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.