ಸಣ್ಣಪುಟ್ಟ ಅಸಮಾಧಾನ ಇರಬಹುದು, ಆದರೆ…: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Aug 9, 2021, 12:24 PM IST
ಮೈಸೂರು: ಸಚಿವ ಸಂಪುಟ ರಚನೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ವಿಶೇಷ ಸಂದರ್ಭದಲ್ಲಿ ಸಚಿವ ಸಂಪುಟ ರಚನೆಯಾಗಿದೆ. ಎಲ್ಲರೂ ಸಹಕಾರ ಕೊಡುತ್ತಿದ್ದಾರೆ. ಸಣ್ಣಪುಟ್ಟ ಅಸಮಾಧಾನ ಇರಬಹುದು. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ರಾಮದಾಸ್ ನನ್ನ ಆತ್ಮೀಯ ಸ್ನೇಹಿತರು. ಪಕ್ಷದಲ್ಲಿ ಅವರು ಹಿರಿಯರಾಗಿದ್ದಾರೆ. ಅವರನ್ನು ಕರೆಸಿ ಮಾತನಾಡುತ್ತೇನೆ ಎಂದರು.
ಮೇಕೆದಾಟು ನದಿ ನೀರು ಹಂಚಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ನೀರಿನ ರಾಜಕಾರಣ ಮೊದಲಿನಿಂದಲೂ ಇದೆ. ಕಾವೇರಿ ನದಿ ನೀರು ಹಂಚಿಕೆಯ ವಿಚಾರ ಮುಂದಿಟ್ಟುಕೊಂಡು ಎಷ್ಟೋ ಪಕ್ಷಗಳು ಅಧಿಕಾರಕ್ಕೆ ಬಂದು ಹೋಗಿವೆ. ತಮಿಳುನಾಡಿನವರು ಏನೇ ಹೇಳಿದರು ನಾವು ಮೇಕೆದಾಟು ಯೋಜನೆ ಮಾಡಿಯೇ ಮಾಡುತ್ತೇವೆ ಎಂದರು.
ಇದನ್ನೂ ಓದಿ:ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಕಾವೇರಿ ಕೊಳ್ಳದಲ್ಲಿ ಲಭ್ಯವಾಗುವ ಗರಿಷ್ಠ ಪ್ರಮಾಣದ ನೀರಿನ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್ ತಯಾರಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನ ಭೇಟಿ ಮಾಡುತ್ತೇನೆ. ಸುಪ್ರೀಂ ಸಿಕೊರ್ಟ್ ನೀಡಿರುವ ತೀರ್ಪು ಕಾನೂನಾತ್ಮಕ ವಾಗಿ ನಮಗೆ ಇರುವ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಳ್ಳುತ್ತೇನೆ. ಕಾನೂನು ತಜ್ಞರ ಜೊತೆಗೂ ಚರ್ಚೆ ನಡೆಸುತ್ತೇನೆ. ನಮ್ಮ ನೀರು ನಮ್ಮ ಹಕ್ಕು ಅದನ್ನು ಪಡೆದುಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಯಡಿಯೂರಪ್ಪ ಅವರಿಗೆ ನೀಡಿದ ಕ್ಯಾಬಿನೆಟ್ ಸ್ಥಾನಮಾನದ ಸವಲತ್ತು ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಸವಲತ್ತನ್ನು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ. ಇದನ್ನು ನಾನು ಒಪ್ಪಿಕೊಂಡಿದ್ದೇನೆ. ಅವರಿಗೆ ನಿಕಟ ಪೂರ್ವ ಸಿಎಂಗೆ ಸಿಗಬೇಕಾದ ಸ್ಥಾನಮಾನ ಎಂದಿನಂತೆ ನೀಡುತ್ತೇವೆ ಎಂದು ಹೇಳಿದರು.
ವೀಕೆಂಡ್ ಕರ್ಫ್ಯೂವನ್ನ ಗಡಿ ಜಿಲ್ಲೆಗಳ ಸ್ಥಿತಿಗತಿ ಮೇಲೆ ನಿರ್ಧರಿಸಿ ಆದೇಶ ಮಾಡಲಾಗಿದೆ. ಈಗ ಮೈಸೂರಿನ ಬಗ್ಗೆ ಸಭೆ ಮಾಡಿ ಚರ್ಚೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.