ಬಸವೇಶ್ವರರ ಕೊಡುಗೆ ಅಪಾರ
Team Udayavani, May 21, 2018, 3:11 PM IST
ಮೈಸೂರು: ಸಮಾಜದಲ್ಲಿ ಸಮಾನತೆ ತರುವ ದೃಷ್ಟಿಯಿಂದ 12ನೇ ಶತಮಾನದಲ್ಲಿ ಬಸವೇಶ್ವರರು ಎಲ್ಲಾ ವರ್ಗದವರಿಗೆ ಅನುಭವ ಮಂಟಪದಲ್ಲಿ ಸ್ಥಾನ ನೀಡಿದ್ದರು ಎಂದು ಮಹಂತೇಶ್ವರ ಮಠದ ಪರಶಿವಮೂರ್ತಿ ಸ್ವಾಮೀಜಿ ಹೇಳಿದರು.
ಬಸವೇಶ್ವರ ಸೇವಾ ಸಮಿತಿವತಿಯಿಂದ ರಾಮಕೃಷ್ಣ ವಿದ್ಯಾಕೇಂದ್ರದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಎಲ್ಲಾ ವರ್ಗಗಳಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂಬ ಪರಿಕಲ್ಪನೆಯಲ್ಲಿ ಬಸವೇಶ್ವರರು ಸಾವಿರಾರು ವಚನಗಳನ್ನು ರಚಿಸಿ ಸಮಾಜಕ್ಕೆ ನೀಡಿದ್ದಾರೆ. ವಚನಗಳ ಸಾರವನ್ನು ಅನುಸರಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.
ಸ್ತ್ರೀಯರಿಗೂ ಉತ್ತಮ ಸ್ಥಾನ ನೀಡುವ ನಿಟ್ಟಿನಲ್ಲಿ ಅಕ್ಕ ಮಹಾದೇವಿ ಅವರಿಗೂ ಉನ್ನತ ಸ್ಥಾನ ನೀಡಿದ್ದರು. ಅಂದಿನ ದಿನಗಳಲ್ಲಿಯೇ ಸ್ತ್ರೀಯರಿಗೆ ಸಮಾನ ಅವಕಾಶ, ಗೌರವ ಕಲ್ಪಿಸಿದ ಗೌರವ ಬಸವೇಶ್ವರರಿಗೆ ಸಲ್ಲುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಅಸ್ಪೃಶ್ಯತೆ ಹಾಗೂ ಜಾತಿ ಸಂಘರ್ಷಗಳು ನಡೆದು ಅಶಾಂತಿ ಸೃಷ್ಟಿಯಾಗುತ್ತಿದೆ. ಇದರಿಂದ ಸಮಾಜ ಸುಧಾರಣೆ ಆಗಲು ಸಾಧ್ಯವೇ ಇಲ್ಲ. ಇವನಾರವ..ಇವನಾರವ ಎಂದೆನಿಸದೆ, ಇವ ನಮ್ಮವಾ..
ಇವ ನಮ್ಮವಾ ಎಂದೆನಿಸಯ್ಯ ಎಂಬ ಅವರ ವಚನವನ್ನು ನಾವೆಲ್ಲರೂ ಪಾಲಿಸಬೇಕಿದೆ. ಇದರಿಂದ ಸಮಾಜದಲ್ಲಿ ಶಾಂತಿ, ಸಹಬಾಳ್ವೆ ನೆಲೆಸಲು ಸಾಧ್ಯ ಎಂದರು. ಪೊ›.ಎಸ್.ಉಮಾದೇವಿ, ಪ್ರಭಾಮಣಿ, ಎಸ್.ಎಚ್.ಲೋಕೇಶಪ್ಪ, ಪಾಪೇಗೌಡ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.