ಜಿಲ್ಲೆಯಲ್ಲಿ ಗೊಬ್ಬರ ಕೊರತೆ ಇಲ್ಲ : ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅಭಯ
ಏ.25 ರಿಂದ ರಾಗಿ ಖರೀದಿ ಕೇಂದ್ರ ಆರಂಭ
Team Udayavani, Apr 21, 2022, 10:03 PM IST
ಹುಣಸೂರು : ಜಿಲ್ಲೆಯಲ್ಲಿ 4 ಸಾವಿರ ಮೆಟ್ರಿಕ್ ಟನ್‌ನಷ್ಟು ರಸಗೊಬ್ಬರ ದಾಸ್ತಾನು ಇದ್ದು. ಜಿಲ್ಲೆಯಲ್ಲಿ ರಸಗೊಬ್ಬರಕ್ಕೆ ಕೊರತೆಯಿಲ್ಲ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಗುರುವಾರ ಹುಣಸೂರು ನಗರದ ಹೊರವಲಯದ ಗೋವಿಂದನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ರಾಮು ಬಡಾವಣೆಯಲ್ಲಿ 80 ಲಕ್ಷ ರೂ.ವೆಚ್ಚದಡಿ ನಿರ್ಮಾಣಗೊಂಡಿರುವ ಕೃಷಿ ಇಲಾಖೆ ಉಪನಿರ್ದೇಶಕರ ಕಚೇರಿ ಉದ್ಘಾಟಿಸಿದ ನಂತರ ಮಾದ್ಯಮದೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೇಡಿಕೆ 1.09 ಲಕ್ಷ ಮೆಟ್ರಿಕ್ ಟನ್ ಆಗಿದ್ದು, ಏಪ್ರಿಲ್ ತಿಂಗಳಿನಲ್ಲಿ 13 ಸಾವಿರ ಮೆಟ್ರಿಕ್ ಟನ್‌ನಷ್ಟು ರಸಗೊಬ್ಬರ ಬೇಡಿಕೆಯಿದ್ದು, ಈಗಾಗಲೆ 18 ಸಾವಿರ ಮೆಟ್ರಿಕ್ ಟನ್‌ನಷ್ಟು ಪೂರೈಸಿದ್ದೇವೆ. ಇನ್ನೂ 4085 ಮೆಟಿಕ್ ಟನ್‌ನಷ್ಟು ದಾಸ್ತಾನು ಇದೆ. ವಾಡಿಕೆ ಮಳೆಗಿಂತ (80ಮಿ.ಮಿ.) ಈ ಬಾರಿ ಹೆಚ್ಚಾಗಿದೆ. ಬಿತ್ತನೆಬೀಜ, ಕೀಟನಾಶಕ ಪೂರೈಕೆಯಲ್ಲೂ ವ್ಯತ್ಯಯವಾಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ರಾಗಿ ಖರೀದಿ ಪುನರಾರಂಭ: ರಾಜ್ಯಾಂದ್ಯಂತ ಏ.25ರಿಂದ ರಾಗಿ ಖರೀದಿ ಕೇಂದ್ರ ಪುನಾರಂಭವಾಗುತ್ತಿದ್ದು, ನೊಂದಣಿ ಕಾರ್ಯ ಅಂದಿನಿಂದಲೇ ಅರಂಭಗೊಳ್ಳಲಿದೆ ಎಂದು ಈಗಾಗಲೇ ರಾಜ್ಯ ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರದಿಂದ 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಿತ್ತು. ರೈತರ ಬೇಡಿಕೆ ಮತ್ತು ಒತ್ತಾಯದ ಮೇರೆಗೆ 1.40 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ನಿರ್ಧರಿಸಿದ್ದು, ಏ. 25 ರಿಂದ ರಾಜ್ಯಾದ್ಯಂತ ಖರೀದಿ ಕೇಂದ್ರ ಆರಂಭಗೊಳ್ಳಲಿದೆ. ಅಂದಿನಿಂದಲೇ ರೈತರು ನೋಂದಣಿ ಮಾಡಿಸಬಹುದಾಗಿದೆ ಎಂದರು.
ಜಾಗೃತ ದಳ: ಮಡಿಕೇರಿ, ಬನ್ನೂರು ಮುಂತಾದ ಕಡೆಗಳಲ್ಲಿ ರಸಗೊಬ್ಬರವನ್ನು ಅಕ್ರಮವಾಗಿ ಅಂತರರಾಜ್ಯಗಳಿಗೆ ಸಾಗಾಣೆ ಮಾಡುತ್ತಿರುವ ಕುರಿತು ವರದಿಗಳು ಬಂದಿದ್ದು, ಇಲಾಖೆಯ ಜಾಗೃತದಳ ಈ ಎಲ್ಲ ಪ್ರಕರಣಗಳನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಿದೆ. ಚೆಕ್‌ಪೋಸ್ಟ್ ಗಳಲ್ಲಿ ಜಾಗೃತದಳ ಕ್ರಿಯಾಶೀಲವಾಗಿ ಇಂತಹ ಅಕ್ರಮಗಳನ್ನು ಪತ್ತೆ ಹಚ್ಚಿ ಕಾನೂನಿನಡಿ ಕ್ರಮವಹಿಸುತ್ತಿದೆ.
ಇದನ್ನೂ ಓದಿ : ದೇಶದಲ್ಲಿ ಶೇ 31ರಷ್ಟು ಜನ ಸ್ಥೂಲಕಾಯದಿಂದ ಬಳಲುತ್ತಿದ್ದಾರೆ: ಮನ್ಸುಖ್ ಮಾಂಡವೀಯ
ಕೃಷಿ ಇಲಾಖೆ ವತಿಯಿಂದ ರೈತರ ಬೆಳೆ ಹಾಳಾಗದಂತೆ ಕ್ರಮ ವಹಿಸಲು ರಾಜ್ಯದ 13 ಕಡೆ ಕೋಲ್ಡ್ ಸ್ಟೋರೇಜ್‌ಗಳನ್ನು ಸ್ಥಾಪಿಸಲಾಗಿದೆ (ತಲಾ 9 ಕೋಟಿ ರೂ.ವೆಚ್ದದಡಿ). ರೈತರ ಅನುಕೂಲಕ್ಕಾಗಿ ಎಲ್ಲ ರೀತಿಯ ಕ್ರಮವಹಿಸಲಾಗಿದೆ. ವಿದ್ಯಾನಿಧಿ ಯೋಜನೆಯಡಿ ಜಿಲ್ಲೆಯ 58 ಸಾವಿರ ವಿದ್ಯಾರ್ಥಿಗಳು ಪ್ರೋತ್ಸಾಹಧನ (17.7 ಕೋಟಿ ರೂ.ಗಳು) ಪಡೆದಿದ್ದಾರೆ. ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆಯಡಿ ಒಟ್ಟು 54.75 ಕೋಟಿ ರೂ.ಗಳು ರೈತರ ಖಾತೆಗೆ ನೇರವಾಗಿ ಜಮೆಯಾಗಿದೆ. ಇವೆಲ್ಲವೂ ನಮ್ಮ ಸರ್ಕಾರದ ಹೆಮ್ಮೆಯ ಯೋಜನೆೆ ಎಂದರು.
ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ರೈತಪರ ಕಾಳಜಿಯಿಂದ ಕಾರ್ಯಕ್ರಮಗಳ ಅನುಷ್ಠಾನಗೊಳ್ಳಬೇಕಿದೆ. ಕೋವಿಡ್ ನಂತರದ ದಿನಗಳಲ್ಲಿ ರೈತರು ಹೆಚ್ಚು ಸಂಕಷ್ಟಕ್ಕೆ ಒಳಗಾಗಿದ್ದು, ರಾಗಿ ಖರೀದಿ ಕೇಂದ್ರದ ಮರು ಆರಂಭದ ನಿರ್ದಾರ ಸ್ವಾಗತಾರ್ಹ ಎಂದರು.
ಇದೇ ಸಂರ್ಭದಲ್ಲಿ 2 ಮಹಿಳಾ ಸ್ವಸಹಾಯ ಸಂಘಗಳಿಗೆ ಟ್ರಾಕ್ಟರ್‌ಗಳನ್ನು ಸಚಿವರು ವಿತರಿಸಿದರು. ತಲಾ 5 ಮಂದಿ ರೈತರಿಗೆ ರೋಟಾವೇಟರ್, ಸ್ಪ್ಲಿಂಕ್ಲರ್‌ಗಳು ಮತ್ತು ಕಲ್ಟಿವೇಟರ್‌ಗಳನ್ನು ವಿತರಿಸಿದರು. 50 ಲಕ್ಷ ರೂ.ವೆಚ್ಚದಲಿ ನಿರ್ಮಾಣಗೊಂಡಿರುವ ಹನಗೋಡು ರೈತಸಂಪರ್ಕ ಕೇಂದ್ರದ ನಾಮಫಲಕವನ್ನು ಅನಾವರಣಗೊಳಿಸಿದರು. ಕೃಷಿ ಅಭಿಯಾನದ ರಥಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗೋವಿಂದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸನ್ನಕುಮಾರ್, ಉಪಾಧ್ಯಕ್ಷೆ ಸಿರೀನ್ ತಾಜ್, ಕೃಷಿ ಇಲಾಖೆ ನಿರ್ದೇಶಕಿ ನಂದಿನಿಕುಮಾರಿ, ಕೃಷಿ ಇಲಾಖೆ ಜೆಡಿ ಮಹಂತೇಶಪ್ಪ, ಉಪನಿರ್ದೇಶಕ ಧನಂಜಯ್, ಸಹಾಯಕ ನಿರ್ದೇಶಕ ಜೆ.ವೆಂಕಟೇಶ್, ಸಿಬ್ಬಂದಿ ಮತ್ತು ರೈತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.