ಯೋಜನೆಗಳ ಫಾಲೋಅಪ್ ಆಗಲಿ
Team Udayavani, May 8, 2020, 6:06 PM IST
ಮೈಸೂರು: ಆರ್ಥಿಕವಾಗಿ ದುರ್ಬಲರಾಗಿರುವರಿಗೋಸ್ಕರ ನಿವೇಶನ ಯೋಜನೆ ಮಂಜೂರು ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಸಾಲದು, ಅದನ್ನು ಫಾಲೋಅಪ್ ಮಾಡುವ ಕೆಲಸ ಅಧಿಕಾರಿಗಳಿಂದ ಆಗಬೇಕು ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಬಿ.ಎ. ಬಸವರಾಜು ಹೇಳಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿದ್ವಯರು, ಸರ್ಕಾರಗಳಿಗೆ ವರದಿ ಸಲ್ಲಿಸಿಯೋ, ಪ್ರಸ್ತಾವನೆ ಸಲ್ಲಿಸಿಯೋ ಸುಮ್ಮನಾಗ ಬಾರದು. ಅಧಿಕಾರಿಗಳು ಫಾಲೋಅಪ್ ಮಾಡುವುದರ ಜೊತೆಗೆ ಆಗಾಗ ಸರ್ಕಾರದ ಗಮನ ಸೆಳೆಯಬೇಕು. ಮುಡಾದ 6 ಯೋಜನೆಗಳಿಗೆ ಸರ್ಕಾರದಿಂದ ಅನುಮತಿ ಬಾಕಿ ಇದೆ. ಸರ್ಕಾರದ ವತಿಯಿಂದ ಒಪ್ಪಿಗೆ ಬೇಕಿದೆ ಎಂದು ಅಧಿಕಾರಿಗಳು ಗಮನಕ್ಕೆ ತಂದಾಗ, ಶೀಘ್ರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂ ದರು. ಎಲ್ಲರೂ ಕೆಲಸ ಮಾಡಲಿ, ಮುಂದಿನ ದಿನಗಳಲ್ಲಿ ನಾನು ಪರಿಶೀಲನೆ ಮಾಡುತ್ತೇನೆ. ತಪ್ಪುಗಳು ಕಂಡುಬಂದರೆ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮವಹಿಸುವೆ ಎಂದು ಸಚಿವ ಬಸವರಾಜು ಎಚ್ಚರಿಕೆ ನೀಡಿದರು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ. ದೇವೇಗೌಡ, ಎಲ್. ನಾಗೇಂದ್ರ, ಹರ್ಷವರ್ಧನ್, ಡೀಸಿ ಅಭಿರಾಂ ಜಿ.ಶಂಕರ್, ಮೂಡ ಆಯುಕ್ತ ನಟೇಶ್ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ
H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!
Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ
Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು
Hunsur: ಟ್ರ್ಯಾಕ್ಟರ್ ಚಾಲಕರ ಪೈಪೋಟಿಗೆ ಬೈಕ್ ಸವಾರ ಬಲಿ; 15 ದಿನಗಳ ಅಂತರದಲ್ಲಿ 2ನೇ ಅಪಘಾತ
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.