ಹಾಲುಣಿಸಿದರೆ ಸೌಂದರ್ಯ ಹಾಳಾಗದು
Team Udayavani, Aug 3, 2017, 12:29 PM IST
ಮೈಸೂರು: ಮಗುವಿಗೆ ಎದೆಹಾಲು ಉಣಿಸುವುದರಿಂದ ತಮ್ಮ ಸೌಂದರ್ಯ ಹಾಳಾಗುತ್ತದೆ ಎಂಬ ಕೀಳು ಮನೋಭಾವನೆಯನ್ನು ಮಹಿಳೆಯರು ಬಿಡಬೇಕೆಂದು ಶಿಶುವೈದ್ಯೆ ಡಾ. ಸಾರಿಕಾ ಹೇಳಿದರು.
ಭಾರತೀಯ ವೈದ್ಯ ಶಿಶು ಅಕಾಡೆಮಿ ಮೈಸೂರು ಶಾಖೆ, ಶಿಶು ವೈದ್ಯಶಾಸ್ತ್ರ ವಿಬಾಗ, ಜೆಎಸ್‌ಎಸ್ ವೈದ್ಯಕೀಯ ಕಾಲೇಜು, ಶಿಶುವೈದ್ಯ ಶಾಸ್ತ್ರ ವಿಭಾಗ, ಎಂಎಂಸಿ ಮತ್ತು ಸಂಶೋಧನಾ ಕೇಂದ್ರ, ಇನ್ನರ್ ವ್ಹೀಲ್ ಕ್ಲಬ್ ಮೈಸೂರ್ ಸೆಂಟ್ರಲ್ ಸಂಸ್ಥೆಗಳ ವತಿಯಿಂದ ಬುಧವಾರ ನಗರದ ಮಹಾರಾಣಿ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹದಲ್ಲಿ ಮಾತನಾಡಿದರು.
ಬಹುತೇಕ ಮಹಿಳೆಯರು ಮಗುವಿಗೆ ಎದೆಹಾಲು ಉಣಿಸುವುದರಿಂದ ತಮ್ಮ ಸೌಂದರ್ಯ ಹಾಳಾಗಲಿದೆ ಎಂಬ ಕೀಳರಿಮೆ ಹೊಂದಿರುತ್ತಾರೆ. ಆದರೆ ಮಗುವಿಗೆ ಎದೆಹಾಲು ಉಣಿಸುವುದರಿಂದ ನವಜಾತ ಶಿಶುವಿನ ಮೆದುಳು ಉತ್ತಮವಾಗಿ ಬೆಳವಣಿಗೆಯಾಗುವ ಜತೆಗೆ ಮಕ್ಕಳ ಬೌದ್ಧಿಕ ಶಕ್ತಿಯೂ ಹೆಚ್ಚುತ್ತದೆ. ಜತೆಗೆ ಶಿಶುಗಳ ಹಲ್ಲು, ವಸಡುಗಳು ಶಕ್ತಿಯುತವಾಗಲಿದ್ದು, ಮಹಿಳೆಯರು ಸ್ತನ ಕ್ಯಾನ್ಸರ್‌ನಿಂದಲೂ ಪಾರಾಗಬಹುದು.
ಅಲ್ಲದೆ ಸ್ವಾಭಾವಿಕ ಕುಟುಂಬ ಯೋಜನೆ ಅನುಸರಿಸಿದಂತಾಗುತ್ತದೆ. ಆದರೆ ಬಾಟಲಿ ಹಾಲು ಕುಡಿಯುವ ಮಕ್ಕಳ ಬೆಳವಣಿಗೆ ಕುಂಠಿತವಾಗುವುದಲ್ಲದೆ, ಮಕ್ಕಳಲ್ಲಿ ಹೊಟ್ಟೆನೋವು, ಇನ್ನಿತರ ಬೇನೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಮಹಿಳೆಯರು ಮಕ್ಕಳಿಗೆ ಎದೆಹಾಲು ನೀಡುವುದನ್ನು ಎಂದಿಗೂ ಮರೆಯಬಾರದು ಎಂದು ಸಲಹೆ ನೀಡಿದರು. ಡಾ.ರಾಜೇಶ್ವರಿ, ಡಾ.ತಿಬ್ಬೇಗೌಡ, ಕಾಲೇಜು ಪ್ರಾಂಶುಪಾಲ ಡಾ.ನಾಗರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.