ಜನ ಮತೀಯ ಶಕ್ತಿಗಳನ್ನು ಬೆಂಬಲಿಸಲ್ಲ: ಉಗ್ರಪ್ಪ


Team Udayavani, Mar 31, 2017, 12:21 PM IST

mys2.jpg

ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತೀಯ ಶಕ್ತಿಯ ಜತೆಗಿನ ಸಂಘರ್ಷದಲ್ಲಿ ಜಾತ್ಯತೀತ ಪಕ್ಷವಾದ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ವಿಪ ಸದಸ್ಯರುಗಳಾದ ಎಚ್‌.ಎಂ.ರೇವಣ್ಣ ಹಾಗೂ ವಿ.ಎಸ್‌. ಉಗ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್‌.ಎಂ.ರೇವಣ್ಣ, ಶ್ರೀನಿವಾಸ ಪ್ರಸಾದ್‌ ಕಂದಾಯ ಸಚಿವರಾಗಿ ಬರ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ. ಅನಾರೋಗ್ಯ ಕಾರಣದಿಂದ ಅವರಿಗೆ ಎಲ್ಲಡೆ ಪ್ರವಾಸ ಮಾಡಲೂ ಆಗಲಿಲ್ಲ. ಈ ಕಾರಣಕ್ಕಾಗಿ ಮಂತ್ರಿಮಂಡಲದಿಂದ ಕೈ ಬಿಟ್ಟರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪ ಚುನಾವಣೆ ತಂದಿದ್ದಾರೆ ಎಂದು ದೂರಿದರು.

ಅಹಿಂದ ವರ್ಗಗಳ ಬಗ್ಗೆ ಮಾತನಾಡಲು ಕೆ.ಎಸ್‌.ಈಶ್ವರಪ್ಪಗೆ ನೈತಿಕತೆ ಇಲ್ಲ. ಅಲ್ಪಸಂಖ್ಯಾತರನ್ನು ಬಿಟ್ಟು ಅಹಿಂದ ಮಾಡಲು ಹೋಗಿ ಈಗ ಎಲ್ಲವನ್ನೂ ಬಿಟ್ಟು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಾಯಣ್ಣ ಬ್ರಿಗೇಡ್‌ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ವಿ.ಎಸ್‌. ಉಗ್ರಪ್ಪಮಾತನಾಡಿ, ಉತ್ತರಪ್ರದೇಶ ದಲ್ಲಿ ಶೇ.61ರಷ್ಟು ಜಾತ್ಯತೀತ ಮತಗಳ ವಿಭಜನೆ ಯಿಂದಾಗಿ ಶೇ.39ರಷ್ಟು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಬಸವಣ್ಣ, ಅಂಬೇಡ್ಕರ್‌, ಕನಕದಾಸರ ವಿಚಾರಗಳಿಂದ ಪ್ರೇರಿತರಾಗಿರುವ ಕರ್ನಾಟಕದ ಜನತೆ ಇಂತಹ ಮತೀಯ ಶಕ್ತಿಗಳಿಗೆ ಬೆಂಬಲ ನೀಡುವುದಿಲ್ಲ ಎಂದರು.

ನಂಜನಗೂಡು, ಗುಂಡ್ಲುಪೇಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ಈ ವಿಚಾರ ತಿಳಿದು ಬಿ.ಎಸ್‌. ಯಡಿಯೂರಪ್ಪಹಾಗೂ ಶ್ರೀನಿವಾಸಪ್ರಸಾದ್‌ ಹತಾಶರಾಗಿದ್ದಾರೆ. ಯಡಿಯೂರಪ್ಪ ಅವರಂತೂ ಲೋಕಸಭೆ ಅಧಿವೇಶನಕ್ಕೂ ಹೋಗದೆ ಇಲ್ಲಿ ಕುಳಿತಿದ್ದಾರೆ.

ಶ್ರೀನಿವಾಸಪ್ರಸಾದ್‌ ಸ್ವಾಭಿಮಾನದ ಪ್ರಶ್ನೆ ಎತ್ತಿದ್ದಾರೆ. ಆದರೆ, ನಿಜವಾಗಿ ಸ್ವಾಭಿಮಾನದ ಪ್ರಶ್ನೆ ಎತ್ತಬೇಕಾದವರು ನಂಜನಗೂಡಿನ ಮತದಾರರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು, ಮಂತ್ರಿ ಆಗಲಿ ಎಂದು ನಂಜನಗೂಡಿನ ಜನತೆ ಇವರಿಗೆ ಮತ ನೀಡಿರಲಿಲ್ಲ. ಐದು ವರ್ಷ ನಮ್ಮ ಶಾಸಕರಾಗಿರಿ ಎಂದು ಮತ ನೀಡಿದ್ದರು.

ಆದರೆ, ತಾತ್ವಿಕ ಕಾರಣವಿಲ್ಲದೆ ರಾಜೀನಾಮೆ ನೀಡಿ ನಂಜನಗೂಡಿನ ಜನರ ಆದೇಶ ಮತ್ತು ಕಾರ್ಯಕರ್ತರ ಶ್ರಮಕ್ಕೆ ಪ್ರಸಾದ್‌ ದ್ರೋಹ ಬಗೆದಿದ್ದಾರೆ. ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ನಂಜನಗೂಡು ಕ್ಷೇತ್ರ, ಮೈಸೂರು ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ರಸಾದ್‌ ಏನೆಲ್ಲಾ ಹೆಜ್ಜೆಗುರುತುಗಳನ್ನು ಬಿಟ್ಟು ಹೋಗಿದ್ದಾರೆ ಎಂದು ಹೇಳಲಿ ಎಂದು ಪ್ರಶ್ನಿಸಿದರು.

ಯಡಿಯೂರಪ್ಪಮೇಲೆ ಇನ್ನೂ 20 ಕೇಸ್‌ ಇದೆ. ಜೈಲಿಗೆ ಹೋಗಿ ಬಂದಿದ್ದಾರೆ. ಆಡಳಿತಾವಧಿಯಲ್ಲಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯದ ಮರ್ಯಾದೆ ತೆಗೆದಿರುವ ಯಡಿಯೂರಪ್ಪ, ಮುಂದಿನ ಮುಖ್ಯ ಮಂತ್ರಿ ನಾನೇ ಎಂದು ಓಡಾಡುತ್ತಿದ್ದಾರೆ. ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ ಯಡಿಯೂರಪ್ಪಗೆ ಅಧಿಕಾರ ಕೊಡುವುದಿಲ್ಲ ಎಂದರು. ಮೈಲ್ಯಾಕ್‌ ಅಧ್ಯಕ್ಷ ಎಚ್‌.ಎ.ವೆಂಕಟೇಶ್‌, ಮೃಗಾಲಯ ಪ್ರಾಧಿಕಾರ ಅಧ್ಯಕ್ಷೆ ಮಲ್ಲಿಗೆ ವೀರೇಶ್‌, ನಗರ ಕಾಂಗ್ರೆಸ್‌ ಅಧ್ಯಕ್ಷ ಮೂರ್ತಿ ಇತರರು ಇದ್ದರು.

ಟಾಪ್ ನ್ಯೂಸ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.