ಭಗವಾನ್ ಬಂಧನಕ್ಕೆ ಒತ್ತಾಯಿಸಿ ಧರಣಿ
Team Udayavani, Jan 5, 2019, 6:07 AM IST
ಮೈಸೂರು: ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರು ರಾಮ ಮತ್ತು ಸೀತೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ನವಜೀವನ ಸಂಸ್ಥೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಭಗವಾನ್ ಅವರು ಪದೇ ಪದೆ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಇತ್ತೀಚಿಗೆ ಮತ್ತೆ, ಹಿಂದೂ ಧಾರ್ಮಿಕ ಗ್ರಂಥವಾದ ರಾಮಾಯಣದ ಬಗ್ಗೆ, ಶ್ರೀರಾಮ, ಸೀತೆ ಮತ್ತಿತರರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನಿಯ. ಪ್ರೊ. ಭಗವಾನ್ ಅವರನ್ನು ಕೂಡಲೇ ಬಂಧಿಸಿ, ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.
ನವಜೀವನ ಸಂಸ್ಥೆಯ ಅಧ್ಯಕ್ಷ ಪ್ರೇಮ್‌ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯ ಸ್ನೇಕ್ ಶ್ಯಾಂ, ಮುಖಂಡರಾದ ಸುನಿಲ್‌ಕುಮಾರ್, ನಾಗರಾಜ್, ವಿವೇಕ್, ಅಜಿತ್‌ಕುಮಾರ್, ಪೂರ್ಣಿಮಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.