40% ಕಮಿಷನ್ ತನಿಖೆಯಾಗದೆ ಬಿಲ್ ಬಿಡುಗಡೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ


Team Udayavani, Aug 12, 2023, 12:57 PM IST

40% ಕಮಿಷನ್ ತನಿಖೆಯಾಗದೆ ಬಿಲ್ ಬಿಡುಗಡೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: 40% ಕಮಿಷನ್ ಬಗ್ಗೆ ತನಿಖೆಯಾಗದೆ ಬಿಲ್ ಹೇಗೆ ಬಿಡುಗಡೆ ಮಾಡಲು ಸಾಧ್ಯ. ತನಿಖೆ ಪ್ರಗತಿಯಲ್ಲಿದೆ. ತಪ್ಪು ಮಾಡದೆ ಇರುವವರಿಗೆ ಬಿಲ್ ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ತಪ್ಪು ಮಾಡಿರುವವರಿಗೆ ಆ ಭಯ ಇರುತ್ತದೆ. ನಡೆದಿರುವ ಕಾಮಾಗಾರಿಗಳೆಲ್ಲಾ ಮೂರು ವರ್ಷದ ಹಿಂದೆ ಮುಕ್ತಾಯವಾಗಿದೆ. ಈಗ ಬಿಲ್ ಗಾಗಿ ಆತುರ ಪಟ್ಟರೆ ಹೇಗೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಗೆ ಏನು ವಿಚಾರ ಇಲ್ಲದೆ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. 40% ಕಮಿಷನ್ ಗಾಗಿಯೇ ಜನ ಅವರನ್ನು ತಿರಸ್ಕರಿಸಿದ್ದಾರೆ. ನಾವು ಅವತ್ತು ಮಾಡಿರುವ ಆರೋಪವನ್ನು ಸಾಬೀತು ಮಾಡಬೇಕಿದೆ. ಈ ಕಾರಣ ನಾಲ್ಕು ಟೀಂ ತನಿಖೆ ಮಾಡುತ್ತಿದೆ ಎಂದರು.

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ವಿಚಾರಕ್ಕೆ ಮಾತನಾಡಿದ ಅವರು, ಶಾಸಕರಿಗೂ ಇದರಲ್ಲಿ ಸ್ಥಾನ ಕೊಡಬೇಕಿದೆ. ಯಾವ ಅನುಪಾತದಲ್ಲಿ ಇದನ್ನು ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತದೆ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಮಾತನಾಡಿ, ವಾರ್ಡ್‌ಗಳ ಪುನರ್ವಿಂಗಡಣೆ ವಿಚಾರದಲ್ಲಿ ನ್ಯಾಯಾಲಯ ಕೆಲವೊಂದು ಗಡುವು ನೀಡಿದೆ. ಆ ಗಡುವಿನ ಆಧಾರದಲ್ಲಿ ವರದಿಗಳು ಸಿದ್ಧವಾಗುತ್ತಿವೆ. ಅದನ್ನು ಕೋರ್ಟಿಗೆ ನಾವು ನೀಡುತ್ತೇವೆ. ಚುನಾವಣೆ ವಿಚಾರದಲ್ಲಿ ನಾವು ಯಾವತ್ತೂ ಹಿಂದೆ ಬಿದ್ದಿಲ್ಲ. ಬಿಜೆಪಿಯವರು ಚುನಾವಣೆಗಳನ್ನು ಮುಂದುಡೂತ್ತಿದ್ದರು. ನಾವೂ ಆ ರೀತಿ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತೇವೆ ಎಂದರು.

ನನಗೆ ಜನ್ಮ ದಿನಾಂಕ ಸರಿಯಾಗಿ ಗೊತ್ತಿಲ್ಲ, ಆಗಸ್ಟ್ 3, ಆಗಸ್ಟ್ 12 ಎರಡೂ ಕೂಡ ತಪ್ಪು ದಿನಾಂಕಗಳು. ಒಂದು ನನ್ನ ಮೇಷ್ಟ್ರು ಬರೆಸಿರುವುದು. ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರ್ಸಿರೋದು. ಹೀಗಾಗಿ ಎರಡೂ ದಿನಾಂಕವೂ ತಪ್ಪು. ಹೀಗಾಗಿ ನನಗೆ ಯಾವ ಆಸಕ್ತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಏಕರೂಪ ನಾಗರಿಕ ಕಾಯ್ದೆಗೆ ನಮ್ಮ ವಿರೋಧವಿದೆ. ಕೇರಳದಲ್ಲೂ ಈಗಾಗಲೇ ಇದಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ನಾವೂ ಇದಕ್ಕೆ ವಿರೋಧ ಇದ್ದೇವೆ ಎಂದರು.

ಟಾಪ್ ನ್ಯೂಸ್

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

R.Ashok

FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್‌. ಅಶೋಕ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

Terror 2

Pakistan; ಬಲೂಚ್‌ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು

1-asaa

CPM ಪಾಲಿಟ್‌ಬ್ಯೂರೋಗೆ ಕಾರಟ್‌ ಮಧ್ಯಾಂತರ ಮುಖ್ಯಸ್ಥ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.