ವಿನಯ್ ಕುಲಕರ್ಣಿ ರಾಜೀನಾಮೆಗೆ ಬಿಜೆಪಿ ಆಗ್ರಹ
Team Udayavani, Nov 28, 2017, 1:11 PM IST
ಮೈಸೂರು: ಸಚಿವ ವಿನಯ್ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಗಾಂಧಿಚೌಕದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನಾ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆಯಲ್ಲಿ ಸಚಿವ ವಿನಯ್ ಕುಲಕರ್ಣಿ ಕೈವಾಡ ಇರುವುದರಿಂದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಯೋಗೀಶ್ ಗೌಡ ಕೊಲೆಯಲ್ಲಿ ಸಚಿವ ವಿನಯ ಕುಲಕರ್ಣಿ ಅವರ ಪಾತ್ರವಿದ್ದು, ಯೋಗೀಶ್ ಗೌಡ ಪ್ರಕರಣವನ್ನು ನಡೆಸುತ್ತಿರುವ ವಕೀಲ ಆನಂದರಿಗೆ ಸಚಿವರು ಬೆದರಿಕೆ ಹಾಕಿರುವುದು ಖಂಡನೀಯ. ಯೋಗೀಶ್‌ಗೌಡ ಅವರ ಕುಟುಂಬದವರು ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದರೂ ರಾಜ್ಯ ಸರ್ಕಾರ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲವು ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿರುವುದೇ ಈ ರೀತಿಯ ಪ್ರಕರಣಗಳು ಮರುಕಳಿಸಲು ಕಾರಣ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಿತ ಕಾಯುವ ಬದಲಾಗಿ ತಮ್ಮ ಸಂಪುಟದ ಸಚಿವರ ಹಿತ ಕಾಯುತ್ತಿದ್ದಾರೆ.
ತಮ್ಮ ಸಚಿವರು ಒಂದಿಲ್ಲೊಂದು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದರೂ ರಕ್ಷಿಸುತ್ತಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೆಸರು ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬಂದಿದ್ದು, ಸಿಬಿಐ ಅವರ ವಿರುದ್ಧ ಚಾರ್ಜ್‌ಶೀಟ್ ಹಾಕಿದರೂ ರಾಜೀನಾಮೆ ಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರ ಬಿಜೆಪಿ ಬಿ.ಎಚ್.ಮಂಜುನಾಥ್, ಮುಖಂಡರಾದ ಮೈ.ಕಾ.ಪ್ರೇಮ್‌ಕುಮಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.