ಬಿಜೆಪಿ ಅಭ್ಯರ್ಥಿ ಹರ್ಷವರ್ಧನ ನಾಮಪತ್ರ


Team Udayavani, Apr 22, 2018, 12:50 PM IST

m2-bjp.jpg

ನಂಜನಗೂಡು: ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್‌ ಶನಿವಾರ ಮೆರವಣಿಗೆಯೊಂದಿಗೆ ನಂಜನಗೂಡು ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವರಾಮೇಗೌಡರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.  

ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರಕ್ಕೆ ಆಗಮಿಸಿದ ಅವರು, ಸಹಸ್ರಾರು ಬೆಂಬಲಿಗರ ಜಯಘೋಷದ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಗರದ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಆಗಮಸಿ ನಾಮಪತ್ರ ಸಲ್ಲಿಸಿದರು. ಮರವಣಿಗೆಯಲ್ಲಿ ನಂಜನಗೂಡು ವಿಧಾನ ಸಭಾ ಕ್ಷೇತ್ರದ ಕಾರ್ಯಾಲಯಕ್ಕೆ ಆಗಮಿಸಿ ಮಾವ ಶ್ರೀನಿವಾಸ್‌ ಪ್ರಸಾದ್‌ ಆಗಮನಕ್ಕಾಗಿ 20 ನಿಮಿಷ ಕಾದಿದ್ದರು.

ಶ್ರೀನಿವಾಸ ಪ್ರಸಾದ ಆಗಮಿಸಿದ ಬಳಿಕ ತಾಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಪಟ್ಟಣ ಅಧ್ಯಕ್ಷ ಬಾಲಚಂದ್ರ,  ಸೋಮಣ್ಣ, ಜಿಪಂ ಮಾಜಿ ಸದಸ್ಯ ಚಿಕ್ಕರಂಗನಾಯಕ ಅವರೊಂದಿಗೆ ಚುನಾವಣಾ ಕಾರ್ಯಾಲಯ ಪ್ರವೇಶಿಸಿ ಚುನಾವಣಾಧಿಕಾರಿ ಶಿವರಾಮೇಗೌಡರಿಗೆ ನಾಮಪತ್ರ ನೀಡಿದರು. ಅವರನ್ನು ಕೂಡಿಕೊಂಡ ಪ್ರಸಾದ್‌ ಆತ್ಮೀಯ ಶಂಕರ್‌ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾದರು.

ಹೆದ್ದಾರಿ ಬಂದ್‌: ನಾಮಪತ್ರ ಸಲ್ಲಿಸಲು ಆಗಮಿಸಿದ ಹರ್ಷವರ್ಧನ್‌ ಜತೆ ಆಗಮಿಸಿದ ಅಪಾರ ಬೆಂಬಲಿಗರು ಕಾಂಗ್ರೆಸ್ಸಿಗಿಂತ ನಾವೇನು ಕಡಿಮೆ ಎನ್ನುತ್ತ ಪಠಾಕಿ ಸಿಡಿಸಿ ಜೈಕಾರ ಕೂಗಿದರು. ಬೆಂಬಲಿಗರ ನಿಯಂತ್ರಣಕ್ಕಾಗಿ ಹರಸಹಾಸ ಪಟ್ಟ ಪೊಲೀಸರು ಚುನಾವಣಾ ಕಾರ್ಯಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲಕಾಲ ಸ್ಥಗಿತಗೊಳಿಸಿದರು.

ತಾಯಿಯೂ ಭಾಗಿ: ಹರ್ಷವರ್ಧನನ ನಾಮಪತ್ರ ಸಲ್ಲಿಸುವ ವೇಳೆ ಅವರ ತಾಯಿ ಶೀಲಾಬಸವರಾಜು ಮಿನಿ ವಿಧಾನಸೌಧದ ಆವರಣಕ್ಕೆ ಆಗಮಿಸಿ ಮಗನನ್ನು ಹರಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮಗನಿಗೆ ರಾಷ್ಟ್ರೀಯ ಪಕ್ಷ ಬಿಜೆಪಿ ಟಿಕಿಟ್‌ ನೀಡಿದ್ದು ಖುಷಿಯಾಗಿದ್ದು ತಾವು ಆತನ ಗೆಲುವಿಗಾಗಿ ಕ್ಷೇತ್ರಾದ್ಯಂತ ಪ್ರಚಾರಕ್ಕಿಳಿಯುವುದಾಗಿ ಘೋಷಿಸಿದರು.

ಅಳಿಯನನ್ನು ಆಶೀರ್ವದಿಸಿದ ಮಾವ: ಅಳಿಯ ಹರ್ಷವರ್ಧನ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಕಾರ್ಯಾಲಯದ ಹೊರಾವರಣಕ್ಕೆ ಆಗಮಿಸಿದ ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ ಅಲ್ಲಿಯೇ ಅಳಿಯನನ್ನು ಆಶಿರ್ವದಿಸಿ ಮೈಸೂರಿನ ಕೃಷ್ಣರಾಜನಗರದ ಅಭ್ಯರ್ಥಿ ರಾಮದಾಸರ ನಾಮಪತ್ರ ಸಲ್ಲಿಕೆಗಾಗಿ ತರಾತುರಿಯಲ್ಲಿ  ತೆರಳಿದರು.

ನಾಮಪತ್ರ ಸಲ್ಲಿಸಿ ಹೊರಬಂದ ಹರ್ಷವರ್ಧನ ಮಾತನಾಡಿ, ಜೀವನದಲ್ಲಿ ಇದೇ ಪ್ರಥಮ ಬಾರಿಗೆ ಚುನಾವಣಾ ಆಖಾಡಕ್ಕಿಳಿಯುತ್ತಿದ್ದೇನೆ. ಇದು ನನ್ನ ಸೌಭಾಗ್ಯ. ಮಾವ ಶ್ರೀನಿವಾಸ್‌ ಪ್ರಸಾದ್‌ ಈ ಕ್ಷೇತ್ರದ ಪ್ರತಿನಿಧಿಯಾಗಿ ಕೈ ಗೊಂಡ ಅಭಿವೃದ್ಧಿ, ಪ್ರಧಾನಿ ಮೋದಿಯವರ ಜನಪ್ರಿಯ ರಾಜಕಾರಣ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಯಡಯೂರಪ್ಪ ಸರ್ಕಾರದ ಸಾಧನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.