ಎಸಿಬಿ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Team Udayavani, Aug 22, 2017, 12:44 PM IST
ಮೈಸೂರು: ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಲುಕಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಘಟಕದವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕೋಟೆ ಎಂ.ಶಿವಣ್ಣ ನೇತೃತ್ವದಲ್ಲಿ ಗಾಂಧಿ ಚೌಕದ ಗಾಂಧಿ ಪ್ರತಿಮೆ ಬಳಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಶಿವರಾಮಕಾರಂತ ಬಡಾವಣೆ ಡಿನೋಟಿಪೀಕೇಶನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಲುಕಿಲು ಮುಂದಾಗಿದೆ.
ಎಸಿಬಿ ಅಧಿಕಾರಿಗಳೇ ಯಡಿಯೂರಪ್ಪ ಅವರ ಹೆಸರು ಹೇಳುವಂತೆ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಸ್ವತಃ ಗಣಿ ಮತ್ತು ಭೂ ವಿಜಾnನ ಇಲಾಖೆ ತನಿಖಾ ದಳದ ಉಪ ಕಾರ್ಯದರ್ಶಿ ಬಸವರಾಜೇಂದ್ರ ಹೇಳಿರುವುದರಿಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೋಟೆ ಎಂ.ಶಿವಣ್ಣ ಒತ್ತಾಯಿಸಿದರು.
ಎಸಿಬಿ ರಚಿಸಿ, ಲೋಕಾಂುುಕ್ತದ ಕತ್ತು ಹಿಸುಕಿದ ಸರ್ಕಾರ, 2010ರ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಅವರು ನಿರ್ದೋಷಿ ಎಂದು ಸಾಬೀತಾದ ಮೇಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಯಡಿಯೂರಪ್ಪ ಅವರನ್ನು ಸಿಕ್ಕಿ ಹಾಕಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಮುಖಂಡರಾದ ಮಹದೇವಯ್ಯ, ರಾಜೇಶ್, ಅಶೋಕ, ಸಹ ಪ್ರಬಾರಿ ಪಣೀಶ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಬಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.