ಬಿಜೆಪಿಗೆ ಇರಿಸು ಮುರಿಸು; ಲೆಕ್ಕ ಕೇಳಲು ಶ್ರೀನಿವಾಸ ಪ್ರಸಾದ್ ಯಾರು?: ವಿಶ್ವನಾಥ್ ತಿರುಗೇಟು
ಯಡಿಯೂರಪ್ಪ ಸೈನಿಕನ ಕೈಯಲ್ಲಿ ದುಡ್ಡು ಕೊಟ್ಟು ಕಳುಹಿಸಿದ್ದರು....!
Team Udayavani, Dec 17, 2022, 5:09 PM IST
ಮೈಸೂರು : ಚುನಾವಣೆ ಅಂದಮೇಲೆ ಪಕ್ಷ ದುಡ್ಡು ಕೊಡೋದು ಸಹಜ, ಲೆಕ್ಕ ಕೇಳಲು ಶ್ರೀನಿವಾಸ ಪ್ರಸಾದ್ ಯಾರು ? ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಶನಿವಾರ ಮತ್ತೆ ಸಮರ ಮುಂದುವರಿಸಿ ಬಿಜೆಪಿಗೆ ಇರಿಸು ಮುರಿಸು ಉಂಟು ಮಾಡಿದ್ದಾರೆ.
ವಿಶ್ವನಾಥ್ ಉಪ ಚುನಾವಣೆಗೆ ಹಣ ಪಡೆದಿದ್ದರು ಎಂಬ ಸಂಸದ ಶ್ರೀನಿವಾಸ ಪ್ರಸಾದ್ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಹುಣಸೂರು ಉಪಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಸೈನಿಕನ (ಸಿ.ಪಿ.ಯೋಗೇಶ್ವರ್) ಕೈಯಲ್ಲಿ ದುಡ್ಡು ಕೊಟ್ಟು ಕಳುಹಿಸಿದ್ದರು. ಸೈನಿಕ ಹುಣಸೂರಿಗೆ ಬರಲಿಲ್ಲ.ಈ ವಿಚಾರವನ್ನು ಈಗಾಗಲೇ ಹೇಳಿದ್ದೇನೆ. ಎಲ್ಲಾ ಚುನಾವಣೆಗಳಲ್ಲೂ ಪಕ್ಷದವರು ದುಡ್ಡು ಕೊಡುತ್ತಾರೆ. ಶ್ರೀನಿವಾಸ್ ಪ್ರಸಾದ್ ಅವರಿಗೆ ಅವರಿದ್ದ ಪಕ್ಷಗಳು ಹಣ ನೀಡಲ್ಲವೇ” ಎಂದು ಪ್ರಶ್ನಿಸಿದ್ದಾರೆ.
”ನನಗೆ ಎಷ್ಟು ಕೋಟಿ ಬಂದಿದೆ ಅಂತ ಶ್ರೀನಿವಾಸ್ ಪ್ರಸಾದ್ ಗೆ ಏನು ಗೊತ್ತು. ಅವರಿಗೆ ಗೊತ್ತಿಲ್ಲದ ವಿಚಾರವನ್ನು ಯಾಕೆ ಮಾತಾನಾಡಬೇಕು” ಎಂದು ಪ್ರಶ್ನಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಶ್ರೀನಿವಾಸ್ ಪ್ರಸಾದ್ ವಿಶ್ವನಾಥ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ , ”ಉಪಚುನಾವಣೆಗೆ ಪಕ್ಷ ಹದಿನೈದು ಕೋಟಿ ರೂಪಾಯಿ ನೀಡಿತ್ತು. ಐದು ಮಾತ್ರ ಖರ್ಚು ಮಾಡಿ ಉಳಿದ ಹತ್ತು ಕೋಟಿ ನುಂಗಿ ಹಾಕಿದ್ದ” ಎಂದು ಗಂಭೀರ ಆರೋಪ ಮಾಡಿದ್ದರು.
ಶ್ರೀನಿವಾಸ ಪ್ರಸಾದ್ ದಲಿತರ ಕಷ್ಟಕ್ಕಾಗದ ರಾಜಕಾರಣಿ
”ಸ್ವಾಮೀಜಿಯೊಬ್ಬ ದಲಿತರ ಹೆಣ್ಣು ಮಗಳನ್ನು ಕೆಡಿಸಿದ, ಅಂಬೇಡ್ಕರ್ ಮೊಮ್ಮಗ ಆನಂದ ತೇಲ್ತುಂಬ್ದೆ ಅವರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿವೆ. ಯಾವ ಸಂದರ್ಭದಲ್ಲಾದರೂ ನೀವು ಧ್ವನಿ ಎತ್ತಿದ್ದೀರಾ..? ನೀವು ವೈಟ್ ಕಾಲರ್ ರಾಜಕಾರಣಿ. ಯಾವುದೋ ಬೀದಿ ರೌಡಿ ರೀತಿ ಮಾತನಾಡಿದ್ದೀರಿ. ನನ್ನ ವಿರುದ್ಧ ಬಳಸಿರುವ ಪದಗಳನ್ನು ಜನ ಕ್ಷಮಿಸುವುದಿಲ್ಲ” ಎಂದರು ಕಿಡಿ ಕಾರಿದರು.
ನನ್ನನ್ನು ಪಕ್ಷ ಬಿಡು ಅನ್ನಲು ನೀನ್ಯಾರು ?
ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿ, ನಾನು ಮಾತನಾಡಿರೋದು ಸರಿಯೋ ತಪ್ಪೋ ಅದನ್ನು ಕೇಳೋಕೆ ರಾಜ್ಯಾಧ್ಯಕ್ಷರು ಇದ್ದಾರೆ.ನೀನೇನು ರಾಜ್ಯಾಧ್ಯಕ್ಷನೇ ? ಪ್ರತಾಪ್ ಸಿಂಹ ನನ್ನ ಬಗ್ಗೆ ಮಾತನಾಡುವ ನೈತಿಕತೆ ನಿನಗೇನಿದೆ. ನೀನೇ ಸರಿಯಿಲ್ಲ, ಬೇರೆಯವರಿಗೆ ಬುದ್ದಿ ಹೇಳೋ ಕೆಲಸ ಮಾಡುತ್ತಿದ್ದೀಯ? ಬೇರೆಯವರು ಮಾಡಿರುವ ಕೆಲಸವನ್ನು ನಾನು ಮಾಡಿದ್ದು ಅಂತ ತಿರುಗುತ್ತೀಯ ನಾಚಿಕೆ ಆಗಬೇಕು ನಿನಗೆ.ಆಸ್ಕರ್ ಫರ್ನಾಂಡಿಸ್ ಅವರ ಕಾಲದ ರಸ್ತೆ ನಾನು ಮಾಡಿಸಿದೆ ಅಂತೀಯ” ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.