ಬ್ರಿಗೇಡ್ ಅಭ್ಯಾಸ ವರ್ಗ ಶೀಘ್ರ: ಈಶ್ವರಪ್ಪ
Team Udayavani, May 7, 2017, 12:42 PM IST
ಮೈಸೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಆಯೋಜಿಸಿದ್ದ ರಾಯಣ್ಣ ಬ್ರಿಗೇಡ್ ಕಾರ್ಯಕರ್ತರ ಅಭ್ಯಾಸ ವರ್ಗ ಮುಂದೂಡಲಾಗಿದ್ದು, ಪದಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ದಿನಾಂಕ ಪ್ರಕಟಿಸಲಾಗುವುದು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾರ್ಯಕಾರಿಣಿ ನಡೆಯುವ ವಿಚಾರದಲ್ಲಿ ಸ್ವಲ್ಪ ಗೊಂದಲವಿತ್ತು. ಹೀಗಾಗಿ ಬ್ರಿಗೇಡ್ ಕಾರ್ಯ ಕರ್ತರ ಅಭ್ಯಾಸವರ್ಗ ನಿಗದಿ ಮಾಡಲಾಗಿತ್ತು. ಆದರೆ, ಕಾರ್ಯಕಾರಿಣಿ ಸಭೆ ನಡೆಯುವುದು ಖಚಿತವಾಗಿದ್ದರಿಂದ ಅಭ್ಯಾಸ ವರ್ಗವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
ರಾಯಣ್ಣ ಬ್ರಿಗೇಡ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ರಾಯಣ್ಣ ಬ್ರಿಗೇಡ್ ಸಾಂಸ್ಕೃತಿಕ ಸಂಘಟನೆಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಜನವರಿ 27ರಂದು ಬ್ರಿಗೇಡ್ ಚಟುವಟಿಕೆ ಮುಂದುವರಿಸಲು ಹೇಳಿದ್ದಾರೆ ಎಂದರು.
ರಾಜ್ಯ ಬಿಜೆಪಿಯಲ್ಲಿ ಕೆಲ ಗೊಂದಲಗಳಿವೆ. ಅದನ್ನು ಒಟ್ಟಿಗೆ ಕುಳಿತು ಚರ್ಚಿಸಿ ಬಗೆಹರಿಸಬೇಕು. ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ರಾಜ್ಯದ ಜನರು ಅಪೇಕ್ಷೆ ಪಟ್ಟಿದ್ದಾರೆ.ಅದರಂತೆ ಎಲ್ಲರೂ ಕುಳಿತು ಚರ್ಚೆ ಮಾಡಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.