ಸಿಎಂ ತವರು ಕ್ಷೇತ್ರದಲ್ಲಿ ಬಿಎಸ್‌ವೈ ಪುತ್ರನ ಸಂಚಾರ
Team Udayavani, Apr 3, 2018, 7:00 AM IST
ಮೈಸೂರು: ಕಾರ್ಯಕರ್ತರ ಅಪೇಕ್ಷೆಯಂತೆ, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಅವಕಾಶ ನೀಡಿದರೆ ವರುಣಾ ಕ್ಷೇತ್ರವನ್ನು ಪ್ರತಿನಿಧಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆಂಬ ಚರ್ಚೆ ಆರಂಭವಾಗಿರುವ ಬೆನ್ನಲ್ಲೆ ಸೋಮವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಟಿಕೆಟ್ ಆಕಾಂಕ್ಷಿಗಳು ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರನ್ನು ಎದುರಿಸಲು ಸಮರ್ಥ ಅಭ್ಯರ್ಥಿ ಬೇಕೆಂಬ ಕಾರಣಕ್ಕೆ ತಮ್ಮನ್ನು ಅಭ್ಯರ್ಥಿಯಾಗಿ ಮಾಡಬೇಕೆಂದು ರಾಷ್ಟ್ರೀಯ, ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿ, ಕ್ಷೇತ್ರದ ಪದಾಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು.
ಸುತ್ತೂರು ಮಠಕ್ಕೆ ಭೇಟಿ: ಮಲೆ ಮಹದೇಶ್ವರನ ಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮೈಸೂರಿಗೆ ಆಗಮಿಸಿದ ವಿಜಯೇಂದ್ರ, ಮಧ್ಯಾಹ್ನ 12.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಆಗಮಿಸಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆ ವೇಳೆಗೆ ಸುತ್ತೂರು ಮಠಕ್ಕೆ ತೆರಳಿ ಶ್ರೀಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. 2 ಗಂಟೆ ಹೊತ್ತಿಗೆ
ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಸಂಜೆ ವೇಳೆಗೆ ವರುಣಾ ಕ್ಷೇತ್ರಕ್ಕೆ ತೆರಳಿ, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.
ತಂದೆ ಹಾಗೂ ಅಣ್ಣನಂತೆ ಸಕ್ರಿಯ ರಾಜಕಾರಣದಲ್ಲಿ ಕಾಣಿಸಿಕೊಳ್ಳದಿದ್ದರೂ, ಕಳೆದ 10 ವರ್ಷಗಳಿಂದ ತಂದೆಯವರೊಂದಿಗೆ ಬೆರೆತು ರಾಜಕೀಯವನ್ನು ನೋಡಿದ್ದೇನೆ. ಹೀಗಾಗಿ ಚುನಾವಣಾ ರಾಜಕಾರಣ ನನಗೆ ಹೊಸದೆಂದು ಅನಿಸುವುದಿಲ್ಲ.
– ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಪುತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.