ಬಡವರು, ರೈತರು, ಯುವ ಜನರಿಗೆ ಪೂರಕವಾಗಿಲ್ಲ: ಸಿದ್ದರಾಮಯ್ಯ
Team Udayavani, Feb 1, 2020, 8:42 PM IST
ಮೈಸೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಬಡವರು, ರೈತರು, ಯುವ ಜನರಿಗೆ ಪೂರಕವಾಗಿಲ್ಲ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್ ಆಶಾದಾಯಕವಾಗಿಲ್ಲ. ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಹೆಸರು ಆಕರ್ಷಕವಾಗಿಯಷ್ಟೇ. ಆದರೆ, ಅವುಗಳನ್ನು ಅನುಷ್ಠಾನಗೊಳಿಸುವುದು ಸುಲಭವಲ್ಲ ಎಂದು ಹೇಳಿದರು.
30 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕಳೆದ ಬಜೆಟ್‌ಗೂ ಈ ಬಜೆಟ್‌ಗೂ 3ಲಕ್ಷ ಕೋಟಿ ರೂ. ವ್ಯತ್ಯಾಸವಿದೆ. ಕಳೆದ ಬಜೆಟ್ ಅಂದಾಜುವೆಚ್ಚದಲ್ಲಿ 2ಲಕ್ಷ ಕೋಟಿ ಕಡಿಮೆ ಖರ್ಚಾಗಿದೆ. ತೆರಿಗೆ ಸಂಗ್ರಹದಲ್ಲಿ ನಿರೀಕ್ಷಿತ ಪ್ರಮಾಣದ ಆದಾಯ ಬಂದಿಲ್ಲ. ಇದರಿಂದ ರಾಜ್ಯಗಳಿಗೆ ಬರಬೇಕಾದ ಪಾಲೂ ಖೋತಾ ಆಗಿದೆ. ದೇಶದ ಆದಾಯವನ್ನು 5 ಟ್ರಿಲಿಯನ್ ಡಾಲರ್ ಮಾಡು¤ತೇವೆ ಅಂದಿದ್ದರು, ಆದರೆ ಅದು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ಈಗ ಗೊತ್ತಾಗುತ್ತಿದೆ. ಶೇ.3.5ಕ್ಕೆ ಕುಸಿತವಾಗಿರುವ ಜಿಡಿಪಿ ದರವನ್ನು ಶೇ.6ಕ್ಕೆ ಕೊಂಡೊಯ್ಯುತ್ತೇವೆ ಎನ್ನುವುದು ಗಗನಕುಸುಮದಂತಿದೆ. ಜಿಡಿಪಿ ಮೇಲೆತ್ತಲು ಸಾಧ್ಯವೇ ಇಲ್ಲ ಎಂದರು.
ಮನಮೋಹನ್‌ಸಿಂಗ್ ಸೇರಿ ಯಾವ ಆರ್ಥಿಕ ತಜ್ಞರ ಸಲಹೆಯನ್ನೂ ಪಡೆದಿಲ್ಲ. ನಿರ್ಮಲಾ ಸೀತಾರಾಮನ್ ಅವರಿಗೆ ಆರ್ಥಿಕ ಪರಿಸ್ಥಿತಿಯ ಮುನ್ನೋಟವೇ ಗೊತ್ತಿಲ್ಲ. ನಮ್ಮ ನಿರೀಕ್ಷೆಗಳೆಲ್ಲ ಹುಸಿಯಾಗಿದೆ. ಇದೊಂದು ನಿರಾಶದಾಯಕ ಬಜೆಟ್ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.