ನಂದಿನಿ ಉತ್ಪನ್ನ ಖರೀದಿಸಿ ರೈತರಿಗೆ ನೆರವಾಗಿ


Team Udayavani, Jul 7, 2018, 2:16 PM IST

m5-nandini.jpg

ಮೈಸೂರು: ನಂದಿನಿ ಸಿಹಿ ಉತ್ಪನ್ನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿ ಹಾಗೂ ಮೈಸೂರು ಜಿಲ್ಲಾ ಹಾಲು ಒಕ್ಕೂಟ ಆಯೋಜಿಸಿರುವ “ನಂದಿನಿ ಸಿಹಿ ಉತ್ಸವ’ದಲ್ಲಿ ಸಾರ್ವಜನಿಕರು ಪಾಲ್ಗೊಂಡು ಉತ್ಪನ್ನಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಕೆ.ಜಿ.ಮಹೇಶ್‌ ಹೇಳಿದರು.

ನಗರದ ಸಿದ್ದಾರ್ಥ ಲೇಔಟ್‌ನಲ್ಲಿರುವ ಮೈಸೂರು ಹಾಲು ಒಕ್ಕೂಟದ ಬಳಿಯ ಕ್ಷೀರ ಮಳಿಗೆಯಲ್ಲಿ ಆಯೋಜಿಸಿರುವ “ನಂದಿನಿ ಸಿಹಿ ಉತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ಸವದಲ್ಲಿ ಎಲ್ಲಾ ನಂದಿನಿ ಉತ್ಪನ್ನಗಳ ಮೇಲೂ ರಿಯಾಯಿತಿ ಸಿಗಲಿದೆ. ಗ್ರಾಹಕರು ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. 

ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಕೆ.ಶಿವಲಿಂಗೇಗೌಡ ಮಾತನಾಡಿ, ನಗರದಲ್ಲಿರುವ 130 ನಿಂದಿನಿ ಪಾರ್ಲರ್‌ಗಳಲ್ಲಿ ನಂದಿನಿ ಸಿಹಿ ಉತ್ಪನ್ನ ನಡೆಯಲಿದ್ದು, ಎಲ್ಲೆಡೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಒಕ್ಕೂಟಕ್ಕೆ ಪ್ರತಿನಿತ್ಯ 3 ಲಕ್ಷ ರೂ. ವಹಿವಾಟು ನಡೆಯುತ್ತಿದ್ದು, ಈ ರಿಯಾಯಿತಿ ಮಾರಾಟದಿಂದ 5 ಲಕ್ಷ ರೂ. ವಹಿವಾಟು ಆಗುವ ನಿರೀಕ್ಷೆ ಇದೆ ಎಂದು ಹೇಳಿದರು.

ನಂದಿನಿ ಸಿಹಿ ಉತ್ಪನ್ನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳಿ ಹಾಗೂ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಸಿಹಿ ಉತ್ಸವ ಆಚರಿಸಲಾಗುತ್ತಿದೆ. ಜನರು ಕಲಬೆರಕೆ ಇಲ್ಲದ ನಂದಿನಿ ಸಿಹಿ ಉತ್ಪನ್ನಗಳ ಬಳಕೆಗೆ ಹೊಂದಿಕೊಂಡರೆ, ಸಂಸ್ಥೆ ಇನ್ನೂ ಹೆಚ್ಚಿನ ಕೆಲಸ ಮಾಡಲು ಸಾಧ್ಯವಿದೆ ಎಂದರು. 

ಜು.6ರಿಂದ 20ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಂದಿನಿ ಸಿಹಿ ಉತ್ಸವ ನಡೆಯಲಿದ್ದು, ಉತ್ಸವದಲ್ಲಿ ಎಲ್ಲಾ ಸಿಹಿತಿನಿಸುಗಳನ್ನು ಶೇ.10 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಅದರಂತೆ ಉತ್ಸವದಲ್ಲಿ ನಂದಿನಿ ಉತ್ಪನ್ನಗಳಾದ ಮೈಸೂರು ಪಾಕ್‌, ಕ್ಯಾಶ್ಯೂ ಬರ್ಫಿ, ಕೊಕೊನೆಟ್‌ ಬರ್ಫಿ, ಡ್ರೆ„ಫ‌ೂ›ಟ್ಸ್‌ ಬರ್ಫಿ, ಚಾಕೋಲೆಟ್‌ ಬರ್ಫಿ, ಬಾದಾಮ್‌ ಬರ್ಫಿ, ಧಾರವಾಡ ಪೇಡ, ಹಾಲಿನ ಪೇಡ, ಕೇಸರಿ ಪೇಡ, ಏಲಕ್ಕಿ ಪೇಡ, ಬೇಸನ್‌ ಲಾಡು, ಖೋವಾ ಜಾಮೂನ್‌, ರಸಗುಲ್ಲಾ, ಪಾಯಸ ಮಿಕ್ಸ್‌, ಕುಂದಾ ಸಿಹಿ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ. 

ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕರಾದ ಕೆ.ಎಸ್‌.ಕುಮಾರ್‌, ಈರೇಗೌಡ, ಎ.ಟಿ.ಸೋಮಶೇಖರ್‌, ವ್ಯವಸ್ಥಾಪಕ ಕೆ.ಶಿವಲಿಂಗೇಗೌಡ, ಮಾರುಕಟ್ಟೆ ವ್ಯವಸ್ಥಾಪಕ ಡಾ.ಎ.ಬಿ.ಲೋಕೇಶ್‌, ಅಪರ ನಿರ್ದೇಶಕ ಮಲ್ಲಿಕಾರ್ಜುನ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.