ಬಿಎಸ್‌ವೈ, ವಿಜಯೇಂದ್ರ ಗುರಿಯಾಗಿಸಿ ದಾಳಿ

ಐಟಿ ದಾಳಿ ರಾಜಕೀಯ ಪ್ರೇರಿತ: ಮಾಜಿ ಸಿಎಂ ಸಿದ್ದರಾಮಯ್ಯ ಶಂಕೆ

Team Udayavani, Oct 10, 2021, 1:06 PM IST

ಐಟಿ ದಾಳಿ ರಾಜಕೀಯ ಪ್ರೇರಿತ- ಮಾಜಿ ಸಿಎಂ ಸಿದ್ದರಾಮಯ್ಯ ಶಂಕೆ

ಮೈಸೂರು: ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ನಡೆದಿರುವ ಐಟಿ ದಾಳಿಯಲ್ಲಿ ರಾಜಕೀಯ ಪ್ರೇರಿತ ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಆಪ್ತರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಿರೋದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ನನಗಂತೂ ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ತಿಳಿಸಿದರು. ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ. ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಸೋನಿಯಾಗಾಂಧಿಯವರು ನನ್ನನ್ನು ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಎಲ್ಲವೂ ಊಹಾಪೋಹದ ಚರ್ಚೆಗಳಾಗಿದ್ದು, ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ.

ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು. ಸಿಂಧಗಿ ಮತ್ತು ಹಾನಗಲ್‌ ವಿಧಾನಸಭಾ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾದ ಅಶೋಕ್‌ ಮನಗೋಳಿ ಹಾಗೂ ಶ್ರೀನಿವಾಸ್‌ ಮಾನೆ ಗೆಲ್ಲಲಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿರುವುದರಿಂದ ಈ ಬಾರಿ ಬಿಜೆಪಿಯನ್ನು ಮತದಾರರು ತಿರಸ್ಕಾರ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಇದ್ದು, ರಾಜ್ಯದಲ್ಲೂ ಬಿಜೆಪಿ ಸರ್ಕಾರ ಬಂದರೆ ಕರ್ನಾಟಕವನ್ನು ಸ್ವರ್ಗ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹೊಡೆಯುತ್ತಿದ್ದರು.

ಇದನ್ನೂ ಓದಿ;- ಕೋವಿಡ್: ದೇಶದಲ್ಲಿ 214 ದಿನಗಳಲ್ಲಿ ಕನಿಷ್ಠ ಪ್ರಕರಣಗಳು ಪತ್ತೆ

ಆದರೆ, ಈಗ ರಾಜ್ಯವನ್ನು ನರಕ ಮಾಡಿದ್ದಾರೆ. ಜನಸಾಮನ್ಯರ ಬದುಕು ದುಸ್ತರವಾಗಿದೆ. ಆದ್ದರಿಂದ ಜನರ ಬಿಜೆಪಿಯನ್ನು ತಿರಸ್ಕಾರ ಮಾಡುತ್ತಾರೆ. ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂದರು.

ದಿಕ್ಸೂಚಿ ಅಲ್ಲ: ಉಪಚುನಾವಣೆ ಫ‌ಲಿತಾಂಶ ಮುಂದಿನ ವಿಧಾನಸಭೆ ಚುನಾವಣೆ ದಿಕ್ಸೂಚಿ ಅಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫ‌ಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವಾಸ ಇಟ್ಟುಕೊಂಡು ಚುನಾವಣೆ ಮಾಡಬೇಕು.

ಹಾಗಾಗಿ ಉಪಚುನಾವಣೆ ಪಾರದರ್ಶಕವಾಗಿ ನಡೆಯುತ್ತದೆ ಎಂವ ವಿಶ್ವಾಸ ಇದೆ ಎಂದರು. ಶಾಸಕ ಕೆ.ಜೆ.ಜಾರ್ಜ್‌, ಎಂಎಲ್ಸಿ ಗೋವಿಂದರಾಜು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ ಕುಮಾರ್‌ ಇತರರಿದ್ದರು.

ಜೆಡಿಎಸ್‌ ಉದ್ದೇಶ ಒಳ್ಳಿಯದಂತೂ ಅಲ್ಲ

ಎರಡೂ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್‌ ಉದ್ದೇಶ ಒಳ್ಳೆಯದಂತು ಅಲ್ಲ. ಏಕೆಂದರೆ ಅಲ್ಪಸಂಖ್ಯಾತರನ್ನು ಗೆಲ್ಲಿಸಬೇಕು ಎಂಬುದು ಅವರ ಉದ್ದೇಶ ಅಲ್ಲ. ಅಲ್ಪಸಂಖ್ಯಾರರನ್ನು ಗೆಲ್ಲಿಸಬೇಕು ಎಂಬ ಉದ್ದೇಶವಿದ್ದಿದ್ದರೆ ಅಲ್ಲೆ ಏಕೆ ಟಿಕೆಟ್‌ ಕೊಡಬೇಕಿತ್ತು. ರಾಮನಗರ, ಮಂಡ್ಯ ಮತ್ತು ಹಾಸದಲ್ಲಿ ಕೊಡಬಹುದಿತ್ತು. ಆದರೆ ಹಾಗೆ ಮಾಡಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ಧಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.