ಕೈಗಾರಿಕೆಗಳಲ್ಲಿ ಉತ್ಪಾದನೆ ಹೆಚ್ಚಳಕ್ಕೆ ಒತ್ತು : ಸಚಿವ
ಜಿಲ್ಲಾ ಕೈಗಾರಿಕೆ ಕೇಂದ್ರದಲ್ಲಿ ಅಧಿಕಾರಿಗಳೊಂದಿಗೆ ಸಭೆ ! ಬಾಡಿಗೆ ಕಟ್ಟಡದ ಕೈಗಾರಿಕೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ: ಸಿ.ಸಿ.ಪಾಟೀಲ್
Team Udayavani, Feb 12, 2021, 4:24 PM IST
ಮೈಸೂರು: ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸೂಕ್ಷ್ಮ ಸಣ್ಣ ಕೈಗಾರಿಕೆಗಳಿಗೆ ಇಲಾಖೆ ವತಿಯಿಂದ ಸ್ವಂತ್ವ ಕಟ್ಟಡ ನಿರ್ಮಿಸಿ, ಉತ್ಪಾದನೆ ಹೆಚ್ಚಳಕ್ಕೆ ಅಗತ್ಯ ಒತ್ತು ನೀಡಲಾಗುವುದು ಎಂದು ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ನಗರದ ಜಿಲ್ಲಾ ಕೈಗಾರಿಕೆ ಕೇಂದ್ರದಲ್ಲಿ ಗುರುವಾರ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಟೋ ಮೋಟಿವ್ ಎಕ್ಸೆಲ್, ಟಿವಿಎಸ್, ಎಲ್ ಅಂಡ್ ಟಿ, ಏಷ್ಯನ್ ಪೈಂಟ್ಸ್ ಸೇರಿ ಅನೇಕ ಕೈಗಾರಿಕಾ ಕೇಂದ್ರಗಳಿಗೆ ಸೂಕ್ಷ್ಮ ,ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ವಿವಿಧ ಸರಕನ್ನು ಸರಬರಾಜು ಮಾಡುತ್ತಿವೆ. ಆದರೆ, ಈ ಕೈಗಾರಿಕೆಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅವರಿಗೆ ಇಲಾಖೆ ವತಿ ಯಿಂದ ಸ್ವಂತ ಕಟ್ಟಡ ನಿರ್ಮಿಸಿ, ಉತ್ಪನ್ನಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಲು ಚಿಂತಿಸಲಾಗುವುದು ಎಂದರು.
ನನ್ನ ಗಮನಕ್ಕೆ ತನ್ನಿ: ಜಿಲ್ಲೆಯಲ್ಲಿ ನೂತನ ಉದ್ಯಮಿ ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳನ್ನು ಇಲಾಖೆಯಿಂದ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಅಗತ್ಯವಿರುವ ಜಾಗ ಖರೀದಿ, ಇನ್ನಿತರ ವಿಚಾರಗಳ ಸಂಬಂಧ ಸಮಸ್ಯೆಗಳಿದ್ದರೆ ಅಧಿಕಾರಿಗಳು ಗಮನಕ್ಕೆ ತರುವಂತೆ ತಿಳಿಸಿದರು.
ಅಹತ್ಯ ಚರ್ಚೆ: ಆತ್ಮನಿರ್ಭರ ಭಾರತ ಯೋಜನೆಯಡಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಪಡೆದುಕೊಳ್ಳಬಹುದು. ಈ ಬಗ್ಗೆ ದೆಹಲಿಗೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದೆಂದರು.
ಇದನ್ನೂ ಓದಿ :ಕಸ ವಿಲೇವಾರಿಗೆ ವಾಟ್ಸ್‌ಆ್ಯಪ್ ತಂಡ!
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೋದ್ಯಮಕ್ಕೆ ಬಹಳಷ್ಟು ಅವಕಾಶವಿದ್ದು, ಈ ಬಗ್ಗೆ ಇಲಾಖೆ ಅಧಿಕಾರಿಗಳು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವಂತೆ ಕೈಗಾರಿಕೆ ಪ್ರದೇಶಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ವಿನೋದ್ ಚಂದ್ರ, ಸಹಾಯಕ ನಿರ್ದೇಶಕ ಆರ್.ರಾಜು, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಉಪನಿರ್ದೇಶಕಿ ಮೇಘನಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.