ಶೌಚಾಲಯ ಇಲ್ಲದ ಮನೆಗೆ ಜೆಸಿಬಿ ಜತೆ ಅಭಿಯಾನ


Team Udayavani, Aug 6, 2017, 12:19 PM IST

mys6.jpg

ಹುಣಸೂರು: ಶೌಚಾಲಯ ನಿರ್ಮಿಸಿಕೊಳ್ಳದ ಮನೆಗಳಿಗೆ “ಶೌಚಾಲಯ ನಿರ್ಮಿಸಿಕೊಡಿ – ನಮ್ಮ ಗೌರವ ಕಾಪಾಡಿ’ ಎಂಬ ಘೋಷ ವಾಕ್ಯದೊಂದಿಗೆ ಜೆಸಿಬಿಯೊಂದಿಗೆ ತೆರಳಲಾಗುವುದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಕುಮಾರ್‌ ತಿಳಿಸಿದ್ದಾರೆ.

ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಘೋಷಣೆಯ ಭಿತ್ತಿ ಪತ್ರ ಬಿಡುಗಡೆ ಸಮಾರಂಭದಲ್ಲಿ ಯೋಜನೆ ಕುರಿತು ಮಾಹಿತಿ ನೀಡಿದರು. ತಾಲೂಕಿನಲ್ಲಿ ಈವರೆಗೆ 49,428  ಕುಟುಂಬಗಳು ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದಿವೆ.

ಇನ್ನು 5,797 ಶೌಚಾಲಯ ನಿರ್ಮಿಸಿಕೊಳ್ಳಬೇಕಿದೆ. ಈ ಪೈಕಿ 1,450 ಶೌಚಾಲಯಗಳು ಪ್ರಗತಿಯಲ್ಲಿವೆ. ಇನ್ನುಳಿದ 4,347 ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಹೊಸ ಆಲೋಚನೆಯೊಂದಿಗೆ ಆಗಸ್ಟ್‌ 7ರಿಂದ 23ರ ವರೆಗೆ ಸ್ವತ್ಛ ಭಾರತ ಮಿಶನ್‌ ಯೋಜನೆಯಡಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದಕ್ಕಾಗಿ 8 ಮಂದಿಯ ಅಧಿಕಾರಿಗಳ ತಂಡ ರಚಿಸಲಾಗಿದೆ. ಪ್ರತಿ ತಂಡ 5 ಗ್ರಾಪಂಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿ ವರದಿ ನೀಡುವರು. ಶಾಲೆಗಳಲ್ಲಿ ಶೌಚಾಲಯ ನಿರ್ಮಾಣದ ಬಗ್ಗೆ ಅರಿವು ಕಾರ್ಯಕ್ರಮ, ಜೊತೆಗೆ ಜಾಥಾ, ಪ್ರಬಂಧ ಸ್ಪರ್ಧೆ ನಡೆಸುವರು. ಮನೆ-ಮನೆಗೆ ಭೇಟಿ ನೀಡಿ, ಇನ್ನೂ ಶೌಚಾಲಯ ನಿರ್ಮಿಸಿಕೊಳ್ಳದ ಕುಟುಂಬದವರ ಮನವೊಲಿಸುವರು ಎಂದರು.

33 ಹಳ್ಳಿಗಳಿಗೆ ಜೆಸಿಬಿ: ಆಗಸ್ಟ್‌ 20ರೊಳಗೆ ಶೌಚಾಲಯ ನಿರ್ಮಿಸಿಕೊಳ್ಳಬೇಕಿದೆ. ಇದಕ್ಕಾಗಿ ಹೆಚ್ಚು ಶೌಚಾಲಯ ನಿರ್ಮಿಸಿಕೊಳ್ಳಬೇಕು. ಈ 33 ಹಳ್ಳಿಗಳಿಗೆ ತಾಪಂ ವತಿಯಿಂದ ಜೆಸಿಬಿ ಕೊಂಡೊಯ್ದು ಶೌಚಾಲಯ ಗುಂಡಿಯನ್ನು ಸಹ ನಿರ್ಮಿಸಿಕೊಡಲಾಗುವುದು ಎಂದರು.

ಜಿಪಂ ಸದಸ್ಯೆ ಡಾ.ಪುಷ್ಪಾ ಮಾತನಾಡಿ, ರಾಜ್ಯದಲ್ಲೇ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಶೌಚಾಲಯ ನಿರ್ಮಾಣದಲ್ಲಿ ಪ್ರಗತಿ ಸಾಧಿಸಿರುವ ಹುಣಸೂರು ಮೈಸೂರು ವಿಭಾಗ ಮಟ್ಟದಲ್ಲೇ ಪ್ರಥಮ ಸ್ಥಾನ ಗಿಟ್ಟಿಸುವ ನಿಟ್ಟಿನಲ್ಲಿ ಸಾಗಿರುವುದು ಹೆಮ್ಮೆ ಎನಿಸಿದೆ. ಜಿಲ್ಲಾ ಪಂಚಾಯ್ತಿ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಈ ಯೋಜನೆಗೆ ತಾಲೂಕಿನ ಎಲ್ಲ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದರು.

ತಾಲೂಕು ಪಂಚಾಯ್ತಿ ಅಧ್ಯಕ್ಷೆ ಪದ್ಮಮ್ಮ ಮಾತನಾಡಿದರು. ರೋಟರಿ ಸಂಸ್ಥೆ ಅಧ್ಯಕ್ಷ ಅನಂತರಾಜೇ ಅರಸ್‌ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಸ್ವತ್ಛ ಭಾರತ್‌ ಮಿಶನ್‌ ಸಂಯೋಜಕ ದಿನೇಶ್‌, ಸಹಾಯಕ ನಿರ್ದೇಶಕ ಲಿಂಗಯ್ಯ, ಪಿಡಿಒ ನರಹರಿ, ಸಾಕ್ಷರ ಭಾರತ್‌ ಮಿಶನ್‌ನ ಶಶಿಕುಮಾರ್‌ ಇದ್ದರು.

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.