ಶಾಲೆ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕರಾರಿಲ್ಲ. ಆದರೆ…: ಸಚಿವ ಬಿ.ಸಿ. ನಾಗೇಶ್
Team Udayavani, Feb 7, 2022, 12:15 PM IST
ಮೈಸೂರು: ಶಾಲಾ ಆವರಣದ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ಆದರೆ ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಧರಿಸಿದರೂ ತರಗತಿಗೆ ಪ್ರವೇಶವಿಲ್ಲ. ಕೇಸರಿ ಶಾಲು, ಹಸಿರು ಶಾಲು ಯಾವುದನ್ನೂ ಧರಿಸಿ ಬಂದರೂ ಅವರಿಗೆ ತರಗತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ತರಗತಿಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನವಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಇವರ ಮುಗ್ದತೆಯನ್ನು ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಶಾಲೆಯ ಒಳಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ ಎಂದರು.
ಇದನ್ನೂ ಓದಿ:ತೀರ್ಥಹಳ್ಳಿ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಪ್ರವೇಶಿಸಲು ಅನುಮತಿ ನೀಡದಿದ್ದಕ್ಕೆ ಪ್ರತಿಭಟನೆ
ಇದು ಧರ್ಮದ ಶಿಕ್ಷಣವಲ್ಲ. ಇದನ್ನು ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು. ನಾಳೆಯ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೆವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.
ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ದ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೊಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇದಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.