15 ದಿನದೊಳಗೆ ಅಗಸ್ತಾಪುರಕ್ಕೆ ಕಾವೇರಿ ನೀರು ಪೂರೈಕೆ
Team Udayavani, Jul 30, 2017, 11:43 AM IST
ತಿ.ನರಸೀಪುರ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾಯೋಗಿಕವಾಗಿ ಕಾರ್ಯಾರಂಭಿಸಿದ್ದು, 15 ದಿನಗಳೊಳಗೆ ಅಗಸ್ತಾಪುರ ಗ್ರಾಮಕ್ಕೆ ಕಾವೇರಿ ನದಿಯಿಂದಲೇ ನೇರವಾಗಿ ಕುಡಿಯುವ ನೀರು ಲಭ್ಯವಾಗಲಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಬಿ.ಎಸ್.ರಾಜು ಹೇಳಿದರು.
ವರುಣಾ ವಿಧಾನಸಭಾ ಕ್ಷೇತ್ರದ ತಾಲೂಕಿನ ಅಗಸ್ತಾಪುರ ಗ್ರಾಮದಲ್ಲಿ ಓವರ್‌ಹೆಡ್ ಟ್ಯಾಂಕ್‌ನಿಂದ ನೇರವಾಗಿ ಕಲ್ಪಿಸಿರುವ ಕುಡಿಯುವ ನೀರು ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಆಗಸ್ಟ್‌ನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಸ್ತರಣೆಯಾಗುವುದರಿಂದ ಅಗಸ್ತಾಪುರದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.
ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿರುವುದರಿಂದ ನೀರಿನ ಸೆಲೆ ಬತ್ತಿ ಹೋಗಿದ್ದು, ಮಳೆಯೂ ಬಾರದ್ದರಿಂದ ಕುಡಿಯುವ ನೀರಿಗೆ ತತ್ವಾರ ತಲೆದೋರಿದೆ. ನಾಲೆಗಳಿಗೆ ನೀರು ಹರಿಯದಿದ್ದರಿಂದ ಜಾನುವಾರುಗಳ ಕುಡಿಯುವ ನೀರಿಗೂ ಕುತ್ತು ಬಂದಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಂಡು ಓವರ್‌ಹೆಡ್ ಟ್ಯಾಂಕ್ ಮೂಲಕ ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪ್ರಸನ್ನ ಮಾತನಾಡಿ, ಅಗಸ್ತಾಪುರದಲ್ಲಿ ಕೊರೆಯಿಸಿದ 7 ಕೊಳವೆಬಾವಿಗಳು ವಿಫಲವಾಗಿವೆ. ಇರುವ ಎರಡು ಕೊಳವೆ ಬಾವಿಗಳು ನೀರು ಬಾರದೆ ನಿರುಪಯುಕ್ತವಾಗಿದೆ. ಒಂದು ಕೊಳವೆಬಾವಿಯಲ್ಲಿ ಬರುವ ನೀರನ್ನು ಹೊಸ ಪೈಪ್‌ಲೈನ್ ಅಳವಡಿಸಿಕೊಂಡು ಸಿಂಥೆಕ್ಸ್ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಿ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಪೂರೈಸುತ್ತಿದ್ದೇವೆ.
ಜೊತೆಗೆ ಪಕ್ಕದಲ್ಲಿಯೇ ಇರುವ ಸಿಮೆಂಟ್ ಟ್ಯಾಂಕ್‌ಗಳಲ್ಲಿ ನೀರನ್ನು ತುಂಬಿ, ಜಾನುವಾರುಗಳ ದಾಹವನ್ನು ತಣಿಸಲಾಗುತ್ತಿದೆ. ಈ ಕೊಳವೆಬಾವಿಯೂ ಬತ್ತಿದರೆ ನೀರಿನ ಸಮಸ್ಯೆ ಉಲ್ಬಣಗೊಳ್ಳುÛವ ಸಾಧ್ಯತೆ ಇದೆ. ಹೀಗಾಗಿ ಮತ್ತೂಂದು ಕೊಳವೆಬಾವಿಯನ್ನು ತುರ್ತಾಗಿ ಕೊರೆಯಿಸುವಂತೆ ಜಿಪಂ ನೈರ್ಮಲ್ಯ ಮತ್ತು ಕುಡಿಯುವ ನೀರು ಉಪವಿಭಾಗದ ಎಇಇ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಗ್ರಾಪಂ ಸದಸ್ಯೆ ಮಹದೇವಮ್ಮ ಮಾತನಾಡಿ, ಗ್ರಾಮದಲ್ಲಿ ಪ್ರತಿವರ್ಷವೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದು ಸಾಮಾನ್ಯವಾಗಿದ್ದು, ಈ ಬಾರಿಯೂ ಮುಂಗಾರು ಕೈಕೊಟ್ಟದ್ದರಿಂದ ಜುಲೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ತುಂಬಲ ಗ್ರಾಮ ಪಂಚಾಯಿತಿಯಿಂದ ತುರ್ತು ಕ್ರಮ ಕೈಗೊಂಡರೂ ನೀರಿನ ಸಮಸ್ಯೆ ಪರಿಹಾರವಾಗುತ್ತಿಲ್ಲ. ಗ್ರಾಮದ ಹೊರವಲಯದಲ್ಲಿ ನೀರಿನ ಸೆಲೆಯನ್ನು ಪತ್ತೆಹಚ್ಚಿ ಹೊಸ ಕೊಳವೆಬಾವಿ ಕೊರೆದು, ನೀರು ಪೂರೈಸಬೇಕಾಗಿದೆ ಎಂದರು. ಈ ವೇಳೆ ಬಿಲ್ ಕಲೆಕ್ಟರ್ ಸೋಮಣ್ಣ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.