ಸಿಎಫ್ಟಿಆರ್‌ಐ ನಿರ್ದೇಶಕರ ವಜಾಕ್ಕೆ ಆಗ್ರಹ
Team Udayavani, Jun 19, 2017, 1:05 PM IST
ಮೈಸೂರು: ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿರುವ ಸಿಎಫ್ಟಿಆರ್‌ಐ ನಿರ್ದೇಶಕ ಪ್ರೊ. ರಾಮರಾಜಶೇಖರನ್‌ರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಎಫ್ಟಿಆರ್‌ಐ ಉಳಿಸಿ ಹೋರಾಟ ವೇದಿಕೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಪ್ರತಿಷ್ಠಿತ ಸಂಸ್ಥೆಯಾಗಿರುವ ಸಿಎಫ್ಟಿಆರ್‌ಐನಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದ್ದು, ಕನ್ನಡಿಗರು ಮತ್ತು ಶೋಷಿತ ವರ್ಗಗಳ ನೌಕರರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಪ್ರೊ.ರಾಮರಾಜಶೇಖರನ್ ಸಿಎಫ್ಟಿಆರ್‌ಐ ನಿರ್ದೇಶಕರಾಗಿ ನೇಮಕವಾದ ನಂತರ ಕನ್ನಡಿಗರ ಮೇಲೆ ನಿರಂತರ ಶೋಷಣೆ ನಡೆಸಲಾಗುತ್ತಿದ್ದು, ಆ ಮೂಲಕ ಸಿಎಫ್ಟಿಆರ್‌ಐ ಸಂಸ್ಥೆಯನ್ನು ಸಂಪೂರ್ಣ ತಮೀಳಿಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಪೊ›.ರಾಮರಾಜಶೇಖರನ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಪೊ›.ರಾಮರಾಜಶೇಖರನ್ ಸಂಶೋಧನೆ ಹೆಸರಿನಲ್ಲಿ ಸಾರ್ವಜನಿಕ ಹಣ ದುರುಪಯೋಗ ಮಾಡಲಾಗುತ್ತಿದೆ. ಸಿಎಫ್ಟಿಆರ್‌ಐ ನಿಯಮ ಉಲ್ಲಂ ಸಿ ಕನ್ನಡ ನೌಕರರನ್ನು ಅಮಾನತುಗೊಳಿಸಲಾಗಿದೆ. ಆ ಮೂಲಕ ಸಿಎಫ್ಟಿಆರ್‌ಐ ನೌಕರರನ್ನು ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದ್ದು, ಸಿಎಫ್ಟಿಆರ್‌ಐನಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಹೀಗಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ದೇಶಕ ರಾಮರಾಜಶೇಖರನ್ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು.
ಪ್ರತಿಭಟನೆಯಲ್ಲಿ ಸಾಹಿತಿಗಳಾದ ಪ್ರೊ. ಸಿ.ಪಿ.ಕೃಷ್ಣಕುಮಾರ್, ಪ್ರೊ. ಕೆ.ಎಸ್. ಭಗವಾನ್, ಪ್ರೊ.ಮಹೇಶ್ ಚಂದ್ರಗುರು, ಪ್ರೊ. ಕೃಷ್ಣಮೂರ್ತಿ ಹನೂರು, ಪ್ರೊ.ಅರವಿಂದ ಮಾಲಗತ್ತಿ, ಪತ್ರಿಕೋದ್ಯಮಿ ರಾಜಶೇಖರ ಕೋಟಿ, ಸಿಎಫ್ಟಿಆರ್‌ಐ ಉಳಿಸಿ ಹೋರಾಟ ವೇದಿಕೆಯ ಅಧ್ಯಕ್ಷ ಕೆ.ಎಸ್. ಶಿವರಾಮ್, ಸಂಚಾಲ ಕರಾದ ಎಂ. ಚಂದ್ರಶೇಖರ್, ಜಾಕೀರ್ ಹುಸೇನ್, ಮುಖಂಡರಾದ ರವಿಶಂಕರ್, ಬೋಗಾದಿ ನಂದೀಶ್, ಭಾನು ಮೋಹನ್, ಮಹೇಶ್ ಸೋಸಲೆ, ಸುರೇಶ್ ಬಾಬು, ವೆಂಕಟೇಶ್ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.