ಸಿದ್ದರಾಮಯ್ಯನಷ್ಟು ದಲಿತ ವಿರೋಧಿ ಮತ್ತೂಬ್ಬರಿಲ್ಲ: ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ

Team Udayavani, Jun 7, 2022, 3:22 PM IST

ಸಿದ್ದರಾಮಯ್ಯನಷ್ಟು ದಲಿತ ವಿರೋಧಿ ಮತ್ತೂಬ್ಬರಿಲ್ಲ: ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿಯಾಗುತ್ತಿರುವವರನ್ನೆಲ್ಲ ರಾಜಕೀಯವಾಗಿ ಕತ್ತು ಹಿಸುಕಿ ಮುಗಿಸುತ್ತಿದ್ದಾರೆ. ಅವರಷ್ಟು ದಲಿತ ವಿರೋಧಿ ಬೇರೆ ಯಾರೂ ಇಲ್ಲ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ ಹೊರಹಾಕಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲು ನೋಟಕ್ಕೆ ಬಸಪ್ಪ ಆದರೆ ಒಳಗೆ ವಿಷಪ್ಪ. ಅವರು ಒಂದು ರೀತಿ ಗೋಮುಖ ವ್ಯಾಘ್ರ. ಕಳೆದ ಬಾರಿ ಕಾಂಗ್ರೆಸ್‌ ದಲಿತರನ್ನು ಮುಖ್ಯಮಂತ್ರಿ ಮಾಡಬೇಕಾಗಿತ್ತು. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಕಾಂಕ್ಷಿ ಯಾಗಿದ್ದವರನ್ನೆಲ್ಲಾ ರಾಜಕೀಯವಾಗಿ ಮುಗಿಸಿದರು. ಶಾಸಕರನ್ನು ಖರೀದಿಸಿ ಮುಖ್ಯಮಂತ್ರಿ ಆದರು. ಆ ಮೂಲಕ ದಲಿತರಿಗೆ ಸಿಎಂ ಸ್ಥಾನ ತಪ್ಪಿಸಿದರು ಎಂದು ದೂರಿದರು.

ಸಿದ್ದರಾಮಯ್ಯ ಲೀಡರ್‌ ಅಲ್ಲ: ಕುತಂತ್ರ ರಾಜಕಾರಣದಿಂದ ಕಾಂಗ್ರೆಸ್‌ನಲ್ಲಿ ತಾನೊಬ್ಬನೇ ನಾಯಕರಾಗಿ ಬೆಳೆದರು. ಹತ್ತು ಜನ ಗೆಲ್ಲಿಸಿಕೊಂಡು ಬರುವವನು ನಿಜವಾದ ನಾಯಕ. ಆದರೆ ಸಿದ್ದ ರಾಮಯ್ಯ ಎಲ್ಲರನ್ನೂ ತುಳಿದುಕೊಂಡು ಬರುತ್ತಿದ್ದಾರೆ. ಹಾಗಾಗಿ ಅವರು ನಿಜವಾದ ನಾಯಕರಲ್ಲ, ಚಾಮುಂಡೇಶ್ವರಿ ಯಲ್ಲಿ ಅವರ ಸ್ಥಿತಿ ಏನಾಯಿತು. ಈಗ ಬಾದಾಮಿಯಲ್ಲಿ ಏನು ಪರಿಸ್ಥಿತಿ ಇದೆ. ಹೀಗಾಗಿ ಗೆಲ್ಲಲು ಯಾವುದೇ ಕ್ಷೇತ್ರವಿಲ್ಲದೆ, ಕ್ಷೇತ್ರದ ಹುಡುಕಾಟ ನಡೆಸುತ್ತಿದ್ದಾರೆ. ಇವರೊಬ್ಬ ಲೀಡರ್‌ ರಾ, ಬೊಗಳೆ ಭಾಷಣ ಮಾಡುವವರು ಲೀಡರ್‌ ಅಲ್ಲ ಎಂದು ಹರಿಹಾಯ್ದರು.

ದಲಿತ ಸಿಎಂ ಬಿಜೆಪಿಯಿಂದ ಸಾಧ್ಯ: ಕಾಂಗ್ರೆಸ್‌ ಪಕ್ಷ ಕಳೆದ 7 ದಶಕಗಳಿಂದ ದಲಿತರನ್ನು ಕೇವಲ ವೋಟ್‌ ಬ್ಯಾಂಕ್‌ ಮಾಡಿಕೊಂಡು ಬಂದಿದೆ. ಅಧಿಕಾರ ಹಂಚಿಕೆ ವಿಚಾರ ಬಂದಾಗ ದಲಿತರನ್ನು ಕಡೆಗಣಿಸುತ್ತಾ ಬಂದಿದೆ. ಕಾಂಗ್ರೆಸ್‌ನಲ್ಲಿರುವ ದಲಿತ ಮುಖಂಡರನ್ನು ಸಿದ್ದು ಮೂಲೆ ಗುಂಪು ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ದಲಿತ ಮುಖ್ಯಮಂತ್ರಿ ಸಾಧ್ಯವಿಲ್ಲ, ಅದೇನಿದ್ದರೂ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ಮೂರನೇ ಸ್ಥಾನ ಗೆಲ್ಲುವ ಸ್ಪಷ್ಟವಾದ ಅವಕಾಶವಿರುವುದು ಬಿಜೆಪಿಗೆ ಮಾತ್ರ. ಹೀಗಿದ್ದರೂ ಕಾಂಗ್ರೆಸ್‌ ಏನಾದರೂ ವ್ಯತ್ಯಾಸ ಮಾಡಲು ಪ್ರಯತ್ನ ನಡೆಸಿದರೆ ಸಿಗುವ ಒಂದು ಸ್ಥಾನವನ್ನೂ ಕೊಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಚಡ್ಡಿ ರಾಜಕಾರಣ ತಾರಕಕ್ಕೇರಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಚಡ್ಡಿ ಸುಡುವುದಾಗಿ ಹೇಳಿರುವ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದರು.

ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯರ ಚಡ್ಡಿಯನ್ನು ಸುಟ್ಟು ಕಳುಹಿಸಿದ್ದಾರೆ. ಮತ್ತೆ ನಿಮ್ಮ ಚಡ್ಡಿಯನ್ನು ನೀವೇ ಸುಟ್ಟುಕೊಂಡರೆ ಇದಕ್ಕಿಂತ ವಿಪರ್ಯಾಸ ಮತ್ತೂಂದಿಲ್ಲ. ಚಡ್ಡಿ ಸುಡುವ ಆಂದೋಲನ ಮಾಡುವುದಾಗಿ ಹೇಳಿದ್ದೀರಿ. ಇದನ್ನು ನಾನು ಕೂಡ ಬೆಂಬಲಿಸುತ್ತೇನೆ. ಈ ಸಂಬಂಧ ಬಿಜೆಪಿಯ ಎಸ್‌ಸಿ ಮೋರ್ಚಾ ಅಧ್ಯಕ್ಷರುಗಳಿಗೂ ಕರೆ ನೀಡುತ್ತೇನೆ. ಎಲ್ಲರ ಚಡ್ಡಿಗಳನ್ನು ಸಿದ್ದರಾಮಯಯ್ಯಗೆ ಕಳುಹಿಸಿ ಕೊಡಲು ಕರೆ ನೀಡುತ್ತೇನೆ. ಆದರೆ, ಅದಕ್ಕೂ ಮೊದಲು ಸಿದ್ದರಾಮಯ್ಯ ಪರಿಸರ ನಿಯಂತ್ರಣ ಮಂಡಳಿಯಲ್ಲಿ ಚಡ್ಡಿ ಸುಡಲು ಅನುಮತಿ ಪಡೆಯಲಿ ಎಂದು ಲೇವಡಿ ಮಾಡಿದರು. ಚಡ್ಡಿಯನ್ನು ಕಾಂಗ್ರೆಸ್‌ ನವರು ಧರಿಸಿದ್ದರು. ಈ ಹಿಂದೆ ಪೊಲೀಸ್‌, ಸೈನಿಕರು ಸೇರಿದಂತೆ ಎಲ್ಲರು ಧರಿಸುತ್ತಿದ್ದರು. ಈಗಲೂ ಯುವ ಸಮೂಹ ಚಡ್ಡಿಯನ್ನು ಧರಿಸುತ್ತಿದೆ. ಮನುಷ್ಯರ ಮಾನವನ್ನು ಕಾಪಾಡುತ್ತಿದೆ. ಅದು ಮಾನವರ ಗೌರವದ ಸಂಕೇತ ವಾಗಿದೆ. ಅಂತಹ ಚಡ್ಡಿಯನ್ನು ಕಾಂಗ್ರೆಸ್‌ನವರು ಸುಟ್ಟಿದ್ದಾರೆ. ಆ ಮೂಲಕ ಮಾನವರ ಮರ್ಯಾದೆ, ಗೌರವ ಗಳನ್ನು ಸುಟ್ಟಿದ್ದಾರೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.