ಚಾಮುಂಡೇಶ್ವರಿ ಮುಜರಾಯಿ ದೇವಸ್ಥಾನ ಅರ್ಚಕರ ಪ್ರತಿಭಟನೆ
Team Udayavani, Dec 14, 2018, 11:48 AM IST
ಮೈಸೂರು: ಶ್ರೀ ಚಾಮುಂಡೇಶ್ವರಿ ಹಾಗೂ ಸಮೂಹ ದೇವಾಲಯಗಳ ನೌಕರರ ಸಂಘದ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳ ನಡುವಿನ ಸಂಧಾನ ಸಭೆ ವಿಫಲವಾಗಿದೆ. ಈ ನಡುವೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರು ಇಂದಿನಿಂದ ಮುಷ್ಕರ ಆರಂಭಿಸಲಿದ್ದಾರೆ.
ಮುಜರಾಯಿ ದೇವಸ್ಥಾನಗಳ ಅರ್ಚಕರು ಮುಷ್ಕರ ನಡೆಸಲು ತೀರ್ಮಾನಿಸಿರುವ ಮನವೊಲಿಸುವ ಸಲುವಾಗಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ನೇತೃತ್ವದಲ್ಲಿ ಗುರುವಾರ ಸಂಧಾನ ಸಭೆ ನಡೆಸಲಾಯಿತು. ಆದರೆ ಜಿಲ್ಲಾಧಿಕಾರಿಗಳ ಮನವೊಲಿಕೆ ನಡುವೆಯೂ ಮುಷ್ಕರವನ್ನು ಹಿಂಪಡೆಯದಿರಲು ಅರ್ಚಕರು ತೀರ್ಮಾನಿಸಿದರು.
ತಮ್ಮ ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಕಳೆದ ಒಂದು ವಾರದಿಂದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಶುಕ್ರವಾರ ಮುಂಜಾನೆ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿದ ನಂತರ, ಬೆಳಗ್ಗೆ 8 ಗಂಟೆಯಿಂದ ಚಾಮುಂಡಿಬೆಟ್ಟದ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಲು ಸಂಘದ ಪ್ರಮುಖರು ತೀರ್ಮಾನಿಸಿದರು.
ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರುಗಳಿಗೆ 6ನೇ ವೇತನ ಆಯೋಗದ ನಿಯದಂತೆ ಶೇ.30 ವೇತನ ಹೆಚ್ಚಿಸಬೇಕು. ಹೆಚ್ಚುವರಿ ತುಟ್ಟಿಭತ್ಯೆ ಸಿಕ್ಕಿದರೆ ಮಂಜೂರು ಮಾಡಿಕೊಳ್ಳಲು ಕಾಯಂ ಆದೇಶ ನೀಡಬೇಕು. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶವಿದ್ದರೂ ಬೋನಸ್ ದೊರೆತಿಲ್ಲ.
ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ 70ಕ್ಕೂ ಹೆಚ್ಚು ನೌಕರರನ್ನು ಕಾಯಂ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶ್ರೀ ಚಾಮುಂಡೇಶ್ವರಿ ಹಾಗೂ ಸಮೂಹ ದೇವಾಲಯಗಳ ನೌಕರರ ಸಂಘದ ಪ್ರತಿಭಟನೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.