ನಸುಕಿನಿಂದಲೇ ಮಳೆ ಲೆಕ್ಕಿಸದೆ ಚಾಮುಂಡಿ ದರ್ಶನ
ಚಾಮುಂಡೇಶ್ವರಿಗೆ ದುರ್ಗಿ ಅಲಂಕಾರ • ಆಷಾಢ ಮಾಸದ ಕಡೆಯ ಶುಕ್ರವಾರ • ಬೆಟ್ಟದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ
Team Udayavani, Jul 27, 2019, 9:56 AM IST
ಕೊನೆಯ ಆಷಾಢ ಶುಕ್ರವಾರ ಮುಂಜಾನೆ ಚಾಮುಂಡಿ ಬೆಟ್ಟದಲ್ಲಿ ಕಂಡು ಬಂದ ಭಕ್ತರು.
ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪುನೀತರಾದರು.
ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಅರ್ಚಕರು ತಾಯಿ ಚಾಮುಂಡೇಶ್ವರಿಗೆ ಮುಂಜಾನೆ 3.30ರಿಂದಲೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಿದರು. ಬೆಳಗ್ಗೆ 5.30 ರಿಂದ ರಾತ್ರಿ 10 ವರೆಗೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆ. 9.30 ಕ್ಕೆ ದೇವಿಗೆ ಮಹಾ ಮಂಗಳಾರತಿ, ಸಂಜೆ 6 ರಿಂದ 7.30ರವರೆಗೆ ಅಭಿಷೇಕ ನಡೆಯಿತು. ರಾಜ ವಂಶಸ್ಥ ಯದುವೀರ್ ದಂಪತಿ ಮೊದಲ ಪೂಜೆ ನೆರವೇರಿಸಿದರು.
ದುರ್ಗಿ ಅಲಂಕಾರ: ಕೊನೆಯ ಆಷಾಢ ಶುಕ್ರವಾರದಂದು ನಾಡಿನ ಅದಿದೇವತೆಗೆ ವಿಶೇಷ ದುರ್ಗಿ ( ಸಿಂಹ ವಾಹಿನಿ ) ಅಲಂಕಾರ ಮಾಡಲಾಗಿತ್ತು. ದೇವಿಗೆ ನೀಲಿ ಸೀರೆಯುನುಡಿಸಿ, ಮಲ್ಲಿಗೆ, ಕನಕಾಂಬರ, ಸೇವಂತಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು.
ಕೆಂಪು, ಹಳದಿ, ನೀಲಿ, ಬಿಳಿ ಸೇರಿದಂತೆ ವಿವಿಧ ಬಗೆಯ ಬಣ್ಣದ ಗುಲಾಬಿ ಹೂವು ಹಾಗೂ ಸೇವಂತಿ ಹೂವಿನಿಂದ ದೇವಸ್ಥಾನದ ಪೂರ್ಣ ಭಾಗ ಅಲಂಕರಿಸಲಾಗಿತ್ತು. ಅಲ್ಲದೇ ಅಲಂಕಾರಿಕಾ ಹೂವುಗಳನ್ನು ದೇವಸ್ಥಾನದ ಗರ್ಭಗುಡಿಯಿಂದ ಹೊರಗೆ ಸಂಪೂರ್ಣವಾಗಿ ಬಳಸಿದರಿಂದ ಅಲಂಕಾರಕ್ಕೆ ಮತ್ತಷ್ಟು ಮೆರಗು ನೀಡಿದಂತಿತ್ತು. ಈ ಬಾರಿಯ ಹೂವಿನ ಅಲಂಕಾರವನ್ನು ಮೈಸೂರಿನ ಉದ್ಯಮಿ ಜೀವನ್ ಹಾಗೂ ಬೆಂಗಳೂರಿನ ಶೇಖರ್ ಮಾಡಿದ್ದರು.
ಭಕ್ತಿಯಲ್ಲಿ ಮಿಂದೆದ್ದ ಭಕ್ತರು: ಮುಂಜಾನೆ ನಸುಕಿನಲ್ಲಿಯೇ ಜಿಟಿ ಜಿಟಿ ಮಳೆಯನ್ನೂ ಲೆಕ್ಕಿಸದೇ, ಬೆಟ್ಟದಲ್ಲಿ ನೆರೆದಿದ್ದ ಸಾವಿರಾರು ಭಕ್ತರು ‘ಜೈ ಚಾಮುಂಡೇಶ್ವರಿ’, ‘ಜೈ ನಾಡದೇವತೆ’, ‘ಜೈ ಶಕ್ತಿದೇವಿ’ ಎಂಬ ಜಯಘೋಷಗಳು ಕೂಗಿದರು. ಹರಕೆ ಹೊತ್ತ ಮಹಿಳೆಯರು ದೇವಸ್ಥಾನದ ಆವರಣದಲ್ಲಿ ಎಣ್ಣೆ ದೀಪ, ಬೆಲ್ಲದಾರತಿಗಳನ್ನು ಬೆಳಗಿ ಧನ್ಯತಾಭಾವ ಮೆರೆದರು.
ಮೋಡ ಆವರಿಸಿದ್ದ ತಣ್ಣನೆಯ ವಾತಾವರಣ, ಆಷಾಢ ಮಾಸದ ಮೈ ಕೊರೆಯುವ ಗಾಳಿ, ಆಗಾಗ್ಗೆ ಬರುತ್ತಿದ್ದ ತುಂತುರು ಮಳೆಯ ನಡುವೆಯೇ ಮಧ್ಯರಾತ್ರಿಯಿಂದಲೇ ಸರದಿ ಸಾಲಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದರು. ರಾಜ ವಂಶಸ್ಥ ಯದುವೀರ್ ದಂಪತಿ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ, ಮೇಯರ್ ಪುಷ್ಪಲತಾ ಇನ್ನಿತರರ ಗಣ್ಯರು ವಿಶೇಷ ಪೂಜೆ ಸಲ್ಲಿಸಿ ಚಾಮುಂಡೇಶ್ವರಿ ದರ್ಶನ ಪಡೆದರು.
ಕೊನೆಯ ಆಷಾಢ ಶುಕ್ರವಾರ ಹಿನ್ನೆಲೆ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿಯೇ ಇತ್ತು. ಸಾವಿರಾರು ಭಕ್ತರು ಬೆಳಗಿನ ಜಾವದಿಂದಲೇ ತಾಯಿ ದರ್ಶ ನಕ್ಕೆ ಮುಗಿಬಿದ್ದರು. ಹೀಗಾಗಿ ಸಂಜೆಯವರೆಗೆ ಭಕ್ತರು ದರ್ಶನಕ್ಕೆ ಸರದಿ ಸಾಲಿನಲ್ಲಿ ಹೆಚ್ಚು ಸಮಯ ನಿಲ್ಲಬೇಕಾಗಿತ್ತು.
ಭಕ್ತರು
ಮುಂಜಾನೆ 3 ಗಂಟೆಯಿಂದಲೇ ಬೆಟ್ಟಕ್ಕೆ ಬರಲಾರಂಭಿಸಿದರು. ಕೆಲವರು ಮೆಟ್ಟಿಲು ಮೂಲಕ ಬೆಟ್ಟದ ಮೆಟ್ಟಿಲುಗಳನ್ನು ಹತ್ತಿ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ತಮಿಳುನಾಡು, ಬೆಂಗಳೂರು, ಮಂಡ್ಯ, ಹಾಸನ ಸೇರಿದಂತೆ ಹೊರ ಜಿಲ್ಲೆಗಳಿಂದ ಬಂದ ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್ ಹೆಲಿಪ್ಯಾಡ್‌ನಲ್ಲಿ ನಿಲ್ಲಿಸಿ ಉಚಿತ ಬಸ್‌ಗಳ ಮೂಲಕ ಬೆಟ್ಟಕ್ಕೆ ತೆರಳಿದರು.
ಬೆಟ್ಟಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಹೆಲಿಪ್ಯಾಡ್‌ನಿಂದ ಚಾಮುಂಡಿಬೆಟ್ಟಕ್ಕೆ ಭಕ್ತರನ್ನು ಕರೆದೊಯ್ಯಲು ಜಿಲ್ಲಾಡಳಿತ 22ಕ್ಕೂ ಹೆಚ್ಚು ಉಚಿತ ಬಸ್ ವ್ಯವಸ್ಥೆಯನ್ನು ಮಾಡಿತ್ತು. ಇದರೊಂದಿಗೆ ನಗರ ಬಸ್ ನಿಲ್ದಾಣದಿಂದ 10 ವೋಲ್ವೋ ಬಸ್, 35 ಸಾಮನ್ಯ ಬಸ್ ವ್ಯವಸ್ಥೆ ಕಲ್ಪಿಸಿತ್ತು. ಪ್ರತಿ ಐದು ನಿಮಿಷಕ್ಕೊಂದು ಬಸ್ ಚಾಮುಂಡಿಬೆಟ್ಟಕ್ಕೆ ಹೊರಡುವ ವ್ಯವಸ್ಥೆ ಮಾಡಿತ್ತು.
ಬಿಗಿ ಬಂದೋಬಸ್ತ್: ಅಧಿಕ ಸಂಖ್ಯೆಯಲ್ಲಿ ಭಕ್ತರು ಏಕ ಕಾಲಕ್ಕೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಡಿಸಿಪಿ ಕವಿತಾ ನೇತೃತ್ವ ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸ ಲಾಗಿತ್ತು. ಅಲ್ಲದೆ ಗುಂಪು ಚದುರಿಸಲು ಅಶ್ವರೋಹಿ ದಳದ ಸಿಬ್ಬಂದಿ ಗಳನ್ನು ನಿಯೋಜಿಸಲಾಗಿತ್ತು. ಸರಗಳ್ಳರು, ಜೇಬುಗಳ್ಳರ ಕೃತ್ಯಕ್ಕೆ ಬ್ರೇಕ್ ಹಾಕಲು ಮಫ್ತಿ ಯಲ್ಲಿ ಪೊಲೀಸರ ಗಸ್ತು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.