ಚಾಮುಂಡಿ ದರ್ಶನಕ್ಕೆ ನಸುಕಿನಿಂದಲೇ ಭಕ್ತಸಾಗರ
Team Udayavani, Jul 13, 2019, 3:00 AM IST
ಮೈಸೂರು: ಎರಡನೇ ಆಷಾಢ ಶುಕ್ರವಾರದಂದು ಸಹಸ್ರಾರು ಭಕ್ತರು ಬೆಟ್ಟಕ್ಕೆ ಆಗಮಿಸಿ, ದೇವಿ ಚಾಮುಂಡೇಶ್ವರಿ ದರ್ಶನ ಪಡೆದರು.
ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಅರ್ಚಕರು ತಾಯಿ ಚಾಮುಂಡೇಶ್ವರಿಗೆ ಮುಂಜಾನೆ 3.30ಕ್ಕೆ ಮಹಾನ್ಯಾಸ ಪೂರ್ವಕ ಅಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ನಾನಾ ಪೂಜ ಕೈಂಕರ್ಯ ನೆರವೇರಿಸಿದರು.
ಬೆಳಗ್ಗೆ 5 ರಿಂದ ರಾತ್ರಿ 10 ವರೆಗೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆ. 9.30 ಕ್ಕೆ ದೇವಿಗೆ ಮಹಾ ಮಂಗಳಾರತಿ ನಡೆಯಿತು.
ನಾಗಲಕ್ಷ್ಮೀ ಅಲಂಕಾರ: ಎರಡನೇ ಆಷಾಢ ಶುಕ್ರವಾರದಂದು ನಾಡಿನ ಅದಿದೇವತೆಗೆ ವಿಶೇಷ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ನಾನಾ ಬಗೆಯ ಹೂವಿನಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು.
ಎಣ್ಣೆ ದೀಪ: ಮುಂಜಾನೆಯಿಂದಲೇ ನೆರೆದಿದ್ದ ಸಾವಿರಾರು ಭಕ್ತರು ಚಾಮುಂಡೇಶ್ವರಿಗೆ ಜಯಘೋಷಗಳನ್ನು ಕೂಗಿದರು. ಹರಕೆ ಹೊತ್ತ ಮಹಿಳೆಯರು ದೇವಸ್ಥಾನದ ಆವರಣದಲ್ಲಿ ಎಣ್ಣೆ ದೀಪಗಳನ್ನು ಹಚ್ಚಿ ತಮ್ಮ ಹರಕೆ ತೀರಿಸಿದರು.
ಗಣ್ಯರ ಭೇಟಿ: ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ. ರವಿ, ಶಾಸಕ ಎಲ್. ನಾಗೇಂದ್ರ ಸೇರಿದಂತೆ ಇನ್ನಿತರರ ಗಣ್ಯರು ವಿಶೇಷ ಪೂಜೆ ಸಲ್ಲಿಸಿ ಚಾಮುಂಡೇಶ್ವರಿ ದರ್ಶನ ಪಡೆದರು.
ಪ್ರಸಾದ ಸಂತರ್ಪಣೆ: ಕೊಯಮುತ್ತೂರಿನ ದುರ್ಗಾ ಎಜೆನ್ಸಿ ವತಿಯಿಂದ ದಾಸೋಹ ಭವನದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು. ಬೆಳಗ್ಗೆ 5.45ಕ್ಕೆ ಯೋಗನರಸಿಂಹಸ್ವಾಮಿ ದೇಗುಲದ ಪ್ರಧಾನ ಅರ್ಚಕರಾದ ಭಾಷ್ಯಂ ಸ್ವಾಮೀಜಿ ದಾಸೋಹಕ್ಕೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಅನ್ನಸಂತರ್ಪಣೆ ರಾತ್ರಿ 7.30 ರವರೆಗೂ ನಡೆಯಿತು. ಮೊಸರನ್ನ, ಪಲಾವ್, ಬಿಸಿಬೇಳೆ ಬಾತ್, ಕೇಸರಿ ಬಾತನ್ನು ಭಕ್ತರಿಗೆ ನೀಡಲಾಯಿತು. ಜತೆಗೆ ಬೆಟ್ಟದ ಬಸ್ ನಿಲ್ದಾಣದ ಬಳಿ ಹರಕೆ ಹೊತ್ತಿದ್ದ ಸಾರ್ವಜನಿಕರು ಆಟೋ ಮತ್ತು ಕಾರುಗಳ ಮೂಲಕ ಭಕ್ತರಿಗೆ ಪ್ರಸಾದ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.