ಸೋಂಕು ತಡೆಗೆ “ಚೇಸಿಂಗ್‌ ದಿ ವೈರಸ್‌’

Team Udayavani, Jul 17, 2020, 4:18 PM IST

ಸೋಂಕು ತಡೆಗೆ “ಚೇಸಿಂಗ್‌ ದಿ ವೈರಸ್‌’

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಇದರ ಒಂದು ಭಾಗವಾಗಿ ಮೈಸೂರಿನ ಅರ್ಧದಷ್ಟು ಸೋಂಕು ಪ್ರಕರಣಗಳಿರುವ ಎನ್‌.ಆರ್‌. ಕ್ಷೇತ್ರದ ಲಾಕ್‌ಡೌನ್‌ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಗರದಲ್ಲಿ ಕಳೆದ 15 ದಿನಗಳಿಂದ ಕೋವಿಡ್ ಸೋಂಕು ಏರಿಕೆಯಾಗುತ್ತಲೇ ಇದೆ. ಸೋಂಕು ಹರಡುವಿಕೆ ತಡೆಯಲು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಗುತ್ತಿಲ್ಲ. ಅಲ್ಲದೆ ಎನ್‌.ಆರ್‌.ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಕ್ಷೇತ್ರದ ಹಲವು ಬಡಾವಣೆಗಳ ಲಾಕ್‌ಡೌನ್‌ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

ಚೇಸಿಂಗ್‌ ದಿ ವೈರಸ್‌: ಮೈಸೂರಿನಲ್ಲಿ ಚೇಸಿಂಗ್‌ ದಿ ವೈರಸ್‌ ಶೀರ್ಷಿಕೆಯಡಿ ಕಾರ್ಯಾಚರಣೆ ಮೂಲಕ ಕೊರೊನಾ ತಡೆಗಟ್ಟಲು ಜಿಲ್ಲಾಡಳಿತ ಮುಂದಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌ ಈಗಾಗಲೇ ಸ್ಥಳೀಯ ಮುಖಂಡರು, ಪೊಲೀಸ್‌ ಇಲಾಖೆ, ಆರೋಗ್ಯ ಇಲಾಖೆ, ಪಾಲಿಕೆ ಅಧಿಕಾರಿಗಳು ಹಾಗೂ ಸ್ವಯಂ ಸೇವಕರ ಜೊತೆಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್‌ಆರ್‌ ಕ್ಷೇತ್ರದಲ್ಲಿ ಸೋಂಕು ಹೆಚ್ಚಾಗಿದ್ದು, ಸೋಂಕಿನಿಂದ ಮೃತಪಟ್ಟವರ ಪ್ರಮಾಣದಲ್ಲೂ ಎನ್‌.ಆರ್‌ ಕ್ಷೇತ್ರಕ್ಕೆ ಸಿಂಹಪಾಲಿದೆ. ಈ ನಿಟ್ಟಿನಲ್ಲಿ ಎನ್‌.ಆರ್‌. ಕ್ಷೇತ್ರದ ಉದಯಗಿರಿ, ಕಲ್ಯಾಣಗಿರಿ, ಮಂಡಿ ಮೊಹಲ್ಲಾ, ಸುಭಾಷ್‌ ನಗರವನ್ನು ಲಾಕ್‌ ಡೌನ್‌ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಶುಕ್ರವಾರ ಅಥವಾ ಶನಿವಾರ ಸ್ಪಷ್ಟ ನಿರ್ಧಾರ ಹೊರ ಬೀಳಲಿದೆ.

ಧಾರಾವಿ ಮಾದರಿ ಪ್ರಯೋಗ: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಬೈನ ಧಾರಾವಿ ಮಾದರಿಯ ಪ್ರಯೋಗ ಮಾಡಲು ಜಿಲ್ಲಾಧಿಕಾರಿ ಮುಂದಾಗಿದ್ದು, ಮನೆ ಮನೆ ಸರ್ವೆ ನಡೆಸಿ ವೈರಸ್‌ ನಿಯಂತ್ರಿಸಲು ಯೋಜನೆ ರೂಪಿಸಿದ್ದಾರೆ. ಇನ್ನು ರೋಗ ಲಕ್ಷಣವಿದ್ದರೂ ಜನ ಆಸ್ಪತ್ರೆಗೆ ಬರುತ್ತಿಲ್ಲ. ಸ್ಯಾನಿಟೈಸರ್‌, ಮಾಸ್ಕ್, ಸಾಮಾಜಿಕ ಅಂತರವೂ ಇಲ್ಲದೇ ಜನ ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ನಿರ್ಲಕ್ಷ್ಯಕ್ಕೆ ಲಾಕ್‌ಡೌನ್‌ ಶಿಕ್ಷೆ ನೀಡಲು ಚಿಂತನೆ ನಡೆಸಿದ್ದಾರೆ

ಸಾಮಾಜಿಕ ಅಂತರ ತಿಳಿಸುವ ಡಿವೈಸ್‌ :  ಮಹಾಮಾರಿ ಕೋವಿಡ್ ವೈರಸ್‌ ಸೋಂಕಿನಿಂದ ದೂರ ಉಳಿಯಲು ಮಾಸ್ಕ್, ಸ್ಯಾನಿಟೈಸರ್‌ನಷ್ಟೇ ಸಾಮಾಜಿಕ ಅಂತರ ಅತ್ಯುತ್ತಮ ಮಾರ್ಗವಾಗಿದ್ದು, ಇದಕ್ಕೆ ಸಹಾಯ ಮಾಡುವ ಸಲುವಾಗಿಯೇ ಮೈಸೂರಿನ ಸಂಶೋಧಕರ ತಂಡವೊಂದು ಸೋಷಿಯಲ್‌ ಡಿಸ್ಟೆನ್ಸ್‌ ಎಂಬ ಡಿವೈಸ್‌ನ್ನು ಕಂಡು ಹಿಡಿದಿದೆ. ಈ ಡಿವೈಸ್‌ ನಮ್ಮ ಸುತ್ತಮುತ್ತಲಿನ ಸೋಂಕಿತ ವ್ಯಕ್ತಿಗಳಿದ್ದರೆ ನಮಗೆ ಮಾಹಿತಿ ನೀಡುತ್ತದೆ. ನಮ್ಮಿಂದ 6 ಅಡಿಗಳ ಅಂತರದಲ್ಲಿರುವ ಅತೀವ ಜ್ವರ ಇರುವ ವ್ಯಕ್ತಿಗಳಿದ್ದರೆ ಸೌಂಡ್‌ ಮೂಲಕ ಈ ಸಾಧನ ನಮಗೆ ಮಾಹಿತಿ ನೀಡುತ್ತದೆ. ಕೈಯಲ್ಲಿ ಹಿಡಿದುಕೊಳ್ಳುವಷ್ಟು ಸುಲಭವಾಗಿ ಈ ಡಿವೈಸ್‌ ಇದ್ದು, ಕೆಲ ಪ್ರದೇಶಗಳು ಮತ್ತು ಸಮುದಾಯಗಳಲ್ಲಿ ಕೊರೊನಾ ರೋಗಿಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಆರೋಗ್ಯವಂತ ವ್ಯಕ್ತಿಗಳಿಂದ ಸೋಂಕಿತ ರೋಗಿಗಳನ್ನು ಪ್ರತ್ಯೇಕಿಸಲು ಈ ಸಾಧನ ಉಪಯುಕ್ತವಾಗಿದೆ. ಅಮೆರಿಕಾದಲ್ಲಿರುವ ಮೈಸೂರು ಮೂಲದ ರಾಹುಲ್‌ ರೆಡ್ಡಿ ನಾಡಿಕಟ್ಟು, ಸಿಕಂದರ್‌ ಮೋಯ್ಸಿದ್ದೀನ್‌ ಮೊಹಮದ್‌ ತಂಡ ಈ ಸಾಧನ ಕಂಡು ಹಿಡಿದಿದೆ.

ಕೋವಿಡ್‌ ಸೆಂಟರ್‌ ಸಿದ್ಧತೆ :  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ಗುರುವಾರ ಸ್ವತ್ಛತಾ ಕಾರ್ಯ ನಡೆಸಲಾಯಿತು. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆರಂಭಿಸುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌ ಸ್ಥಳಕ್ಕೆ ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಜಾಗದಲ್ಲಿ 800ಕ್ಕೂ ಹೆಚ್ಚು ಬೆಡ್‌ಗಳನ್ನು ಹಾಕಲು ಸಿದ್ಧತೆ ಮಾಡಲಾಗಿದೆ.

ಅವ್ಯವಸ್ಥೆ ಸರಿಪಡಿಸಿ :  ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಎಲ್ಲಾ ಬೆಡ್‌ ಗಳು ಪೂರ್ಣಗೊಂಡ ಬಳಿಕ, ಸೋಂಕಿತರಿಗೆ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆಸ್ಪತ್ರೆಯಲ್ಲಿ ಶುಚಿತ್ವಲ್ಲ, ಸರಿಯಾಗಿ ಔಷಧ ನೀಡುತ್ತಿಲ್ಲ, ವೈದ್ಯರು ಸರಿಯಾಗಿ ವಿಚಾರಿಸಿಕೊಳ್ಳುತ್ತಿಲ್ಲವೆಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಮಹಿಳೆಯೊಬ್ಬರು ವಿಡಿಯೋದಲ್ಲಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಿ, ಸರಿಯಾದ ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.