ಮೃಗಾಲಯದಲ್ಲಿ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಮುಕ್ತ

ಪ್ರಾಣಿ ವಿನಿಮಯಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಮೈಸೂರಿಗೆ ಬಂದಿರುವ ಮೂರು ಚೀತಾಗಳು

Team Udayavani, Oct 16, 2020, 2:43 PM IST

ಮೃಗಾಲಯದಲ್ಲಿ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಮುಕ್ತ

ಮೈಸೂರು: ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿದ್ದ ಮೂರು ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹಸಿರು ನಿಶಾನೆ ತೋರಿದರು.

ಮೃಗಾಲಯದಲ್ಲಿ ಗುರುವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚೀತಾಗಳನ್ನು ವೀಕ್ಷಿಸಿ ಬಳಿಕ ಸಾರ್ವಜನಿಕ ವೀಕ್ಷಣೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಚಾಮರಾಜೇಂದ್ರ ಮೃಗಾಲಯಕ್ಕೆ ಕರೆತರಲಾಗಿದ್ದ ಎರಡು ಹೆಣ್ಣು ಮತ್ತು ಒಂದು ಗಂಡು ಚೀತಾ ಮರಿ ಗಳನ್ನು2 ತಿಂಗಳ ಕ್ವಾರೆಂಟೈನ್‌ಗೆ ಒಳಪಡಿಸಲಾಗಿತ್ತು. ಬಳಿಕ ಮಾತನಾಡಿದ ಸಚಿವರು, ಆಗಸ್ಟ್ 17 ರಂದು ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದಒಂದು ಗಂಡು,ಎರಡುಹೆಣ್ಣುಚೀತಾ ಗಳನ್ನು ಮೈಸೂರು ಮೃಗಾಲಯಕ್ಕೆ ಅಂತಾರಾಷ್ಟ್ರೀಯ ಪ್ರಾಣಿ ವಿನಿಮಯ ಯೋಜನೆ ಮೂಲಕ ಕರೆತರಲಾಗಿದೆ. ದೇಶದಲ್ಲಿ ಹೈದರಾಬಾದ್‌ ಬಿಟ್ಟರೆ ಮೈಸೂರಿನಲ್ಲಿ ಮಾತ್ರ ಚೀತಾಗಳು ಇವೆ ಎಂದು ತಿಳಿಸಿದರು.

ಶುಕ್ರವಾರ ಮೈಸೂರಿಗೆ ಮುಖ್ಯಮಂತ್ರಿಗಳು ಆಗಮಿಸುತ್ತಾರೆ. ಜಿಲ್ಲಾಡಳಿತ ದಿಂದ ಈಗಾಗಲೇ ಎಲ್ಲಾ ಸಿದ್ಧತೆಗಳು ಆಗಿವೆ. ನಾಡಿದ್ದು ಮುಖ್ಯಮಂತ್ರಿಗಳುನಾಡಹಬ್ಬ ದಸರಾ ಉದ್ಘಾಟನಾ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ದೇಗುಲಕ್ಕೆ ನಿರ್ಬಂಧ: ದಸರಾ ಮಹೋತ್ಸವಕ್ಕೆ ಹೆಚ್ಚು ಜನರು ಆಗಮಿಸುವುದರಿಂದ ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ನಂಜುಂಡೇಶ್ವರ ನಿರ್ಬಂ ಧವನ್ನು ಹೇರಲಾಗುತ್ತದೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ತಂಡ ನೀಡಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ. ಸಾರ್ವಜನಿಕ ನಿರ್ಬಂಧ ಅನಿವಾರ್ಯ. ಈ ಹಿನ್ನೆಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ. ಆದರೆ ಮೃಗಾಲಯಕ್ಕೆ ನಿರ್ಬಂಧ ಸಡಿಲಿಕೆ ಮಾಡಲು ಸಾಧ್ಯವಿದೆಯೇ ಎಂಬ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸುತ್ತೇನೆ ಎಂದರು.

ಈ ವೇಳೆ ಮುಡಾ ಅಧ್ಯಕ್ಷ ಎಚ್‌.ವಿ. ರಾಜೀವ್‌, ಮೃಗಾಲಯ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ, ಮೃಗಾಲಯ ಕಾರ್ಯನಿರ್ವಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಇತರರಿದ್ದರು.

ಚೀತಾಗೆ ಕುದುರೆ, ಜೀಬ್ರಾ ಮಾಂಸ ಅಚ್ಚುಮೆಚ್ಚು :  ಆಫ್ರಿಕಾದಿಂದ ಮೈಸೂರು ಮೃಗಾಲಯಕ್ಕೆ ಆಗಮಿಸಿರುವ ಮೂರು ಹಂಟಿಂಗ್‌ ಚೀತಾಗಳುಆರಂಭದಲ್ಲಿ ಇಲ್ಲಿನ ಆಹಾರ ಪದ್ಧತಿಗೆ ಒಗ್ಗಿಕೊಳ್ಳದೇ ನಾಲ್ಕು ದಿನ ಆಹಾರ ತಿರಸ್ಕರಿಸಿದ್ದವು. ಆಫ್ರಿಕಾದಲ್ಲಿ ಇವುಗಳಿಗೆಕುದುರೆ, ಜೀಬ್ರಾ ಮಾಂಸ ನೀಡಲಾಗುತ್ತಿತ್ತು. ಆದ್ದರಿಂದ ಚೀತಾಗಳು ಇಲ್ಲಿನ ಆಹಾರವನ್ನು ತಿನ್ನುತ್ತಿರಲಿಲ್ಲ. ಬಳಿಕ ಚೈನಿಸ್‌ಕ್ವಿಲ್‌ ಪಕ್ಷಿ ಮಾಂಸವನ್ನು ನೀಡಿದಾಗ ತಿಂದವು. ಇದಾದ ನಂತರ ಚೈನಿಸ್‌ಕ್ವಿಲ್‌ ಪಕ್ಷಿ ಮಾಂಸದೊಂದಿಗೆಕೋಳಿ ಮತ್ತು ಬೀಫ್ ಮಾಂಸ ಮಿಶ್ರಣ ಮಾಡಿ ತಿನ್ನಿಸಿ, ಇಲ್ಲಿನ ಆಹಾರ ಪದ್ಧತಿಗೆ ಒಗ್ಗಿಕೊಳ್ಳುವಂತೆ ಮಾಡಿದ್ದೇವೆ. ಸದ್ಯಕ್ಕೆ ಬೀಫ್ ಮತ್ತುಕೋಳಿ ಮಾಂಸವನ್ನು ನೀಡಲಾಗುತ್ತಿದೆ ಮೃಗಾಲಯ ಕಾರ್ಯನಿರ್ವಹಕ ನಿರ್ದೇಶಕ ಅಜಿತ್‌ಕುಲಕರ್ಣಿ ತಿಳಿಸಿದರು. ಚೀತಾಗಳು ಬೆಕ್ಕಿನ ಜಾತಿಗೆ ಸೇರಿರುವುದರಿಂದ ಆರಂಭದಲ್ಲಿ ವಂಶಾಭಿವೃದ್ಧಿ ತಡವಾದರೂ, ನಂತರ ಹೆಚ್ಚು ಹೆಚ್ಚು ಮರಿಗಳಿಗೆ ಜನ್ಮ ನೀಡುತ್ತವೆ. ಒಂದು ಚೀತಾ ಒಂದರಿಂದ ಐದು ಮರಿಗಳಿಗೆ ಜನ್ಮ ನೀಡುತ್ತವೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.