ಚಾಮುಂಡಿ ಬೆಟ್ಟದ ಜನವಸತಿ ಪ್ರದೇಶದಲ್ಲಿ ಚಿರತೆಗಳು


Team Udayavani, Oct 5, 2018, 12:01 PM IST

m5-chamundi.jpg

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟ ದಲ್ಲಿ 5-6 ಚಿರತೆಗಳಿವೆ ಎಂದು ಅಂದಾಜಿಸಲಾಗಿದೆ. ಆದರೆ, ಚಾಮುಂಡಿಬೆಟ್ಟದ ಸುತ್ತಮುತ್ತಲೂ ಜನವಸತಿ  ಪ್ರದೇಶವಾಗಿ ವಿಸ್ತರಣೆಯಾಗುತ್ತಿದೆ. ಪರಿಣಾಮ ಚಾಮುಂಡಿಬೆಟ್ಟದಲ್ಲಿರುವ ಚಿರತೆಗಳ ಭವಿಷ್ಯ ಏನೆಂಬುದು ತಿಳಿಯುತ್ತಿಲ್ಲ ಎಂದು ವನ್ಯಜೀವಿ ತಜ್ಞ ಸಂಜಯ್‌  ಗುಬ್ಬಿ ಆತಂಕ ವ್ಯಕ್ತಪಡಿಸಿದರು. 

ನಗರದ ಚಾಮರಾಜೇಂದ್ರ ಮೃಗಾ ಲಯದಲ್ಲಿ ನಡೆದ 20ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾನವ ಮತ್ತು  ಚಿರತೆ ಸಂಘರ್ಷ ವಿಷಯ ಕುರಿತು ಮಾತನಾಡಿದ ಅವರು, ಬೆಟ್ಟದಲ್ಲಿ ಕೇವಲ ಚಿರತೆ ಮಾತ್ರವಲ್ಲದೇ ಇಂಡಿಯನ್‌ ಫಾಕ್ಸ್‌ ಸಹ ವಾಸವಿದ್ದು, ಬೆಟ್ಟದ  ತಪ್ಪಲಿನಲ್ಲಿರುವ ಗೌರಿಶಂಕರನಗರದ ಸುತ್ತಲೂ ಇದನ್ನು ಕಾಣಬಹುದು. ಬೆಟ್ಟದಲ್ಲಿ ಅಂದಾಜು 20-25 ಇಂಡಿಯನ್‌ ಫಾಕ್ಸ್‌ಗಳಿರುವ ಸಾಧ್ಯತೆ ಇದೆ ಎಂದರು.

ಪ್ರಾಣಿಗಳ ಬೇಟೆ: ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಪ್ರಾಣಿಗಳ ಭೇಟಿ ಹೆಚ್ಚಾಗಿರುವುದರ ಪರಿಣಾಮ ಚಿರತೆ ಮತ್ತು ಮಾನವ ಸಂಘರ್ಷಕ್ಕೆ ಕಾರಣವಾಗಿದೆ. ದೇಶದಲ್ಲಿರುವ ರಾಷ್ಟ್ರೀಯ ಉದ್ಯಾನ ವನಗಳು, ವನ್ಯಜೀವಿ ಸಂರಕ್ಷಣಾ ಪ್ರದೇಶ ದಂತಹ ರಕ್ಷಿತಾರಣ್ಯಗಳಲ್ಲಿ ಪ್ರಾಣಿಗಳ ಬೇಟೆ ಕಡಿಮೆ  ಇದೆ.

ಆದರೆ, ಇಂತಹ ಅರಣ್ಯ ಪ್ರದೇಶಗಳ ಹೊರಗೆ ಇಂದಿಗೂ ಪ್ರಾಣಿಗಳ ಬೇಟೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ  ಕ್ರಮಗಳನ್ನು ಅನುಸರಿಸುತ್ತಿಲ್ಲ. ಹೀಗಾಗಿ ಚಿರತೆಗಳ ಆಹಾರಕ್ಕೆ ಅಗತ್ಯ  ವಿರುವಂತಹ ಪ್ರಾಣಿಗಳು ಕಾಡಿನಲ್ಲಿ ಲಭಿಸದ ಹಿನ್ನೆಲೆಯಲ್ಲಿ ಚಿರತೆಗಳು ಆಹಾರಕ್ಕಾಗಿ ಜನವಸತಿ ಪ್ರದೇಶಗಳಿಗೆ ಬಂದು ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿವೆ. ಇದು ಮಾನವ ಮತ್ತು ಚಿರತೆಗಳ ನಡುವಿನ  ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ ಎಂದರು. 

ದತ್ತಾಂಶ ಇಲ್ಲ: ಇತ್ತೀಚಿನ ದಿನಗಳಲ್ಲಿ ಚಿರತೆಗಳ ಸಂತತಿ ನಶಿಸಿ ಹೋಗುತ್ತಿದ್ದು, ಆಫ್ರಿಕಾ ಖಂಡದ ಶೇ.50 ಭಾಗದಲ್ಲಿ ಚಿರತೆಗಳು ನಶಿಸಿ ಹೋಗಿವೆ.  ಇದರಿಂದ ಶೇ.3 ಭಾಗಗಳಲ್ಲಿ ಮಾತ್ರವೇ ಚಿರತೆಗಳನ್ನು ಕಾಣಬಹುದಾಗಿದೆ. ಆದರೆ, ದೇಶದಲ್ಲಿ ಹುಲಿಯನ್ನು ಪ್ರಮುಖ ಪ್ರಾಣಿಯಾಗಿ ಪರಿಗಣಿಸಿರುವ  ಪರಿಣಾಮ ಭಾರತದಲ್ಲಿ ಎಷ್ಟು ಚಿರತೆಗಳಿವೆ ಎಂಬ ದತ್ತಾಂಶ ಇಲ್ಲ. 

ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ವನ್ಯಜೀವಿಗಳನ್ನು ಕೇವಲ ಕಂಪ್ಯೂಟರ್‌  ಮೂಲಕ ತಿಳಿದುಕೊಳ್ಳುವ ಪ್ರಯತ್ನದಲ್ಲಿದ್ದು, ನೈಸರ್ಗಿಕವಾಗಿ ಅವುಗಳ ಬಗ್ಗೆ ತಿಳಿದುಕೊಳ್ಳಲು ಮುಂದಾ ಗುತ್ತಿಲ್ಲ. ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರಿದರೆ ಮುಂದಿನ ವರ್ಷ ಗಳಲ್ಲಿ ಕೆಲವೇ ಜಾಗಗಳಲ್ಲಿ ಮಾತ್ರ ಚಿರತೆಗಳನ್ನು ಕಾಣಬಹುದಾಗಿದೆ.

ಈ ಹಿನ್ನೆಲೆಯಲ್ಲಿ ಚಿರತೆ ಮತ್ತು  ಮಾನವ ಸಂಘರ್ಷವನ್ನು ಕಡಿಮೆ ಮಾಡಲು ಕಠಿಣ ಮತ್ತು ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ ಎಂದರು. ಜಿಲ್ಲಾಧಿಕಾರಿ ಅಭಿರಾಂ ಜಿ.  ಶಂಕರ್‌, ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ, ಮೈಸೂರು ಮೃಗಾಲಯದ ನಿರ್ದೇಶಕ ಅಜಿತ್‌ ಕುಲಕರ್ಣಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.