ಬಾಲಕನ ಬಲಿಗೆ ನೋಟು ಮುದ್ರಣದ ಕೆಮಿಕಲ್‌ ಕಾರಣವೇ?


Team Udayavani, Apr 18, 2017, 3:45 AM IST

17BNP-(18).jpg

ಮೈಸೂರು: ರಾಸಾಯನಿಕ ತ್ಯಾಜ್ಯಕ್ಕೆ ಸಿಲುಕಿ ಬಾಲಕನೊಬ್ಬ ಬಲಿಯಾಗಿರುವ ಘಟನೆ ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದ್ದು,ವಾಟರ್‌ ಸೆನ್ಸಿಟಿವ್‌ ರಾಸಾಯನಿಕ ಪದಾರ್ಥಗಳಿಂದಲೇ ಈ ಅನಾಹುತ ಸಂಭವಿಸಿದೆ ಎನ್ನುವುದು ಖಚಿತವಾಗಿದೆ. ಆದರೆ, ಸ್ಪಷ್ಟವಾಗಿ ಯಾವ ರಾಸಾಯನಿಕ ವಸ್ತು ಮತ್ತು ಯಾರು ಇಲ್ಲಿ ತಂದು ಪೇರಿಸಿದ್ದಾರೆ ಎನ್ನುವುದು ಗೊತ್ತಾಗಿಲ್ಲ.

ಪರಿಸರ ಮಾಲಿನ್ಯ ಅಧಿಕಾರಿಗಳು ಮತ್ತು ಭೂಗರ್ಭ ವಿಜ್ಞಾನಿಗಳು ಜಿಲ್ಲಾಡಳಿತದ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ಮಣ್ಣಿನ ಸ್ಯಾಂಪಲ್‌ಗ‌ಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಮಣ್ಣಿನ ತಾಪಮಾನ 110 ಡಿಗ್ರಿ ಸೆ. ಇದ್ದು, ವಾತಾವರಣ ತಾಪಮಾನಕ್ಕಿಂತ ಹೆಚ್ಚಿದೆ. ಮಣ್ಣು ನಯವಾದ ಮರಳಿನಂತಿದ್ದು, ಬೂದು ಮಿಶ್ರಿತ ಕಂದು ಬಣ್ಣದಿಂದ ಕೂಡಿದೆ. ಸ್ಥಳದಲ್ಲಿ ಯಾವುದೇ ವಾಸನೆ ಅಥವಾ ಘಾಟು ಇಲ್ಲ ಎಂದು ತಜ್ಞರ ತಂಡ ಪ್ರಾಥಮಿಕ ವರದಿಯಲ್ಲಿ ತಿಳಿಸಿದೆ. 

ಸುತ್ತಮುತ್ತಲಿನ ಕೆಲವು ಕಾರ್ಖಾನೆಗಳು ವಿಷಯುಕ್ತ ರಾಸಾಯನಿಕ ಪದಾರ್ಥವನ್ನು ಸಂಸ್ಕರಿಸದೆ ಎಲ್ಲೆಂದರಲ್ಲಿ ವಿಲೇವಾರಿ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮೈಸೂರಿನಲ್ಲಿರುವ ನೋಟು ಮುದ್ರಣ ಸಂಸ್ಥೆಯಿಂದ ತ್ಯಾಜ್ಯ ರಾಸಾಯನಿಕ ತಂದು ಅಲ್ಲಿ ಸುರಿಯಲಾಗುತ್ತಿದೆ. ಈ ತ್ಯಾಜ್ಯದಿಂದ ಬೆಂಕಿ ಹೊತ್ತಿಕೊಂಡು ಬಾಲಕನ ಸಾವು ಸಂಭವಿಸಿದೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಇದಕ್ಕೆ  ದನಿಗೂಡಿಸಿರುವ ಮೈಸೂರು ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, ಭಾರತೀಯ ನೋಟು ಮುದ್ರಣ ಘಟಕದತ್ತ ಬೊಟ್ಟು ಮಾಡುತ್ತಾರೆ. ಪ್ರಿಂಟಿಂಗ್‌ ಕೆಮಿಕಲ್‌ ಅನ್ನು ಅವೈಜಾnನಿಕವಾಗಿ ಆರ್‌ಬಿಐ ವಿಲೇವಾರಿ ಮಾಡುತ್ತಿದೆ ಎಂದು ನಾಲ್ಕೈದು ವರ್ಷಗಳ ಹಿಂದೆಯೇ ಸಂಘದಿಂದ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ತ್ಯಾಜ್ಯ ಸಂಸ್ಕರಣಾ ಘಟಕವನ್ನೂ ಸ್ಥಾಪಿಸಿಲ್ಲ ಎಂದು ಆರೋಪಿಸಿದ್ದಾರೆ.

ಫಾಸ್ಪರಸ್‌, ಸೋಡಿಯಂ ಹೈಡ್ರೇಡ್‌ನ‌ಂಥ ವಾಟರ್‌ ಸೆನ್ಸಿಟಿವ್‌ ಕೆಮಿಕಲ್‌ಗ‌ಳಿಂದ ಈ ದುರಂತ ಸಂಭವಿಸಿರಬಹುದು. ಈ ರಾಸಾಯನಿಕ ತ್ಯಾಜ್ಯಗಳು ನೀರಿನ ಅಂಶ ಬಿದ್ದ ಕೂಡಲೇ ಪ್ರತಿಕ್ರಿಯೆ ನೀಡುತ್ತವೆ ಎನ್ನುವುದು ವಿಜ್ಞಾನಿಗಳ ಹೇಳಿಕೆ. 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್‌ , ಈ ಬಗ್ಗೆ ಪ್ರತಿಕ್ರಿಯಿಸಿರುವ ಮಣ್ಣಿನ ಮಾದರಿಯನ್ನು ಪರೀಕ್ಷಿಸಿದಾಗ ಅದರಲ್ಲಿ ಪಿಎಚ್‌-7.0 ಇತ್ತು. ಇದು ಸಾಮಾನ್ಯವಾಗಿದ್ದು,  ಫಾಸ್ಪರಸ್‌, ಸೋಡಿಯಂ ಹೈಡ್ರೇಡ್‌ ಇದೆಯಾ, ಇದ್ದರೆ ಎಷ್ಟು ಪ್ರಮಾಣದಲ್ಲಿದೆ ಹಾಗೂ ಎಲ್ಲಿಂದ ಅದು ಬರುತ್ತಿದೆ ಈ ಮಾಹಿತಿಗಳೆಲ್ಲವೂ ಪ್ರಯೋಗಾಲಯದಿಂದ ವರದಿ ಬಂದ ನಂತರ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. 

ನನ್ನ ಮಗನ ಸಾವಿಗೆ ಸುತ್ತಮುತಲಿನ ಕಾರ್ಖಾನೆಗಳವರೇ ಕಾರಣ. ಮುಂಚೆಯೇ ಅಧಿಕಾರಿಗಳು ಎಚ್ಚರವಹಿಸಿದ್ದರೆ ನನ್ನ ಮಗನಿಗೆ ಈ ಸ್ಥಿತಿ ಬರುತ್ತಿರಲಿಲ್ಲ. ಇನ್ನೊಬ್ಬರಿಗೆ ಈ ರೀತಿ ಆಗದಂತೆ ಇನ್ನಾದರೂ ಎಚ್ಚರವಹಿಸಲಿ.
– ಮೂರ್ತಿ, ಮೃತ ಬಾಲಕ ಹರ್ಷಲ್‌ ತಂದೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.