ಮುಖ್ಯಮಂತ್ರಿ ಸಿದ್ದರಾಮಯ್ಯದು ವಚನ ಭ್ರಷ್ಟ ಸರ್ಕಾರ


Team Udayavani, Mar 9, 2018, 12:25 PM IST

m6-mukhyama.jpg

ಮೈಸೂರು: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆ ಈಡೇರಿಸಿದ್ದೇವೆ ಎನ್ನುವ ಸಿದ್ದರಾಮಯ್ಯ ಅವರದು ವಚನಭ್ರಷ್ಟ ಸರ್ಕಾರ ಎಂದು ಮಾಜಿ ಸಂಸದ ಎಚ್‌.ವಿಶ್ವನಾಥ್‌ ಟೀಕಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೋದಕಡೆಯೆಲ್ಲಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳನ್ನು ಈಡೇರಿಸಿದ್ದೇವೆ ಎನ್ನುತ್ತಿದ್ದಾರೆ. ಆ 165 ಭರವಸೆಗಳಾವುದು? ಈಡೇರಿಸಿದ್ದಾವುದು ಪಟ್ಟಿ ನೀಡಲಿ ಎಂದು ಆಗ್ರಹಿಸಿದ ಅವರು, ಪ್ರಣಾಳಿಕೆಯಲ್ಲಿ ಲೋಕಾಯುಕ್ತವನ್ನು ಬಲಪಡಿಸುತ್ತೇವೆ ಎಂದು ಹೇಳಲಾಗಿತ್ತು. ಆದರೆ, ಲೋಕಾಯುಕ್ತವನ್ನು ಹಲ್ಲು ಕಿತ್ತ ಹಾವು ಮಾಡಿ ಕೂರಿಸಿದ್ದಾರೆ ಎಂದು ಆರೋಪಿಸಿದರು.

ಸಿಎಂ ಕ್ರಮಿನಲ್‌ ಐಡಿಯಾ: ರಾಮಕೃಷ್ಣ ಹೆಗ್ಗಡೆಯವರು ಸ್ಥಾಪಿಸಿದ ಲೋಕಾಯುಕ್ತವನ್ನು ಆ ನಂತರ ಬಂದ ಯಾವ ಮುಖ್ಯಮಂತ್ರಿಗಳೂ ದುರ್ಬಲಗೊಳಿಸುವ ಪ್ರಯತ್ನ ಮಾಡಿರಲಿಲ್ಲ. ಲೋಕಾಯುಕ್ತ ಬಲವಾಗಿದ್ದರಿಂದ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು, ಶಾಸಕರು ಜೈಲಿಗೆ ಹೋಗಬೇಕಾಗಿದ್ದನ್ನು ಕಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,

ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಾಗ ನಾವೂ ಜೈಲಿಗೆ ಹೋಗುವುದು ಬೇಡ ಎಂಬ ಕ್ರಿಮಿನಲ್‌ ಐಡಿಯಾದಿಂದ ಲೋಕಾಯುಕ್ತವನ್ನೇ ದುರ್ಬಲ ಮಾಡಿ, ಕೇವಲ ವಿಚಾರಣೆ ಮಾಡುವ ಅಧಿಕಾರವನ್ನಷ್ಟೇ ಕೊಟ್ಟು, ಎಸಿಬಿ ರಚನೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಯ ಕೈಕೆಳಗೆ ಕೆಲಸ ಮಾಡಬೇಕಾದ ಎಸಿಬಿ ಅಧಿಕಾರಿಗಳು ಇವರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಶ್ನಿಸಿದರು.

ಇದರಿಂದ ಬಿಜೆಪಿಯೂ ಹೊರತಾಗಿಲ್ಲ. ಯುಪಿಎ ಆಡಳಿತಾವಧಿಯಲ್ಲಿ ಲೋಕಪಾಲ್‌ ಜಾರಿಗೆತರುವಂತೆ ಸಂಸತ್‌ ಕಲಾಪ ನಡೆಯಲು ಬಿಡದೆ ಹೋರಾಟ ನಡೆಸುತ್ತಿದ್ದರು, ಈಗ ಅವರೇ ಅಧಿಕಾರದಲ್ಲಿದ್ದರೂ ಆ ಬಗ್ಗೆ ಗಮನಹರಿಸಿಲ್ಲ. ಆಧಾರ್‌, ಎಫ್ಡಿಐ, ಜಿಎಸ್‌ಟಿ ಹೀಗೆ ಪ್ರತಿಯೊಂದು ವಿಷಯದಲ್ಲೂ ಎನ್‌ಡಿಎ ಸರ್ಕಾರ ಯೂಟರ್ನ್ ತೆಗೆದುಕೊಂಡಿದೆ ಎಂದು ಹೇಳಿದರು.

ರಾಷ್ಟ್ರೀಯ ವಿಚಾರ: ರಾಜಕೀಯ ಕೈದಿ ಶಶಿಕಲಾ ಅವರಿಗೆ ಜೈಲಿನಲ್ಲಿ ವಿಶೇಷ ಸವಲತ್ತು ನೀಡಿ ಎಂದು ಮುಖ್ಯಮಂತ್ರಿ ಆದೇಶ ನೀಡಿರುವುದು ರಾಷ್ಟ್ರೀಯ ವಿಚಾರ. ಆದರೂ ವಿರೋಧಪಕ್ಷವಾದ ಬಿಜೆಪಿ ಈ ಬಗ್ಗೆ ಮೌನವಹಿಸಿರುವುದೇಕೋ ತಿಳಿಯುತ್ತಿಲ್ಲ ಎಂದ ಅವರು, ಈ ಹಿಂದೆ ಲಾಲೂಪ್ರಸಾದ್‌ ಯಾದವ್‌ ಸೇರಿದಂತೆ ಅನೇಕ ರಾಜಕೀಯ ನಾಯಕರು ಜೈಲಿಗೆ ಹೋಗಿದ್ದರು.

ಆದರೆ, ಯಾವ ಮುಖ್ಯಮಂತ್ರಿಯೂ ಅವರಿಗೆ ವಿಶೇಷ ಸಲವತ್ತು ನೀಡಿ ಎಂದು ಆದೇಶಿಸಿರಲಿಲ್ಲ. ಈ ವಿಷಯದಲ್ಲಿ ಸಿದ್ದರಾಮಯ್ಯ ಮೊದಲ ಮುಖ್ಯಮಂತ್ರಿ ಎಂದು ಹರಿಹಾಯ್ದರು. ರಾಜ್ಯಪಾಲರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಈ ಪ್ರಕರಣದಲ್ಲಿ ಮಧ್ಯೆಪ್ರವೇಶಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದರು.

ನಂಬರ್‌ ಒನ್‌ ರಾಜ್ಯ: ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳನ್ನು ನೋಡಿದರೆ ಶೀಘ್ರದಲ್ಲೇ ಮುಂಬೈಯನ್ನು ಹಿಂದಿಕ್ಕಿ ನಂಬರ್‌ ಒನ್‌ ರಾಜ್ಯ ಆಗಲಿದೆ ಎಂಬ ಆತಂಕವಿದೆ. ಇಲ್ಲಿ ಲೋಕಾಯುಕ್ತ ನ್ಯಾಯಾಧೀಶರಿಗೇ ಕಚೇರಿಗೆ ನುಗ್ಗಿ ಚಾಕುವಿನಿಂದ ಇರಿಯುತ್ತಾರೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಲೋಕಾಯುಕ್ತ ಕಚೇರಿಗೆ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಲೋಕಾಯುಕ್ತರು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ಉತ್ತರ ಬರುವುದಿಲ್ಲ ಎಂದಾದರೆ, ಇನ್ನು ಜನಸಾಮಾನ್ಯರ ಪತ್ರಗಳಿಗೆ ಅಲ್ಲಿಂದ ಉತ್ತರ ಬರಲು ಸಾಧ್ಯವೇ? ಮುಖ್ಯಮಂತ್ರಿ ಕಚೇರಿಯಲ್ಲಿ 470 ಸಿಬ್ಬಂದಿ ಇರುವುದೇತಕ್ಕೆ ಎಂದು ಪ್ರಶ್ನಿಸಿದರು.

ಲೋಕಾಯುಕ್ತದ ಬಗ್ಗೆ ದ್ವೇಷ, ವೈರಾಗ್ಯ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ ಸಂಸ್ಥೆಗೆ ಸವಲತ್ತು ಕೊಟ್ಟು ಹೇಗೆ ಬಲಪಡಿಸುತ್ತಾರೆ ಎಂದ ಅವರು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರ ಮೇಲೆ ನಡೆದಿರುವ ಹತ್ಯೆಯತ್ನಕ್ಕೆ ಮುಖ್ಯಮಂತ್ರಿಯೇ ನೇರ ಹೊಣೆ ಎಂದರು. ನಲಪಾಡ್‌ ಪ್ರಕರಣ, ಲೋಕಾಯುಕ್ತರಿಗೆ ಚಾಕು ಇರಿತ ಪ್ರಕರಣಗಳನ್ನೆಲ್ಲ ರಾಜ್ಯದ ಜನತೆ ಸೂಕ್ಷವಾಗಿ ಗಮನಿಸುತ್ತಿದ್ದಾರೆ. ಎರಡೂ ಪಕ್ಷಗಳ ಆಡಳಿತವನ್ನು ನೋಡಿರುವ ರಾಜ್ಯದ ಜನತೆ ಈ ಬಾರಿ ಅನಿರೀಕ್ಷಿತ ಫ‌ಲಿತಾಂಶ ನೀಡುತ್ತಾರೆ ಎಂದು ಹೇಳಿದರು.

ಗಣಿ ಹಗರಣದಲ್ಲಿ ಜೈಲಿಗೆ ಹೋಗಿಬಂದವರನ್ನೆಲ್ಲಾ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳುವುದಾದರೆ ಬಳ್ಳಾರಿ ಪಾದಯಾತ್ರೆ ತಮಾಷೆಗೆ ಮಾಡಿದ್ದ ಎಂದು ಛೇಡಿಸಿದರು. ನೈಸ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಜಯಚಂದ್ರ ಅಧ್ಯಕ್ಷತೆಯ ಸದನ ಸಮಿತಿ ವರದಿ ಇದ್ದರೂ ಅಶೋಕ್‌ ಖೇಣಿಯನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದರೆ ಮುಂದೆ ಯಾರ್ಯಾರನ್ನು ಸೇರಿಸಿಕೊಳ್ಳುತ್ತಾರೋ ನೋಡಬೇಕು ಎಂದರು. ಜೆಡಿಎಸ್‌ ಮುಖಂಡರಾದ ಸೋಮಸುಂದರ್‌, ರೇವಣ್ಣ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.