ರೈತರ ಸಾಲಮನ್ನಾಕ್ಕೆ ಮುಖ್ಯಮಂತ್ರಿ ಇಂಗಿತ
Team Udayavani, Jun 1, 2017, 12:51 PM IST
ಮುತ್ತಿನಮುಳಸೋಗೆ (ಪಿರಿಯಾಪಟ್ಟಣ ತಾ.): ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡುವ ಪರವಾಗಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಆಧರಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳಸೋಗೆ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಜಿಪಂ ವತಿಯಿಂದ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ಸರ್ಕಾರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ರೈತರಿಗೆ 52 ಸಾವಿರ ಕೋಟಿ ರೂ. ಸಾಲ ನೀಡಲಾಗಿದೆ. ಈ ಪೈಕಿ ರಾಷ್ಟ್ರೀಕೃತ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು 42 ಸಾವಿರ ಕೋಟಿ ಸಾಲ ಪಡೆದಿದ್ದರೆ, ಸಹಕಾರ ಬ್ಯಾಂಕು, ಸಂಘಗಳಲ್ಲಿ ಪಡೆದಿರುವ ಸಾಲದ ಮೊತ್ತ 10,500 ಕೋಟಿ ರೂ., ಶೇ.22ರಷ್ಟು ರೈತರು ಮಾತ್ರ ಸಹಕಾರಿ ಸಾಲ ಪಡೆದಿದ್ದಾರೆ. ಹೀಗಾಗಿ ಸಾಲ ಮನ್ನಾ ಮಾಡಲು ನನ್ನ ವಿರೋಧವಿಲ್ಲ.
ಆದರೆ, ಕೇಂದ್ರ ಸರ್ಕಾರ ಏನು ಮಾಡುತ್ತದೆ ಎಂದು ಕಾದು ನೋಡುತ್ತಿದ್ದು, ಆ ನಂತರ ತೀರ್ಮಾನ ಮಾಡುತ್ತೇನೆ. ಉತ್ತರ ಪ್ರದೇಶ ಸರ್ಕಾರ ರೈತರ ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರ ಹಿಂದಿನಿಂದ ಹಣ ಕೊಟ್ಟಿದೆ ಎಂದರು. ರೈತರ ಸಾಲಮನ್ನಾ ವಿಚಾರದಲ್ಲಿ ಅಧಿಕಾರ ಇದ್ದಾಗ ಒಂದು ರೀತಿ, ಅಧಿಕಾರ ಇಲ್ಲದಾಗ ಒಂದು ರೀತಿ ಮಾತನಾಡುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಎರಡು ನಾಲಿಗೆ ಇದೆ ಎಂದು ಟೀಕಿಸಿದರು.
ಬಿ.ಎಸ್.ಯಡಿಯೂರಪ್ಪ ಮಾತೆತ್ತಿದರೆ ಸುಳ್ಳು ಹೇಳುತ್ತಾರೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸಾಲಮನ್ನಾ ಮಾಡುತ್ತೇನೆ ಎನ್ನುವವರು ತಾವೇ ಅಧಿಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ 25 ಸಾವಿರ ರೂ.ವರೆಗಿನ ಸಹಕಾರಿ ಸಾಲ ಮನ್ನಾ ಮಾಡಿದ ಹಣದ ಪೈಕಿ 2500 ಕೋಟಿಯನ್ನು ನಮ್ಮ ಸರ್ಕಾರ ಭರಿಸಬೇಕಾಯಿತು ಎಂದು ಹೇಳಿದರು.
ನಾಲ್ಕು ಲಕ್ಷ ರೈತರನ್ನು ಬೆಂಗಳೂರಿಗೆ ಕರೆತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯನ ಮೂಗು ಹಿಡಿದು ಸಾಲಮನ್ನಾ ಮಾಡಿಸುತ್ತೇನೆ ಎನ್ನುವ ಯಡಿಯೂರಪ್ಪ ಮೊದಲು ಪ್ರಧಾನಿ ನರೇಂದ್ರ ಮೋದಿಯ ಮೂಗು ಹಿಡಿದು ರೈತರ ಸಾಲಮನ್ನಾ ಮಾಡಿಸಲಿ ಎಂದು ಕಿಡಿಕಾರಿದರು.
ಎರಡು ವರ್ಷಗಳ ಸತತ ಬರಗಾಲದ ಹಿನ್ನೆಲೆ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಲು ಪ್ರಧಾನಿಯವರ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ದಾಗ ಯಡಿಯೂರಪ್ಪ, ಜಗದೀಶ್ ಶೆಟ್ಟರ್‌ಅಲ್ಲಿ ತುಟಿಬಿಚ್ಚಲಿಲ್ಲ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸಂಸದರಾಗಿ ಲೋಕಸಭೆಯಲ್ಲೂ ಈ ವಿಷಯ ಪ್ರಸ್ತಾ ಪಿಸಲಿಲ್ಲ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮನ್ನಾ ಮಾಡಲು ಕೇಂದ್ರಸರ್ಕಾರ ನನಗೆ ನೋಟು ಪ್ರಿಂಟ್ ಮಾಡುವ ಅಧಿಕಾರ ಕೊಟ್ಟಿಲ್ಲ. ಹೀಗಾಗಿ ಸಾಲಮನ್ನಾ ಸಾಧ್ಯವೇ ಇಲ್ಲ ಎಂದು ವಿಧಾನಪರಿಷತ್‌ನಲ್ಲಿ ಹೇಳಿಕೆ ನೀಡುರುವುದು ದಾಖಲೆಯಲ್ಲಿದೆ. ಆದರೆ, ಜನರಿಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಹರಿಹಾಯ್ದರು.
ಎರಡು ವರ್ಷಗಳ ಕಾಲ ಸತತ ಬರಗಾಲವನ್ನು ಪರಿಣಾಮಕಾರಿಯಾಗಿ ಎದುರಿಸಿದ್ದೇವೆ. ಇದರ ಪರಿಣಾಮ ಬರಗಾಲದಲ್ಲಿ ಜನ ಗುಳೇ ಹೋಗುವುದು ತಪ್ಪಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜನಪರ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ನಾವು ನಿಮ್ಮ ಜತೆ ಇದ್ದೇವೆ, ನೀವು ನಮ್ಮ ಜತೆ ಇರಿ ಎಂದರು.
ಶಾಸಕ ಕೆ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಎಂ.ಬಿ.ಪಾಟೀಲ್, ರೋಷನ್ ಬೇಗ್, ಕೆ.ಆರ್.ರಮೇಶ್ ಕುಮಾರ್, ಎಚ್.ಆಂಜನೇಯ, ತನ್ವೀರ್, ವಿಧಾನಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಆರ್.ಧರ್ಮಸೇನ, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ, ತಾಪಂ ಅಧ್ಯಕ್ಷೆ ನಿರೂಪ ರಾಜೇಶ್ ಇತರರು ಇದ್ದರು.
* ಗಿರೀಶ್ ಹುಣಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.