ಪಾರ್ಕ್‌ನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಶಿಕ್ಷಕಿ!

ಉದ್ಯಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ , ಮಕ್ಕಳೊಂದಿಗೆ ಅಸಹಾಯಕವಾಗಿದ್ದ ಗರ್ಭಿಣಿಗೆ ಸ್ಥಳೀಯರ ನೆರವು

Team Udayavani, Mar 10, 2021, 3:25 PM IST

ಪಾರ್ಕ್‌ನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಶಿಕ್ಷಕಿ!

ಮೈಸೂರು: ಉದ್ಯಾನವೊಂದರಲ್ಲಿ ತುಂಬು ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂದ ನರಳುವುದನ್ನು ಕಂಡ ದೈಹಿಕ ಶಿಕ್ಷಣಶಿಕ್ಷಕಿಯೋರ್ವರು ಆಕೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ಮೈಸೂರಲ್ಲಿ ನಡೆದಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕೊಣಂಗೇರಿ ನಿವಾಸಿ ಮಲ್ಲಿಗೆ ಎಂಬಾಕೆ ತನ್ನ ಎರಡು ಮಕ್ಕಳೊಂದಿಗೆ ಮೈಸೂರಿಗೆ ಆಗಮಿಸಿದಾಗ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ತನ್ನ ಎರಡು ಪುಟ್ಟ ಮಕ್ಕಳೊಂದಿಗೆ ಉದ್ಯಾನಕ್ಕೆ ಬಂದ ಕುಳಿತ ಆಕೆ ನೋವಿನಿಂದ ಒದ್ದಾಡುವುದನ್ನು ಕಂಡು ಜನರು ಗುಂಪಾಗಿದ್ದಾರೆ. ಇತ್ತ ತಾಯಿಯ ಹೆರಿಗೆ ನೋವನ್ನು ಅರಿಯದ ಪುಟ್ಟ ಮಕ್ಕಳಿಬ್ಬರುತಾಯಿಯೊಂದಿಗೆ ಅಳಲಾರಂಭಿಸಿವೆ. ಇದೇವೇಳೆಗೆ ಕರ್ತವ್ಯಕ್ಕೆ ತೆರಳುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿಯೋರ್ವರು ಜನರು ಗುಂಪುಗೂಡಿರುವುದನ್ನು ಕಂಡು ಸ್ಥಳಕ್ಕೆ ತೆರಳಿದ್ದಾರೆ. ತಕ್ಷಣ ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ, ಆಕೆಗೆಹೆರಿಗೆ ನೋವು ಮತ್ತಷ್ಟು ಹೆಚ್ಚಾದ ಪರಿಣಾಮ ಸ್ಥಳದಲ್ಲೇ ವೈದ್ಯರ ಸಲಹೆಯಂತೆ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ.

ಮಾನವೀಯತೆ ಮೆರೆದ ಜನ: ನಗರದ ಪೀಪಲ್ಸ್‌ ಉದ್ಯಾನದಲ್ಲಿ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಯ ಸ್ಥಿತಿಯಲ್ಲಿರುವುದನ್ನುಕಂಡ ನಂಜನಗೂಡು ತಾಲೂಕು ನವಿಲೂರು ಗ್ರಾಮದ ಸರ್ಕಾರಿ ಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾಕುಮಾರಿ ಕೂಡಲೇ ಆ್ಯಂಬುಲೆನ್ಸ್‌ಗೆಕರೆ ಮಾಡಿದ್ದಾರೆ. ಆದರೆ ಮಹಿಳೆಗೆ ಹೆರಿಗೆನೋವು ಮತ್ತಷ್ಟು ಹೆಚ್ಚಾದ ಹಿನ್ನೆಲೆ ವೈದ್ಯರಸಲಹೆಯಂತೆ ಶಿಕ್ಷಕಿ ಶೋಭಾ ಹೆರಿಗೆಗೆಸುಸೂತ್ರವಾಗಿ ಮಾಡಿಸಿದ್ದಾರೆ. ಈಸಂದರ್ಭದಲ್ಲಿ ಅಸಹಾಯಕರಂತಿದ್ದ ಅಕ್ಕಪಕ್ಕದ ಟೀ ಅಂಗಡಿ ಮಾಲೀಕರು ಟಾರ್ಪಲ್, ಬಟ್ಟೆಗಳನ್ನ ನೀಡಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಅಂತಿಮವಾಗಿ ಪಾರ್ಕ್‌ನಲ್ಲೆ ಮಹಿಳೆ ಹೆಣ್ಣು ಮಗುವಿಗೆ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬುಡಕಟ್ಟು ಜನಾಂಗದ ಸೇರಿದ ಮಲ್ಲಿಗೆಯನ್ನು ವಿವಾಹವಾಗಿದ್ದಾತ ಎರಡು ಮಕ್ಕಳ ಜೊತೆಗೆ ಮತ್ತೂಂದು ಮಗುವಿಗೂ ಗರ್ಭವತಿ ಮಾಡಿ ಕೈಕೊಟ್ಟು ಬೀದಿಪಾಲು ಮಾಡಿದ್ದಾನೆ. ಪರಿಣಾಮ ತನ್ನೆರೆಡು ಮಕ್ಕಳನ್ನ ಸಾಕುವ ಸಲುವಾಗಿ ಮೈಸೂರಿಗೆ ಬಂದಿದ್ದಆಕೆ ಹೊಟೇಲ್‌ವೊಂದರಲ್ಲಿ ಕೆಲಸಮಾಡುತ್ತಿದ್ದಳು. ಕಳೆದರೆಡು ದಿನಗಳ ಹಿಂದೆ ತಂದೆ ಮನೆಗೆ ತೆರಳಿದ್ದ ಆಕೆ ಮಂಗಳವಾರಮೈಸೂರಿಗೆ ಸಾರಿಗೆ ಬಸ್‌ನಲ್ಲಿ ಆಗಮಿಸಿದ್ದಾಳೆ.ಬಸ್‌ ನಿಲ್ದಾಣಕ್ಕೆ ಆಗಮಿಸಿದಾಗ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಪಕ್ಕದ ಪೀಪಲ್ಸ್‌ ಪಾರ್ಕ್‌ಗೆ ತೆರಳಿದ್ದಾಳೆ.

ಒಟ್ಟಾರೆ ಅಸಹಾಯಕ ಸ್ಥಿತಿಯಲ್ಲಿದ್ದ ಮಹಿಳೆಗೆ ನೆರವಾಗುವುದಲ್ಲದೇ, ಆಕೆಗೆ ಸುಸೂತ್ರವಾಗಿ ಹೆರಿಗೆ ಮಾಡಿಸಿ ನಗರದ ಕೆ.ಆರ್‌. ಚಲುವಾಂಭ ಆಸ್ಪತ್ರೆಗೆ ದಾಖಲಿಸಿರುವ ಸ್ಥಳೀಯರ ಕೆಲಸಕ್ಕೆ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ಮೆಚ್ಚುಗೆ ಬಂದಿದೆ.

ಇದೇ ಮೊದಲ ಬಾರಿಗೆ ಹೆರಿಗೆ ಮಾಡಿಸಿದ್ದು: ಶಿಕ್ಷಕಿ :

ನಾನು ಹೆರಿಗೆ ಮಾಡಿಸಿದ್ದು ಇದೇ ಮೊದಲು. ಆರಂಭದಲ್ಲಿ ಭಯವಾಗಿತ್ತು. ವೈದ್ಯರು ನನಗೆ ಧೈರ್ಯ ತುಂಬಿದರು. ಇಂದು ಶಾಲೆಗೆತಡವಾಗಿ ಹೋಗಿರುವುದಕ್ಕೆ ಯಾವುದೇಬೇಸರವಿಲ್ಲ. ಎರಡು ಜೀವಗಳನ್ನು ಉಳಿಸಿದ್ದಕ್ಕೆ ಸಂತಸವಾಗುತ್ತಿದೆ ಎಂದು ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ಕುಮಾರಿ ಮೆಚ್ಚುಗೆವ್ಯಕ್ತಪಡಿಸಿದ್ದಾರೆ. ಇವರು ನಂಜನಗೂಡು ತಾಲೂಕು ನವಿಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ತುರ್ತು ಸಂದರ್ಭದಲ್ಲಿ ಸರಿಯಾಗಿ ಹೆರಿಗೆ ಮಾಡಿಸಿದ್ದರಿಂದ ತಾಯಿ ಮಗು ಸುರಕ್ಷಿತವಾಗಿದ್ದಾರೆ.ಹೆರಿಗೆ ಬಳಿಕ ಮಹಿಳೆ ನಿತ್ರಾಣಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯ ಮತ್ತಿಬ್ಬರು ಮಕ್ಕಳಿಗೆ ಆಹಾರ ನೀಡಿದ್ದು, ತಾಯಿಯೊಂದಿಗಿದ್ದಾರೆ. ತಾಯಿ ಕಾರ್ಡ್‌ನಲ್ಲಿದ್ದ ಮಹಿಳೆಯ ಸಹೋದರನ ಮೊಬೈಲ್‌ ನಂಬರ್‌ಗೆ ಕಡೆ ಮಾಡಿ ಹೆರಿಗೆಯ ಮಾಹಿತಿ ನೀಡಲಾಗಿದೆ. ಡಾ.ಪ್ರಮೀಳಾ, ಚೆಲುವಾಂಬ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.