ವಿಜ್ಞಾನ ಮಾದರಿಯಿಂದ ಮಕ್ಕಳಿಗೆ ಸುಲಭದಲ್ಲಿ ಅರಿವು
Team Udayavani, Jan 17, 2017, 12:34 PM IST
ಹುಣಸೂರು: ಗ್ರಾಮೀಣ ಭಾಗದ ವಿದ್ಯಾರ್ಥಿ ಗಳಲ್ಲಿ ವಿಜ್ಞಾನದ ಕುರಿತು ಅರಿವ ಕುತೂಹಲವಿರುತ್ತದೆ. ಶಿಕ್ಷಕರು ಸ್ಥಳೀಯ ವಾಗಿ ಲಭ್ಯವಾಗುವ ಸಾಮಗ್ರಿ ಗಳನ್ನು ಬಳಸಿಕೊಂಡು ವಿಜ್ಞಾನದ ಮಾದರಿ ತಯಾರಿಸಿ ಮಕ್ಕಳಲ್ಲಿ ಅರಿವು ಮೂಡಿಸ ಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಕೆ. ಶಿವಣ್ಣ ಸೂಚಿಸಿದರು.
ನಗರದ ಶಿಕ್ಷಕರ ಭವನದಲ್ಲಿ ಐದು ದಿನಗಳ ಕಾಲ ವಿಜ್ಞಾನ ಶಿಕ್ಷಕರಿಗೆ ಆಯೋಜಿಸಿದ್ದ ವಿಜ್ಞಾನ ತರಬೇತಿ ಕಾರ್ಯಾಗಾರದಲ್ಲಿ, ಶಿಕ್ಷಕರೇ ತಯಾರಿಸಿದ್ದ ಸರಳ ವಿಜ್ಞಾನದ ಮಾದರಿಗಳನ್ನು ವೀಕ್ಷಿಸಿದರು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಶಾಲೆಗಳಲ್ಲೇ ಮಾದರಿ ತಯಾರಿಸುವ ಮೂಲಕ ಮಕ್ಕಳಿಗೆ ಬೋಧಿಸಿದಲ್ಲಿ ಸುಲಭ ವಾಗಿ ಅರ್ಥವಾಗಲಿದೆ. ಪ್ರಾಥಮಿಕ ಹಂತ ದಿಂದಲೇ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಅನುಭವ, ಕಲಿಕೆ ಮತ್ತು ಹೊಸ ಮಾದರಿಗಳ ಅನ್ವೇಷಣೆಗೆ ಉತ್ತೇಜಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಗೋಪಾಲಕೃಷ್ಣ ಭಟ್ ಮಾತನಾಡಿ, ತಾಲೂಕಿನ ಶಿಕ್ಷಕರಿಗಾಗಿ ಕಳೆದ ಐದು ದಿನಗಳಿಂದ ವಿಜ್ಞಾನ ಮಾದರಿಗಳ ತಯಾರಿಕೆ, ತರಬೇತಿ, ವಸ್ತು ಪ್ರದರ್ಶನ ನಡೆಸ ಲಾಗಿದೆ. 4-5 ಸಾವಿರ ರೂ. ವೆಚ್ಚದಲ್ಲಿ ಕಂಪ್ಯೂಟರ್ ತಯಾರಿಕೆ ಸಾಧ್ಯ ಎಂಬುದನ್ನು ಶಿಕ್ಷಕರೇ ತೋರಿಸಿರುವುದು ಪ್ರಶಂಸನೀಯ.
ಶಿಕ್ಷಕ ಹುದ್ದೆ ಸಿಕ್ಕ ನಂತರ ತರಬೇತಿ- ಕಲಿಕೆ ಯನ್ನು ಮೊಟಕುಗೊಳಿಸದೆ, ನಿರಂತರ ಅಧ್ಯಯನ ನಡೆಸುವ ಮೂಲಕ ಜ್ಞಾನ ಹೆಚ್ಚಿಸಿ ಕೊಳ್ಳಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಯನ್ನು ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದರು. ತಾಲೂಕಿನ 24 ಕ್ಲಸ್ಟರ್‌ಗಳ 43 ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮೊಗಣ್ಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.