ಸಿನಿಮಾ ಪ್ರಭಾವಶಾಲಿ ಮಾಧ್ಯಮ: ನಾಗತಿಹಳ್ಳಿ
ದಸರಾ ವಿಶೇಷವಾಗಿ ಹಲವಾರು ವೇದಿಕೆಗಳು ಸಿದ್ಧಗೊಳ್ಳುತ್ತದೆ.
Team Udayavani, Sep 23, 2022, 6:19 PM IST
ಮೈಸೂರು: ಸಿನಿಮಾ ಸಾವಿರಾರು ವರ್ಷಗಳಿಂದ ಬೆಳೆದು ಬಂದಿದ್ದ ಸಂಗೀತ, ಸಾಹಿತ್ಯ, ನಾಟಕಗಳನ್ನು ಮೊಸಕುಗೊಳಿಸಿ ಅದರ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮವಾಗಿದೆ ಎಂದು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಮಾನಸಗಂಗೋತ್ರಿ ಆವರಣದಲ್ಲಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಗುರುವಾರ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಿದ್ದ ಚಿತ್ರ ನಿರ್ಮಾಣ ಪೂರ್ವ ತಯಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಎಂಬುದು ಇಂದು ಎಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ಸಾವಿರಾರು ವರ್ಷಗಳಿಂದ ಬಂದಿದ್ದ ಸಂಗೀತ, ಸಾಹಿತ್ಯ, ನಾಟಕಗಳನ್ನು ಮೊಸಕುಗೊಳಿಸಿ ಅದರ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮವಾಗಿದೆ. ಅದರ ಭಾಗವಾಗಿ ವೆಬ್ ಸಿರೀಸ್, ಡ್ಯಾಕುಮೆಂಟರಿ, ಕಿರುಚಿತ್ರಗಳಿವೆ. ಇವುಗಳಲ್ಲಿ ನೀವು ತೊಡಗಿಸಿಕೊಳ್ಳಲು ಹಾಗೂ ಬೆಳೆಯಲು ಸಾಕಷ್ಟು
ಅವಕಾಶಗಳಿವೆ ಅಷ್ಟೇ ಕಠಿಣವಾದ ಸ್ಪರ್ಧೆ ಇದೆ. ಹೀಗಾಗಿ ಇದರಲ್ಲಿ ಯಶಸ್ಸು ಪಡೆಯಲು ಬಯಸುವವರು ಶ್ರಮ ಪಡಬೇಕು ಎಂದು ತಿಳಿ ಹೇಳಿದರು.
ಸಿನಿಮಾಕ್ಕೆ ಅದರದ್ದೇ ಆದ ವ್ಯಾಕರಣ ಹಾಗೂ ಮಾನದಂಡಗಳಿವೆ. ಇಂತಹ ಕಡೆಗೆ ತರುಣ ವಿದ್ಯಾರ್ಥಿಗಳು, ಆಸಕ್ತರು ಗಮನ ಹರಿಸಬೇಕು. ಸಿನಿಮಾ ಎಂಬುದು ಸಾಹಿತ್ಯ, ಸಂಗೀತ, ನೃತ್ಯ, ಶಿಲ್ಪಕಲೆ ಹಾಗೂ ಚಿತ್ರಕಲೆಗಳಿಗಿಂತ ತುಂಬಾ ಭಿನ್ನವಾದದ್ದು. ಇದೊಂದು ಬಹುಪ್ರತಿಭೆಗಳನ್ನು ಬೆಳಕಿಗೆ ತರುವ ಮಾಧ್ಯಮವಾಗಿದೆ ಎಂದು ಹೇಳಿದರು.
ಸಿನಿಮಾ ತಯಾರಿ ಕಲಿಕೆಗಳಿಗಾಗಿಯೇ ಬೆಂಗಳೂರಿನಲ್ಲಿ ಒಂದು ಪುಟ್ಟ ಸಿನಿಮಾ ಶಾಲೆಯನ್ನು ನಡೆಸುತ್ತೆನೆ. ಇದರ ಕಷ್ಟನಷ್ಟಗಳ ಬಗ್ಗೆ ನನಗೆ ಅರಿವಿದೆ. ನಿಶಂಶಯವಾಗಿ ಕಲಿಕೆಯನ್ನು 3 ದಿನಗಳಲ್ಲಿ ಕಲಿಯಲು ಸಾಧ್ಯವಿಲ್ಲ. ದಸರಾ ವಿಶೇಷವಾಗಿ ಹಲವಾರು ವೇದಿಕೆಗಳು ಸಿದ್ಧಗೊಳ್ಳುತ್ತದೆ.
ಅಂತಹ ವೇದಿಕೆಗಳನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಇಲ್ಲಿಗೆ ಬಂದರೆ ಯಾರೇ ಆಗಲಿ ಬರಿ ಕೈಯಲ್ಲಿ ಹೋಗ ಬಾರದು. ಏನನ್ನಾದರೂ ಕಲಿತು ಹಾಗೂ ಪಡೆದುಕೊಂಡು ಹೋಗಬೇಕು. ಕಾರಣ ಅರಿವು ಎಂದು ತುಂಬಾ ಮುಖ್ಯ. ಪ್ರತಿಭೆಯು ವ್ಯಕ್ತಿಗತವಾದದ್ದು, ಇದನ್ನು ಯಾರು ಹೇಳಿಕೊಡಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಭೆಯನ್ನು ಆಸಕ್ತಿಯಿಂದ ಕಲಿಯಬೇಕು ಹಾಗೂ ಸಮಾಜದ ಜೊತೆ ಒಡನಾಟವಿಟ್ಟುಕೊಳ್ಳುವುದರಿಂದ ಪ್ರತಿಭೆಯನ್ನು ಮೊನಚುಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್ ಕುಮಾರ್ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪ ಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.