ಬೇಡಿಕೆ ಈಡೇರಿಕೆಗೆ ಸಿಐಟಿಯು ಪ್ರತಿಭಟನೆ


Team Udayavani, Jun 25, 2017, 11:43 AM IST

mys1.jpg

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಅಂಧಮಕ್ಕಳ ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಹಾಗೂ ಸೆಂಟರ್‌ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್‌(ಸಿಐಟಿಯು) ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತ್ಯೇಕ ಪ್ರತಿಭ‌ಟನೆ ನಡೆಸಿದರು.

ಅಧೀಕ್ಷಕರನ್ನು ನೇಮಿಸಿ: ತಿಲಕ್‌ನಗರದಲ್ಲಿರುವ ಸರ್ಕಾರಿ ಅಂಧಮಕ್ಕಳ ಶಾಲಾ ಆವರಣದಲ್ಲಿ ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಈ ಹಿಂದೆ ಶಾಲೆಯ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಸತೀಶ್‌ ಅವರನ್ನೇ ಅಧೀಕ್ಷಕರನ್ನಾಗಿ ಮರು ನೇಮಿಸುವಂತೆ ಆಗ್ರಹಿಸಿದರು. 

ಪ್ರತಿಭ‌ಟನೆಯಲ್ಲಿ ಪರಿಸರವಾದಿ ಸಿ.ನಾಗಣ್ಣ, ಮಕ್ಕಳ ಹಕ್ಕುಗಳ ಹೋರಾಟಗಾರ ಈ.ಧನಂಜಯ ಎಲಿಯೂರು, ಪೋಷಕರಾದ ನಾಗಮ್ಮ, ಗೋಪಾಲ್‌, ನಾಗೇಂದ್ರ, ಮರಿಯಪ್ಪ, ಸುಮಾ, ಸಿದ್ದರಾಮ, ವಿದ್ಯಾರ್ಥಿಗಳಾದ ಧನುಷ್‌, ನವೀನ, ಅಶೋಕ, ಮನುಕುಮಾರ್‌, ಅಭಿಷೇಕ್‌, ಪ್ರಜ್ವಲ್‌, ಮಂಜಪ್ಪ, ಶಿವು, ಮಂಜುನಾಥ್‌, ಮಣಿಕಂಠ, ಧರ್ಮ, ವಿಜಯ, ಶಿವುಮೂರ್ತಿ, ಮಂಜುನಾಥ್‌, ಗಂಗಾಧರ, ಮಂಜಪ್ಪ ಇತರರಿದ್ದರು.

ಮಾಲಿಕರ ವಿರುದ್ಧ ಕಿಡಿ: ಜಿಲ್ಲೆಯ ವಿವಿಧ ಕಾರ್ಖಾನೆಗಳಲ್ಲಿ ಗುತ್ತಿಗೆ ಆಧಾರದಲ್ಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಕಷ್ಟಗಳಿಗೆ ಸ್ಪಂದಿಸದೆ ವಿನಾಕಾರಣ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸುವ ಕಾರ್ಖಾನೆ ಮಾಲಿಕರುಗಳ ವರ್ತನೆಯನ್ನು ಖಂಡಿಸಿ ಸಿಐಟಿಯು ಸಂಘಟನೆಯ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಪ್ರತಿಭಟನೆ ನಡೆಸಿದರು.

ನಗರದ ಯಾದವಗಿರಿ, ಹೆಬ್ಟಾಳು, ಹೂಟಗಳ್ಳಿ, ಮೇಟಗಳ್ಳಿ, ಕೂರ್ಗಳ್ಳಿ ಮತ್ತು ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ಸಮಸ್ಯೆಗಳು ಹಾಗೂ ಕಷ್ಟಗಳನ್ನು ಬಗೆಹರಿಸಿಕೊಳ್ಳುವ ಸಲುವಾಗಿ ಸಂಘವನ್ನು ರಚಿಸಿಕೊಂಡಿದ್ದಾರೆ. ಆದರೆ ಇದನ್ನು ಸಹಿಸದ ಕೆಲವು ಕಾರ್ಖಾನೆಗಳ ಮಾಲಿಕರು ಕಾರ್ಮಿಕ ಸಂಘದಲ್ಲಿ ಗುರುತಿಸಿಕೊಂಡಿರುವ ಕಾರ್ಮಿಕರನ್ನು ವಿನಾಕಾರಣ ಕೆಲಸದಿಂದ ತೆಗೆದು ಹಾಕುತ್ತಿರುವುದು ಖಂಡನೀಯ.

ಇನ್ನೂ ಕೆಲವು ಕಾರ್ಮಿಕರನ್ನು ಬೇಕಂತಲೇ ಬೇರೆಡೆಗೆ ವರ್ಗಾವಣೆ ಮಾಡುವ ಮೂಲಕ ಮಾನಸಿಕ ಹಿಂಸೆ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೊಂದ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ನ್ಯಾಯ ಕೊಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಟಾಪ್ ನ್ಯೂಸ್

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.