ಮೈಸೂರು: ರಸ್ತೆ ಕಾಮಗಾರಿ ವಿಚಾರದಲ್ಲಿ ಘರ್ಷಣೆ: ಇಬ್ಬರಿಗೆ ಗಾಯ
Team Udayavani, Jun 23, 2020, 10:41 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೈಸೂರು: ರಸ್ತೆ ಕಾಮಗಾರಿ ವಿಚಾರದಲ್ಲಿ ಎರಡು ಬಣಗಳ ನಡುವೆ ಘರ್ಷಣೆ ಸಂಭವಿಸಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
ಮೈಸೂರು ತಾಲೂಕಿನ ಆನಂದೂರು ಗ್ರಾಮ ಪಂಚಾಯಯತ್ ವ್ಯಾಪ್ತಿಯಲ್ಲಿ ಈ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಆನಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕಾಂಗ್ರೆಸ್ ನ ರಾಮೇ ಗೌಡ ಹಾಗೂ ಅದೇ ಗ್ರಾಮದ ನಿವಾಸಿ ಜೆಡಿಎಸ್ ನ ಚಂದ್ರಶೇಖರ್ ಅವರು ಗಾಯಗೊಂಡವರಾಗಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ರಾಮೇ ಗೌಡ ಅವರು ಈ ಭಾಗದಲ್ಲಿ ಸರಕಾರಿ ರಸ್ತೆ ಕಾಮಗಾರಿ ಮಾಡಿಸುತ್ತಿದ್ದರು. ಈ ಸಂದರ್ಭದಲ್ಲಿ ತನ್ನ ಜಮೀನಿನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿ ಚಂದ್ರಶೇಖರ್ ಅವರು ತಗಾದೆ ತೆಗೆದಿದ್ದಾರೆ.
ಈ ಸಂದರ್ಭದಲ್ಲಿ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಒಂದು ಹಂತದಲ್ಲಿ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಇಲವಾಲ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.