ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆ ಆರಂಭ

Team Udayavani, Feb 13, 2018, 12:32 PM IST

m6-sarvekhsha.jpg

ಮೈಸೂರು: ದೇಶದ ಸ್ವಚ್ಛತಾ ನಗರಿ ಸ್ಪರ್ಧೆಯಲ್ಲಿ ಈಗಾಗಲೇ ಎರಡು ಬಾರಿ ಅಗ್ರಸ್ಥಾನ ಪಡೆದು ಮತ್ತೂಮ್ಮೆ ಅಗ್ರಸ್ಥಾನ ಪಡೆಯಲು ಪ್ರಯತ್ನ ನಡೆಸುತ್ತಿರುವ ಮೈಸೂರಿಗೆ ಸೋಮವಾರ ಸ್ವಚ್ಛ ಸರ್ವೇಕ್ಷಣ್‌ ತಂಡ ಆಗಮಿಸಿ ಸಮೀಕ್ಷೆ ಆರಂಭಿಸಿದೆ.

ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ನಡೆಸುತ್ತಿರುವ ಸಮೀಕ್ಷೆ ನಡೆಯಲು ಆಗಮಿಸಿರುವ ತಂಡ ನಗರದಲ್ಲಿ ಮೂರು ದಿನಗಳ ಪರಿಶೀಲನೆ ನಡೆಸಲಿದೆ. ರಾಜ್ಯ ಘಟಕದ ಮುಖ್ಯಸ್ಥ ಶ್ರೀನಿವಾಸನ್‌ ನೇತೃತ್ವದಲ್ಲಿ ವೀಕ್ಷಕರಾದ ಅಜಯ್‌, ಶ್ವೇತಾ, ಚೇತನ್‌ ಮತ್ತು ಪೂಜಾ ಅವರ ತಂಡ, ಸಮೀಕ್ಷೆ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಸಮೀಕ್ಷೆ ಹಿನ್ನೆಲೆಯಲ್ಲಿ ನಗರ ಪಾಲಿಕೆಗೆ ಭೇಟಿ ನೀಡಿದ ಸರ್ವೇಕ್ಷಣೆ ತಂಡದ ಅಧಿಕಾರಿಗಳು, ಸ್ವಚ್ಛತೆಗೆ ಸಂಬಂಧಿಸಿದಂತೆ ಪಾಲಿಕೆ ಸಂಗ್ರಹಿಸಿರುವ ಪ್ರಮುಖ ದಾಖಲಾತಿಗಳು, ಪೌರ ಕಾರ್ಮಿಕರ ಹಾಜರಾತಿಗೆ ಸಂಬಂಧಿಸಿದ ಬಯೋಮೆಟ್ರಿಕ್‌ ಇನ್ನಿತರ ಅಂಶಗಳ ಪರಿಶೀಲನೆ ನಡೆಸಿದರು.

ಜನಾಭಿಪ್ರಾಯ ಪ್ರಮುಖ: ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆಯಲ್ಲಿ ಪ್ರಮುಖವಾಗಿ ನಗರದಲ್ಲಿ ಕಸ ಸಂಗ್ರಹಣೆ, ತಾಜ್ಯ ವಿಲೇವಾರಿ ಸೇರಿದಂತೆ ಅನೇಕ ವಿಷಯಗಳನ್ನು ಪರಿಶೀಲನೆ ನಡೆಸಲಾಗುವುದು. ಇದಕ್ಕೂ ಮುಖ್ಯವಾಗಿ ಮೈಸೂರಿನ ಸ್ವಚ್ಛತೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯಗಳನ್ನು ಸಹ ಅಧಿಕಾರಿಗಳು ಸಂಗ್ರಹಿಸಲಿದ್ದು, ಈ ಸಂದರ್ಭದಲ್ಲಿ ಜನರು ನೀಡುವ ಅಭಿಪ್ರಾಯಗಳು ಸ್ವಚ್ಛತಾ ಸಮೀಕ್ಷೆಯಲ್ಲಿ ಪ್ರಮುಖ ಪಾತ್ರವಹಿಸಲಿದೆ.

ಈ ಬಾರಿಯ ಸ್ವಚ್ಛ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ದೇಶದ ಎಲ್ಲಾ ನಗರಗಳಲ್ಲಿ ಜ.4ರಿಂದ ಸಮೀಕ್ಷೆ ಆರಂಭಗೊಂಡಿದ್ದು, ಮಾರ್ಚ್‌ 10ರವರೆಗೆ ನಡೆಯಲಿದೆ. ಕಳೆದ ಬಾರಿ ಸ್ವಚ್ಛ ಸಮೀಕ್ಷೆಗೆ ನಿಗದಿಪಡಿಸಲಾಗಿದ್ದ, ಅಂಕವನ್ನು ಈ ಬಾರಿ 2000ಕ್ಕೆ ಬದಲಾಗಿ 4000 ಅಂಖಗಳಿಗೆ ನಿಗದಿಗೊಳಿಸಲಾಗಿದೆ.

ಮೂರು ದಿನ ಸಮೀಕ್ಷೆ: ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆಗಾಗಿ 12 ಮಂದಿಯ ತಂಡ ನಗರಕ್ಕಾಗಮಿಸಿದ್ದಾರೆ. ನಗರದಲ್ಲಿ ಮೂರು ದಿನಗಳ ಕಾಲ ನಡೆಯುವ ಸಮೀಕ್ಷೆಯಲ್ಲಿ ಸ್ಥಳ ಪರಿಶೀಲನೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.

ಈ ಬಾರಿಯ ಸ್ವಚ್ಛತಾ ಸಮೀಕ್ಷೆಯಲ್ಲಿ ಪಾಲಿಕೆಯಿಂದ ಮಾಹಿತಿ ಸಂಗ್ರಹ ಮತ್ತು ಸಂವಹನಕ್ಕೆ 1400 ಅಂಕ ಹಾಗೂ ಸ್ಥಳ ಭೇಟಿಗೆ 1,200 ಅಂಕ ನಿಗದಿ ಪಡಿಸಲಾಗಿದೆ. ಸ್ವಚ್ಛತಾ ಬಳಕೆ ಆ್ಯಪ್‌ ಸೇರಿದಂತೆ ಸಾರ್ವಜನಿಕರ ಫೀಡ್‌ ಬ್ಯಾಕ್‌ಗೆ 1,400 ಅಂಕ ನಿಗದಿ ಪಡಿಸಿದ್ದು, ಆ್ಯಪ್‌ ಬಳಕೆಗೆ ನಿಗದಿಯಾಗಿರುವ 400 ಪೂರ್ಣ ಅಂಕವನ್ನು ಪಾಲಿಕೆ ಈಗಾಗಲೇ ಪಡೆದುಕೊಂಡಿದೆ ಎಂದು ಪಾಲಿಕೆ ಆಯುಕ್ತ ಜಿ. ಜಗದೀಶ್‌ ತಿಳಿಸಿದರು.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.