ಸಿಎಂ ಸಮಯ ಕೇಳಿದ್ದಾರೆ,ಕಾಯುವೆ: ವಿಶ್ವನಾಥ್
Team Udayavani, Feb 5, 2020, 8:59 PM IST
ಮೈಸೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಗೆ ಕಾರಣರಾದ ನಮ್ಮ ಶಾಸಕ ಸ್ನೇಹಿತರು ಗುರುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಬೆಂಗಳೂರಿಗೆ ಹೋಗಿ ಅವರಿಗೆಲ್ಲ ಶುಭಾಶಯ ಕೋರಿ ಬರುತ್ತೇನೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನನಗೆ ಅವಸರವಿದೆಯೇ ಹೊರತು ಸಚಿವನಾಗಲು ಅವಸರವಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಮಾತನಾಡಿದ್ದೇನೆ.
ಮುಖ್ಯಮಂತ್ರಿಯಾದವರಿಗೆ ಕೆಲ ತೊಡಕುಗಳಿರುತ್ತವೆ. ಹೀಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳಿ ಎಂದು ಅವರು ಹೇಳಿದ್ದಾರೆ. ಅದಕ್ಕಾಗಿ ಕಾಯುತ್ತೇನೆ ಎಂದರು.
ನಮ್ಮನ್ನೆಲ್ಲ ಒಟ್ಟುಗೂಡಿಸಿ, ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗುವುದರಲ್ಲಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಪಾತ್ರ ಏನೇನೂ ಇಲ್ಲ. ಅವರಿಗೇಕೆ ಸಚಿವ ಸ್ಥಾನ ಕೊಡಬೇಕು ಎಂದು ಪ್ರಶ್ನಿಸಿದ ವಿಶ್ವನಾಥ್ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವುದನ್ನು ಬಿಜೆಪಿಯಲ್ಲಿನ ಹಿರಿಯರೇ ಒಪ್ಪುತ್ತಿಲ್ಲ. ಹೀಗಿರುವಾಗ ಅವರಿಗೆ ಸಚಿವ ಸ್ಥಾನ ಕೊಡುವ ಅಗತ್ಯವೇನಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.