ಕಾಂಗ್ರೆಸ್ ಪರಿಚಯ ಜನರಿಗಿದೆ: ಸಿಎಂ ಬೊಮ್ಮಾಯಿ
Team Udayavani, Dec 13, 2022, 1:16 PM IST
ಮೈಸೂರು: ಜನರಿಗೆ ಮರೆವಿದೆ ಎಂದು ಕಾಂಗ್ರೆಸ್ ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.
ಧೈರ್ಯ ಮಾಡಲಿಲ್ಲ: ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. 5 ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ವರದಿಯನ್ನು ಮಂಡಿಸುವ ಸಮಾವೇಶವೊಂದರಲ್ಲಿ ಕೇವಲ ದೀಪ ಹಚ್ಚಿ ಬಂದರು, ಮಾತನಾಡಲೂ ಇಲ್ಲ. ಎಲ್ಲಾ ನಡೆನುಡಿಗಳು ಜನರ ಮನದಾಳದಲ್ಲಿದೆ. ಅದನ್ನು ಮುಚ್ಚಿಹಾಕಲು ಸಮಾವೇಶ ಮಾಡಿದರು. ಜನರನ್ನು ಪದೇ ಪದೇ ಮರಳು ಮಾಡಲು ಸಾಧ್ಯವಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮೆಯಾದರೂ ಒತ್ತಾಯ ಮಾಡಿದ್ದರೆ ಎಂದು ಪ್ರಶ್ನಿಸಿದರು.
ಗೊಂದಲ ಇಲ್ಲ: ಎಸ್.ಸಿ / ಎಸ್.ಟಿ ಮೀಸಲಾತಿ ಬಗ್ಗೆ ಗೊಂದಲಗಳೇನೂ ಇಲ್ಲ. ಪ್ರಶ್ನೆಗೆ ಉತ್ತರ ನೀಡಲಾಗುತ್ತಿದೆ. ಈಗ ಪ್ರಸ್ತಾವನೆ ಮುಂದಿದೆಯೇ ಎಂದು ಕೇಳಿದ್ದಾರೆ. ಸದ್ಯಕ್ಕಿಲ್ಲ, ನಾಳೆ ಪ್ರಸ್ತಾವನೆ ಹೋಗಲಿದೆ. ಇದನ್ನು ಕಾಂಗ್ರೆಸ್ ಹುಟ್ಟುಹಾಕುತ್ತಿದೆ. ಅವರಿಗೆ ಎಸ್.ಸಿ/ ಎಸ್.ಟಿ ಮತಗಳು ತಪ್ಪಿಹೋಗುತ್ತಿವೆ ಎನ್ನುವ ಆತಂಕದಿಂದ ಹೀಗೆ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.