1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ
ನಾನು ಯಾವುದೇ ತಪ್ಪು ಮಾಡಿಲ್ಲ: ಸಿಎಂ
Team Udayavani, Oct 4, 2024, 6:55 AM IST
ಮೈಸೂರು: ದೇವರಾಜ ಅರಸು ಬಿಟ್ಟರೆ ಅನಂತರ 5 ವರ್ಷ ಸಂಪೂರ್ಣವಾಗಿ ಸರಕಾರ ಮಾಡಿದ್ದು ಈ ಸಿದ್ದರಾಮಯ್ಯ ಮಾತ್ರ. ತಾಯಿ ಚಾಮುಂಡಿಯ ಆಶೀರ್ವಾದ ನನ್ನ ಮೇಲೆ ಇದೆ. ಇನ್ನೊಂದು ವರ್ಷದವರೆಗೂ ಚಾಮುಂಡೇಶ್ವರಿಯ ಆಶೀರ್ವಾದ ಇರಲಿ. ಇನ್ನೊಂದು ವರ್ಷ ಒಳ್ಳೆಯ ಕೆಲಸ ಮಾಡಲು ದೇವಿ ಆಶೀರ್ವಾದ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚ್ಯವಾಗಿ ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕೃಪೆಯಿಂದ ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ಮಾಡಿದ್ದರೆ ಇಷ್ಟು ಸುದೀರ್ಘ ರಾಜ-ಕಾರಣ ಮಾಡಲು ಆಗುತ್ತಿರಲಿಲ್ಲ. ಚಾಮುಂಡೇಶ್ವರಿ ಕೃಪೆಯಿಂದ ಇಲ್ಲಿಯವರೆಗೆ ಇದ್ದೇನೆ ಎಂದರು.
9 ಚುನಾವಣೆ ಗೆದ್ದಿದ್ದೇನೆ
ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಬೇರೆ ಪಕ್ಷದಲ್ಲಿ ಇದ್ದರೂ ಸತ್ಯದ ಮಾತು ಹೇಳಿದ್ದಾರೆ. ಸತ್ಯ ಮೇವ ಜಯತೇ. ಸತ್ಯಕ್ಕೆ ಯಾವಾಗಲೂ ಜಯ ಅಂತ. ಜನರ ಆಶೀರ್ವಾದ ಸರಕಾರದ ಮೇಲೆ, ನನ್ನ ಮೇಲೆ ಇರುವವರೆಗೂ ಯಾರಿಂದಲೂ ಏನೂ ಮಾಡಲು ಆಗುವುದಿಲ್ಲ.
ಜಿಟಿಡಿಯೆ ನನ್ನನ್ನು ಈ ಕ್ಷೇತ್ರದಲ್ಲಿ ಸೋಲಿಸಿದ್ದು. ಅದು ನನ್ನ ಕೈಯ್ನಾರೆ ಮಾಡಿಕೊಂಡ ಸೋಲು. ನಾನು 9 ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಚಾಮುಂಡೇಶ್ವರಿ ಕೃಪೆಯಿಂದ ಇಲ್ಲಿಯವರೆಗೆ ಇದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ ಎಂದರು.
ಪ್ರಜಾಪ್ರಭುತ್ವ ವಿರೋಧಿ ಕ್ರಮ
ಹಂ.ಪ. ನಾಗರಾಜಯ್ಯ ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರಕಾರಗಳನ್ನು ವಾಮಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾ ರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ ಎಂದು ಹೇಳಿದರು.
ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. 5 ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.