CM ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪಾಗಿದೆ: ಮೈಸೂರು ಚಲೋ ಸಮಾರೋಪದಲ್ಲಿ ಎಚ್ ಡಿಕೆ ಕಿಡಿ
ಕಾಫಿ ಡೇ ಸಿದ್ದಾರ್ಥ ಸಾವಿಗೆ ಕಾರಣ ಯಾರು? ಡಿ.ಕೆ.ಶಿವಕುಮಾರ್ ಗೆ ಸವಾಲೆಸೆದ ಕೇಂದ್ರ ಸಚಿವ
Team Udayavani, Aug 10, 2024, 7:42 PM IST
ಮೈಸೂರು: ‘ನನ್ನ ಬದುಕಿನಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ಈಗ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಗಿ ಕಿಡಿ ಕಾರಿದ್ದಾರೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ (ಆಗಸ್ಟ್ 10) ನಡೆದ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಮಾತನಾಡಿ ” ಮುಡಾ ದಲ್ಲಿ ಕಾನೂನು ಬಾಹಿರವಾಗಿ ಸೈಟ್ ಪಡೆದಿರುವ ಕುರಿತು ಪ್ರಶ್ನೆ ಮಾಡುತ್ತಿದ್ದು ಅರಿಶಿನ ಕುಂಕುಮಕ್ಕಾಗಿ ಭೂಮಿ ಕೊಟ್ಟಿದ್ದು ತಪ್ಪೇ ಎನ್ನುತ್ತಿದ್ದಾರೆ. ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡುತ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಟ್ಟಿರುವುದು ಸರಕಾರದ ಭೂಮಿ. ಸಿದ್ದರಾಮಯ್ಯ ಅವರ ಮೂಗಿನ ನೇರಕ್ಕೆ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಸಿದ್ದರಾಮಯ್ಯ ಅವರು ವಾಪಸ್ ಕೊಡುತ್ತೇನೆ ಎಂದು ಸೈಟ್ ವಾಪಸ್ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವೇ ಎಂದು ಪ್ರಶ್ನಿಸಿದರು.
‘ಸಿದ್ದರಾಮಯ್ಯ ಅವರೇ ನೀವು ಕೇವಲ ಹಿಂದುಳಿದ ವರ್ಗಗಳ ಮುಖ್ಯಮಂತ್ರಿಯಲ್ಲ, ರಾಜ್ಯದ ಆರುವರೆ ಕೋಟಿ ಜನರ ಪ್ರತಿನಿಧಿ. ಅವರೆಲ್ಲರ ರಕ್ಷಣೆ ಮಾಡುವ ಜವಾಬ್ದಾರಿ ನಿಮ್ಮದು’ ಎಂದು ಕಿಡಿ ಕಾರಿದರು.
ಡಿ.ಕೆ.ಶಿವಕುಮಾರ್ ವಿರುದ್ದ ಆಕ್ರೋಶ
“ನನ್ನ ಅಣ್ಣನ ಮಗನನ್ನು(ಎಚ್.ಡಿ.ರೇವಣ್ಣ ಅವರ ಪುತ್ರ) ಜೈಲಿಗೆ ಕಳುಹಿಸಿದ್ದೇನೆ ಎಂದು ಹೇಳಿದ್ದೀರಿ. ಮಿಸ್ಟರ್ ಶಿವಕುಮಾರ್, ನಾನು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಿಂತು ಮಾತಾಡುತ್ತಿದ್ದು, ಕಾಫಿ ಡೇ ಮಾಲಕ ಸಿದ್ದಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ಹೇಳುತ್ತೀರಾ?” ಎಂದು ಗಂಭೀರ ಸವಾಲೆಸೆದರು.
ವಿಡಿಯೋ ಪ್ರದರ್ಶನ ಪೈಪೋಟಿ
ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಬಂಧನಕ್ಕೊಳಗಾಗಿ ತಿಹಾರ್ ಜೈಲಿಗೆ ಹೋಗಿದ್ದ ವಿಡಿಯೋ ಪ್ರದರ್ಶಿಸಲಾಯಿತು. ದಲಿತ ಕುಟುಂಬದ ಮೇಲೆ ದೌರ್ಜನ್ಯ ಮಾಡಿದುದು, ಕಾಂಗ್ರೆಸ್ ಭ್ರಷ್ಟಾಚಾರದ ಕುರಿತು ಸ್ವಪಕ್ಷೀಯರೇ ಆದ ಜನಾರ್ದನ ಪೂಜಾರಿ, ಮಾರ್ಗರೆಟ್ ಆಳ್ವ, ಬಿ.ಕೆ.ಹರಿಪ್ರಸಾದ್, ರಮೇಶ್ ಕುಮಾರ್ ಮೊದಲಾದ ಹಿರಿಯ ನಾಯಕರ ಹೇಳಿಕೆಗಳನ್ನು ಪ್ರದರ್ಶಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.