ರೈತರಿಗಾಗಿ ಸಹಕಾರಿ ಸಂಸ್ಥೆಗಳನ್ನು ಕಟ್ಟಿ ಬೆಳೆಸಬೇಕು
Team Udayavani, May 28, 2017, 12:24 PM IST
ಮೈಸೂರು: ಸಹಕಾರಿ ಸಂಘಗಳ ಅಭಿವೃದ್ಧಿಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಈ ಹಿನ್ನೆಲೆ ಹೆಚ್ಚಿನ ಸಹಕಾರಿ ಸಂಸ್ಥೆಗಳನ್ನು ಕಟ್ಟಿ ಬೆಳೆಸಬೇಕಿದೆ ಎಂದು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಅಧ್ಯಕ್ಷ ಎಸ್. ಚಂದ್ರಶೇಖರ್ ಅಭಿಪ್ರಾಯಪಟ್ಟರು.
ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ನಗರದ ಚಾಮರಾಜ ಜೋಡಿರಸ್ತೆಯಲ್ಲಿರುವ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಪರಿಶಿಷ್ಟ ಜಾತಿ/ಪಂಗಡಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸಹಕಾರಿ ಸಂಘಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯುತ್ತಿದ್ದು, ಸಹಕಾರ ಸಂಘಗಳು ಬೆಳೆದಂತೆ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಅಲ್ಲದೆ ಸಹಕಾರ ಸಂಸ್ಥೆಗಳ ಆರ್ಥಿಕ ವಹಿವಾಟಿನಿಂದ ಮಾರುಕಟ್ಟೆ ನಿಯಂತ್ರಿಸಬಹುದಾಗಿದ್ದು, ರಾಜಕೀಯ ಹಾಗೂ ಆರ್ಥಿಕ ಅಭಿವೃದ್ಧಿಗೂ ಸಹಕಾರಿ ಸಂಘ-ಸಂಸ್ಥೆಗಳು ಸಹಾಯ ಮಾಡುತ್ತವೆ. ರಾಜಕೀಯ ಕ್ಷೇತ್ರದಿಂದ ಸಿಗದಿರುವುದು ಸಹ ಸಹಕಾರಿ ಕ್ಷೇತ್ರದಿಂದ ದೊರೆಯಲಿದೆ. ಈ ಹಿನ್ನೆಲೆ ಸಹಕಾರಿ ಸಂಘಗಳಿಗೆ ಸಿಗುವ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಮುಂದೆ ಬರಲು ಹೆಚ್ಚು ಶ್ರಮವಹಿಸಬೇಕು ಎಂದರು.
ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಪಿ.ಸತೀಶ್ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ಈ ಭಾಗದಲ್ಲಿ ಸಹಕಾರಿ ಸಂಘಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಈ ಭಾಗದ ಜನರಲ್ಲಿ ಸಹಕಾರ ಸಂಘಗಳ ಬಗ್ಗೆ ಹೆಚ್ಚಿನ ಆಸಕ್ತಿ ಇಲ್ಲ. ಆದರೆ ಸಹಕಾರಿ ಕೇಂದ್ರದಲ್ಲಿ ಎತ್ತರಕ್ಕೆ ಬೆಳೆಯಲು ಇರುವ ಅವಕಾಶವನ್ನು ಸೂಕ್ತ ರೀತಿಯಲ್ಲಿ ಕಲ್ಪಿಸಿಕೊಂಡಲ್ಲಿ, ಜೀವನ ನಿರ್ವಹಣೆಗೆ ಉತ್ತಮ ಅಡಿಪಾಯವಾಗಲಿದೆ ಎಂದು ಹೇಳಿದರು.
ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಶ್ರೀನಿವಾಸ್, ಎಂ.ಬಿ.ಮಂಜೇಗೌಡ, ಅಬ್ದುಲ್ ಮುಜೀಬ್, ಸಹಕಾರ ಸಂಘಗಳ ಉಪ ನಿಬಂಧಕ ಡಾ.ಜಿ.ಉಮೇಶ್, ಸಹಕಾರ ಶಿಕ್ಷಣಾಧಿಕಾರಿ ಡಿ.ಈರಯ್ಯ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.