ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ


Team Udayavani, Jun 13, 2017, 1:14 PM IST

mys1.jpg

ಮೈಸೂರು: ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನ ಮಾಡುವ ಮೂಲಕ ರಾಜ್ಯವನ್ನು ಬಾಲ ಕಾರ್ಮಿಕ ಮುಕ್ತ ರಾಜ್ಯ ಎಂದು ಘೋಷಿಸಲು ಸರ್ಕಾರದೊಂದಿಗೆ ಸಾರ್ವಜನಿಕರು ಕೂಡ ಕೈಜೋಡಿಸಬೇಕು ಎಂದು ಮೈಸೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ. ಜೋಶಿ ಹೇಳಿದರು.

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳಿದಿದೆ. 14 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊ ಳ್ಳುವುದು ಅಪರಾಧ ಎಂದು ತಿಳಿದಿದ್ದರೂ ಸಹ ಭಾರತದಲ್ಲಿ ಒಂದು ಸಮೀಕ್ಷೆಯ ಪ್ರಕಾರ 1.25 ಕೋಟಿ ಬಾಲಕಾರ್ಮಿಕರಿದ್ದಾರೆ. ಬಾಲಕಾರ್ಮಿಕ ಪದ್ಧತಿಗೆ  ಮನುಷ್ಯನು ಅತಿ ಹೆಚ್ಚು ಹಣಗಳಿಸಬೇಕು ಎಂಬ ದುರಾಸೆಯೇ ಮುಖ್ಯ ಕಾರಣ.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನವಾಗಬೇಕಾದರೆ ಮಕ್ಕಳಿಗೆ ಕಡಿಮೆ ಹಣ ನೀಡಿ ಕೆಲಸ ಮಾಡಿಸಿಕೊಳ್ಳಬಹುದು ಎಂಬ ಮನೋಭಾವನೆ ದೂರವಾಗಬೇಕು ಎಂದರು. ಸರ್ಕಾರ ಬಡತನ ನಿರ್ಮೂಲನಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ. ಮಕ್ಕಳನ್ನು ಬಾಲಕಾರ್ಮಿ ಕರಾಗಿ ಮಾಡಬೇಡಿ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಿ.ರಂದೀಪ್‌ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಆಚರಣೆ ಕಂಡುಬಂದರೆ ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ದೂರು ದಾಖಲಿಸಿ. ಮಕ್ಕಳು ದೇಶದ ಅಮೂಲ್ಯ ಆಸ್ತಿ ಇವರನ್ನು ಸತಜೆಗಳನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದರೆ ಅದನ್ನು ವಿರೋಧಿಸಿ ದೂರು ದಾಖಲಿಸಿ. ಜಿಲ್ಲಾಡಳಿತ ನಿಮ್ಮ ಜೊತೆಯಲ್ಲಿದೆ ಎಂದರು.

ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡಲು ಆರ್‌ಟಿಇ ಯೋಜನೆ ಇದೆ. ಸರ್ಕಾರದ ಹಲವಾರು ವಸತಿಶಾಲೆಗಳು ಹಾಗೂ ಶಾಲೆಗಳು ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಜಿಲ್ಲಾದ್ಯಂತ ನೋಂದಣಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ.ರಾಧ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರಭಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋಮಶೇಖರ್‌, ಡಾನ್‌ ಬಾಸ್ಕೋ ಮಕ್ಕಳಾಲಯದ ನಿರ್ದೇಶಕ ಫಾ.ಫ್ರಾನ್ಸಿಸ್‌ ಜಾನ್‌ ಇತರರು ಇದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.