ಬಾಲ್ಯವಿವಾಹ ತಡೆಗೆ ಸಹಕರಿಸಿ
Team Udayavani, Sep 18, 2018, 11:28 AM IST
ಹುಣಸೂರು: ಹೆಣ್ಣು ಮಕ್ಕಳ ಭವಿಷ್ಯಕ್ಕೆ ಎರವಾಗಲಿರುವ ಬಾಲ್ಯ ವಿವಾಹ ಕಾನೂನು ವಿರೋಧಿಯಾಗಿದ್ದು, ಸರ್ವರೂ ವಿರೋಧಿಸಬೇಕು ಹಾಗೂ ತಡೆಗಟ್ಟಬೇಕೆಂದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ತಾಲೊಕು ಯೋಜನಾಧಿಕಾರಿ ಯಶೋದಾ ಶೆಟ್ಟಿ ಮನವಿ ಮಾಡಿದರು.
ತಾಲೂಕಿನ ಯಶೋದರಪುರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಸೃಜನಶೀಲ ಯೋಜನೆಯಡಿ ಬಾಲ್ಯ ವಿವಾಹ ತಡೆಗಟ್ಟುವ ಕುರಿತ ಮಹಿಳಾ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವ, ಆಟವಾಡುವ ಸಮಯದಲ್ಲಿ ವಿವಾಹ ಮಾಡಿದಲ್ಲಿ ಮದುವೆ, ಗಂಡ, ಮಕ್ಕಳೇನೆಂದು ಅರಿವಿಲ್ಲದೇ, ಗರ್ಭಕೋಶದ ತೊಂದರೆ, ರಕ್ತ ಹೀನತೆಯಿಂದ ಬಳಲುತ್ತಾರೆ.
ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಇಡೀ ಜೀವನ ಹಾಳು ಮಾಡಿಕೊಂಡು ಕುಟುಂಬಗಳು ಬೀದಿಗೆ ಬೀಳಲಿವೆ. ನಿಮ್ಮ ಊರುಗಳಲ್ಲಿ ಯಾರೇ ಬಾಲ್ಯ ವಿವಾಹ ನಡೆಸುತ್ತಿದ್ದಲ್ಲಿ ಅವರಿಗೆ ತಿಳಿ ಹೇಳಿ ಮದುವೆ ನಿಲ್ಲಿಸಬೇಕೆಂದು ಮನವಿ ಮಾಡಿದರು. ಶಿಕ್ಷಣ ಇಲಾಖೆಯ ಸೋಮಶೇಖರ್, ಹಾಡು ಮೂಲಕ ಬಾಲ್ಯ ವಿವಾಹದಿಂದಾಗುವ ಅನಾಹುತಗಳ ಬಗ್ಗೆ ಎಚ್ಚರಿಸಿದರಲ್ಲದೆ,
ಬಾಲ್ಯ ವಿವಾಹ ಮಾಡಿದ ಎರಡು ಕುಟುಂಬಗಳಷ್ಟೆ ಅಲ್ಲಾ, ಮದುವೆಯಲ್ಲಿ ಪಾಲ್ಗೊಳ್ಳುವ, ಊಟ ಮಾಡುವವರ ಮೇಲೆಯೂ ಪ್ರಕರಣ ದಾಖಲಾಗಲಿದೆ. ಒಂದು ವೇಳೆ ಬಾಲ್ಯ ವಿವಾಹ ನಡೆಯುವುದು ತಿಳಿದಲ್ಲಿ ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದಲ್ಲಿ ಮದುವೆ ನಿಲ್ಲಿಸಲು ಸಹಕಾರಿಯಾಗಲಿದೆ ಎಂದರು.
ಇದೇ ವೆೇಳೆ ಬಾಲ್ಯ ವಿವಾಹದಿಂದಾಗುವ ಅನಾಹುತಗಳ ಬಗ್ಗೆ ಎಚ್ಚರಿಸುವ ಬೀದಿ ನಾಟಕ ಪ್ರದರ್ಶಿಸಿದರು. ಗ್ರಾಮದ ಮುಖಂಡ ಪುಳ್ಳಯ್ಯ, ಜ್ಞಾನವಿಕಾಸ ತಾಲೂಕು ಸಮನ್ವಯಾಧಿಕಾರಿ ಗೀತಾ, ಮೇಲ್ವಿಚಾರಕರಾದ ರಾಧಾಕೃಷ್ಣಭಟ್, ಅಶ್ವಿನಿ ಮಾತನಾಡಿದರು. ಸೇವಾ ಪ್ರತಿನಿಧಿ ಮಂಜುಳಾ, ಒಕ್ಕೂಟದ ಅಧ್ಯಕ್ಷೆ ವಿಜಯಲಕ್ಷ್ಮೀ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Jalandhara Kannada Movie: ಜಲಂಧರ ಮೇಲೆ ಪ್ರಮೋದ್ ಕಣ್ಣು
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.