ಮೈತ್ರಿ ಧರ್ಮಕ್ಕೆ ವರಿಷ್ಠರ ಆದೇಶ ಪಾಲಿಸಿ
Team Udayavani, Apr 10, 2019, 3:00 AM IST
ಕೆ.ಆರ್.ನಗರ: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಆಗಿರುವ ಮೈತ್ರಿ ಪಕ್ಷದ ಕಾರ್ಯಕರ್ತರಿಗೆ ಇಷ್ಟವಿಲ್ಲದಿದ್ದರೂ ನಾವೆಲ್ಲಾ ವರಿಷ್ಠರ ಆದೇಶವನ್ನು ಪಾಲಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹೇಳಿದರು.
ಪಟ್ಟಣದ ನಾಮಧಾರಿಗೌಡ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ರಾಹುಲ್‌ಗಾಂಧಿ ಆಗಮನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪರಿಸ್ಥಿತಿ ತಿಳಿಯಾಗಿ ಉತ್ತಮ ಅವಕಾಶ ಸಿಗುವವರೆಗೂ ತಾಳ್ಮೆಯಿಂದ ಕಾಯಬೇಕು ಎಂದರು.
ಕೆ.ಆರ್.ನಗರಕ್ಕೆ ಏ.13ರಂದು ರಾಹುಲ್‌ಗಾಂಧಿ ಆಗಮಿಸಲಿದ್ದು, ಅಂದು ಸಂಜೆ 4 ಗಂಟೆಗೆ ಪಟ್ಟಣದ ಪುರಸಭಾ ಬಯಲು ರಂಗ ಮಂದಿರದಲ್ಲಿ ಮೈತ್ರಿ ಅಭ್ಯರ್ಥಿ ನಿಖೀಲ್ ಪರ ಮತ ಯಾಚಿಸಲಿದ್ದು, ಸಭೆಯನ್ನು ಯಶಸ್ವಿಗೊಳಿಸಲು ಸಹಕಾರ ನೀಡಬೇಕು ಎಂದು ಕೋರಿದರು.
ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿದ್ದರೂ ನಮ್ಮೂರಿಗೆ ಆಗಮಿಸುವ ರಾಹುಲ್‌ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೆ.ಆರ್.ನಗರ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಡಿ.ರವಿಶಂಕರ್ ಅವರನ್ನು ಶಾಸಕರನ್ನಾಗಿಸುವುದು ನಮ್ಮೆಲ್ಲರ ಏಕೈಕ ಗುರಿ ಎಂದರು.
ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಮಾತನಾಡಿ, ಈ ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವ ನಮಗೆ ಈಗ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ನಿಖೀಲ್‌ಗೆ ಮತ ಹಾಕಬೇಕೆಂದರೆ ಕಾರ್ಯಕರ್ತರಿಗೆ ನೋವಾಗುವುದು ಸಹಜ. ಆದರೆ, ವರಿಷ್ಠರ ಆದೇಶ ಪಾಲಿಸಬೇಕಿದೆ ಎಂದರು.
ರಾಹುಲ್ ಗಾಂಧಿ ಪ್ರಚಾರ ಸಮಾವೇಶದಲ್ಲಿ ಎಲ್ಲರೂ ಗೌರವಯುತವಾಗಿ ನಡೆದುಕೊಳ್ಳಬೇಕು. ಅಂದು ಏನಾದರೂ ಹೆಚ್ಚು ಕಡಿಮೆಯಾದರೆ ನನಗೆ ಮತ್ತು ಡಿ.ರವಿಶಂಕರ್‌ಗೆ ರಾಜಕೀಯವಾಗಿ ತೊಂದರೆಯಾಗಲಿದ್ದು, ಇದನ್ನು ಪ್ರತಿಯೊಬ್ಬರೂ ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದರು.
ಸಭೆಯಲ್ಲಿ ಕೆ.ಆರ್.ನಗರ ಕಾಂಗ್ರೆಸ್ ಉಸ್ತುವಾರಿ ಅಶ್ವಿನ್‌ಕುಮಾರ್ ರೈ, ಎಐಸಿಸಿ ವಕ್ತಾರೆ ಐಶ್ವರ್ಯ, ಜಿಪಂ ಸದಸ್ಯರಾದ ಡಿ.ರವಿಶಂಕರ್, ಅಚ್ಚುತಾನಂದ, ಮಾಜಿ ಸದಸ್ಯರಾದ ಜಿ.ಆರ್.ರಾಮೇಗೌಡ, ರಾಜಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್‌ಜಾಬೀರ್, ತಾಪಂ ಮಾಜಿ ಉಪಾಧ್ಯಕ್ಷ ಉಮೇಶ್,
ಸದಸ್ಯ ಜಿ.ಎಸ್.ಮಂಜುನಾಥ್, ಎಪಿಎಂಸಿ ನಿರ್ದೇಶಕ ಪ್ರಶಾಂತ್, ಹಿಂದುಳಿದ ವರ್ಗಗಳ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಚನಹಳ್ಳಿರಾಘು, ಮುಖಂಡರಾದ ಎಸ್.ಪಿ.ತಮ್ಮಯ್ಯ, ಎಲ್.ಪಿ.ರವಿಕುಮಾರ್, ಸಿ.ಪಿ.ರಮೇಶ್, ಪ್ರಕಾಶ್‌ಕುಮಾರ್, ಹೆಡತಲೆ ಮಂಜುನಾಥ್, ಜಿ.ಎಂ.ಹೇಮಂತ್, ಶ್ರೀನಿವಾಸ್, ಸಿ.ಕೆ.ಬಸವರಾಜು, ಕೋಳಿಪ್ರಕಾಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.