ವರುಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ


Team Udayavani, May 17, 2017, 12:21 PM IST

mys1.jpg

ಮೈಸೂರು: ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್‌ ಸರ್ಕಾರ ವರುಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ವರುಣ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ಧರಾಮಯ್ಯ ಹೇಳಿದರು.

ವರುಣ ಕ್ಷೇತ್ರದ ಆಲಂಬೂರು, ಆಲಂಬೂರು ಮಂಟಿ, ಮಲ್ಲುಪುರ, ಕಿರುಗುಂದ, ಸೋನಹಳ್ಳಿ, ಮಡಹಳ್ಳಿ, ಅಳಗಂಚಿ, ಅಳಗಂಚಿಪುರ ಗ್ರಾಮಗಳಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ಆಲಂಬೂರು ಗ್ರಾಮದ ರಸ್ತೆ ಅಭಿವೃದ್ಧಿಗೆ 1.15 ಕೋಟಿ ರೂ. ಬಿಡುಗಡೆಯಾಗಿ ಕೆಲಸ ಮುಗಿದಿದೆ. ಸಮುದಾಯ ಭವನಕ್ಕೆ 15 ಲಕ್ಷ ರೂ.ಬಿಡುಗಡೆಯಾಗಿದೆ, ಬಸವೇಶ್ವರ ದೇವಸ್ಥಾನಕ್ಕೆ 1.5 ಲಕ್ಷ ರೂ., ಗರಡಿಮನೆಗೆ 8 ಲಕ್ಷ ರೂ. ಬಿಡುಗಡೆಯಾಗಿದೆ. ಉಳಿದ ಕಾಮಗಾರಿಗಳನ್ನು ಮಾಡಿಕೊಡಲಾಗುವುದು ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಡೀ ರಾಜ್ಯದ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.

ಅನ್ನಭಾಗ್ಯ, ಕ್ಷೀರಭಾಗ್ಯ, ನೀರಾವರಿ ಯೋಜನೆಗಳು, ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಮೈತ್ರಿ, ಮನಸ್ವಿನಿ, ಕೃಷಿಭಾಗ್ಯ, ಬಡ್ಡಿರಹಿತಸಾಲ, ವಿದ್ಯಾಸಿರಿ, ಪರಿಶಿಷ್ಟಜಾತಿ ಪಂಗಡದವರ ಅಭಿವೃದ್ಧಿಗೆ 60 ಸಾವಿರ ಕೋಟಿ ಮೀಸಲು, ವಸತಿ ಶಾಲೆಗಳು, ವೈದ್ಯಕೀಯ ಕಾಲೇಜುಗಳು ಹೀಗೆ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮುಖ್ಯಮಂತ್ರಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಆಲಂಬೂರು ಹೊಸ ಬಡಾವಣೆಗೆ ವಿದ್ಯುತ್‌ ಕಂಬ ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ವರುಣ ಕ್ಷೇತ್ರದಲ್ಲಿ ಈಗಾಗಲೇ ಶೇ.90 ರಷ್ಟು ಅಭಿವೃದ್ಧಿ ಕಾಮಗಾರಿಗಳು ಮುಗಿದಿದ್ದು ಉಳಿದ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮಾಡಿಕೊಡಲಾಗುವುದು ಎಂದರು.

ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ.ಬಸವರಾಜು, ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್‌, ತಾಪಂ ಉಪಾಧ್ಯಕ್ಷ ಗೋವಿಂದರಾಜು, ಮಾಲೇಗೌಡ, ಕಲ್ಲಳ್ಳಿಬಾಬು, ಮರಳೂರು ಮಹೇಶ, ಧರ್ಮೇಂದ್ರ, ರಂಗಸ್ವಾಮಿ, ಗ್ರಾಪಂ ಅಧ್ಯಕ್ಷೆ ಜ್ಯೋತಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರೇವಣ್ಣ, ತಹಶೀಲ್ದಾರ್‌ ದಯಾನಂದ್‌, ಕಲಾವತಿ, ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

“ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.