![1-havy](https://www.udayavani.com/wp-content/uploads/2024/12/1-havy-415x277.jpg)
ಅರಸು ಭವನ ಕಾಮಗಾರಿ ಪೂರ್ಣಗೊಳಿಸಿ
Team Udayavani, Jul 29, 2020, 10:45 AM IST
![ಅರಸು ಭವನ ಕಾಮಗಾರಿ ಪೂರ್ಣಗೊಳಿಸಿ](https://www.udayavani.com/wp-content/uploads/2020/07/mysuru-tdy-2-2-620x372.jpg)
ಹುಣಸೂರು: ಸುಮಾರು 10 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ದೇವರಾಜ ಅರಸು ಭವನ ಕಾಮಗಾರಿಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಚ್.ಪಿ.ಮಂಜುನಾಥ್ ಸೂಚಿಸಿದರು.
ನಗರದಲ್ಲಿ ನಿರ್ಮಿಸುತ್ತಿರುವ ಅರಸು ಭವನದ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಅರಸರ ಶತಮಾನೋತ್ಸವದ ಸವಿನೆನಪಿಗಾಗಿ ಭವನ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಬಹುತೇಕ ಕಾಮಗಾರಿ ಮುಗಿದಿದ್ದು, ಕಳೆದ 2 ವರ್ಷಗಳಿಂದ ವೇದಿಕೆ ಹಾಗೂ ಪೀಠೊಪಕರಣಗಳ ಅಳವಡಿಕೆ ಬಾಕಿ ಉಳಿದಿದ್ದು, ಇದಕ್ಕಾಗಿ ಅರಸು ಜನ್ಮ ಶತಮಾನೋತ್ಸವ ಸಮಿತಿಯಲ್ಲಿರುವ 2.5 ಕೋಟಿ ರೂ ಹಣವನ್ನು ಬಳಸಿಕೊಳ್ಳಲು ಸಂಬಂಧಿಸಿದ ಇಲಾಖೆಯೊಂದಿಗೆ ವ್ಯವಹರಿಸಿದ್ದು, ಶೀಘ್ರ ಮಂಜೂರಾತಿ ದೊರೆಯಲಿದೆ ಎಂದರು.
ವಿವಿಧ ಕಚೇರಿಗಳು ಬರಲಿವೆ: ಮೈಸೂರಿನ ಕಲಾ ಮಂದಿರದ ಮಾದರಿಯಲ್ಲಿರುವ ಈ ಭವನದಕ್ಕೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ವಿವಿಧ ಸರಕಾರಿ ಇಲಾಖೆಗಳ ಕಚೇರಿಯನ್ನು ಸ್ಥಳಾಂತರಿಸಲಾಗುವುದು. ಅಲ್ಲದೆ, ತಾಲೂಕು ಪತ್ರಕರ್ತರ ಸಂಘದ ಕಚೇರಿಗೂ ಸ್ಥಳ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಬಿ.ಸಿ.ಎಂ ಅಧಿಕಾರಿ ಬಿಂದ್ಯಾರಿಗೆ ಸರ್ಕಾರದೊಂದಿಗೆ ವ್ಯವಹರಿಸಿ, ಬಾಕಿ ಉಳಿದಿರುವ ಅನುದಾನವನ್ನು ಬಿಡುಗಡೆ ನಂತರ ಭವನದ ಇತರೆ ಅಭಿವೃದ್ಧಿಗೆ ಮಂಜೂರು ಮಾಡಿಸಿಕೊಳ್ಳಬೇಕು. ಕಾಮಗಾರಿಯನ್ನು ಶೀಘ್ರದಲ್ಲಿಯೇ ಮುಗಿಸುವಂತೆ ನಿರ್ಮಿತಿ ಕೇಂದ್ರದ ಇಂಜಿನಿಯರ್ ರಕ್ಷಿತ್‌ರಿಗೆ ಸೂಚಿಸಿದರು.
ರಾಜ್ಯದಲ್ಲೇ ತಾಲೂಕು ಕೇಂದ್ರವೊಂದರಲ್ಲಿ ಇಂತಹ ಸುಂದರ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಚಾರ. ಇದರ ಉದ್ಘಾಟನೆ ನಂತರ ಸರ್ಕಾರಿ ಕಾರ್ಯಕ್ರಮಗಳು, ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾಗಿ ಮಾತ್ರ ಈ ಭವನವನ್ನು ಬಳಸಿಕೊಳ್ಳಲಾಗುವುದು ಎಂದರು. ತಾಲೂಕು ಬಿ.ಸಿ.ಎಂ ಅಧಿಕಾರಿ ಪ್ರೇಮಕುಮಾರ್, ನಗರಸಭಾ ಸದಸ್ಯರಾದ ಮಂಜು, ಮುಖಂಡರಾದ ರಾಘು, ಬಿಳಿಕೆರೆ ಮಧು, ವೆನ್ನಿ ಹಾಜರಿದ್ದರು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು](https://www.udayavani.com/wp-content/uploads/2024/12/bike-1-150x89.jpg)
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
![Darshan12](https://www.udayavani.com/wp-content/uploads/2024/12/Darshan12-150x90.jpg)
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
![pratap-Simha](https://www.udayavani.com/wp-content/uploads/2024/12/pratap-Simha-150x90.jpg)
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
![3-hunsur](https://www.udayavani.com/wp-content/uploads/2024/12/3-hunsur-150x90.jpg)
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
![V.Somanna](https://www.udayavani.com/wp-content/uploads/2024/12/V.Somanna-150x90.jpg)
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.