ಭದ್ರತೆ ಹಿನ್ನೆಲೆಯಲ್ಲಿ ಕಾಂಪೌಂಡ್ ಧ್ವಂಸ
Team Udayavani, Apr 28, 2018, 12:44 PM IST
ಪಿರಿಯಾಪಟ್ಟಣ: ಭದ್ರತೆಯ ಹಿತದೃಷ್ಟಿಯ ಹೆಸರಿನಲ್ಲಿ ಕಾಂಪೌಂಡ್ನ್ನು ಒಡೆದು ನಾಶಪಡಿಸುತ್ತಿದ್ದಾರೆಯೇ ವಿನಹ ಸರಿಪಡಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಟ್ಟಣದ ಕ್ರೀಡಾ ಆವರಣದಲ್ಲಿ ನಿರ್ಮಿಸಿರುವ ಕಾಂಪೌಂಡ್ ಗೋಡೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಾಯಕರು ಸಭೆ, ಸಮಾರಂಭಗಳಿಗೆ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆ ಹಿತದೃಷ್ಟಿಯಿಂದ ಕಾಂಪೌಂಡ್ ನಾಶಪಡಿಸಲಾಗುತ್ತಿದೆ ಎಂದು ದೂರಿದ್ದಾರೆ.
ಕೇಂದ್ರ ವಿಶೇಷ ಭದ್ರತಾ ತಂಡ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಕಾಂಗ್ರೆಸ್ ಪ್ರಚಾರಕ್ಕಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಕಾಂಪೌಂಡ್ ನಾಶಪಡಿಸಲಾಗಿದೆ.
ಕಳೆದ 2 ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಸಮಾರಂಭಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಸಹ ಇದೇ ಕಾಂಪೌಂಡ್ನ್ನು ಮತ್ತೂಂದು ಕಡೆ ನಾಶಪಡಿಸಲಾಗಿತ್ತು.
ಈಗಿನವರೆಗೂ ನಾಶಪಡಿಸಲಾದ ಕಾಂಪೌಂಡ್ನ್ನು ಸರಿಪಡಿಸದೆ ಹಾಗೇ ಉಳಿದಿದೆ. ಈಗಾಗಲೇ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮತ್ತೆ ಇದೇ ಕಾಂಪೌಂಡ್ನ್ನು ಒಡೆದು ನಾಶಪಡಿಸಲಾಗಿದೆ.
ಮುಂದಿನ ದಿನಗಳಲ್ಲಿ ಈ ಕಾಂಪೌಂಡ್ನ್ನು ನಾಶಪಡಿಸುತ್ತಾ ಹೋದರೆ ಕಾಂಪೌಂಡೇ ಇಲ್ಲದಂತಾಗುತ್ತದೆ. ಕಾರ್ಯಕ್ರಮ ಮುಗಿದ ನಂತರ ನಿಯಮಾನುಸಾರ ಕಾಂಪೌಂಡ್ನ್ನು ನಿರ್ಮಿಸಿ ಸಾರ್ವಜನಿಕರ ಆಸ್ತಿಯನ್ನು ಉಳಿಸಲು ಮುಂದಾಗಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.